“ಪ್ರತಿಭೆಗಳಿಗೆ ಪರಿಶ್ರಮದ ಮೆರುಗು ಅಗತ್ಯ’


Team Udayavani, Sep 26, 2017, 11:29 AM IST

Sharans-Music-hamsalekha.jpg

ಬೆಂಗಳೂರು: ಕಲಾ ಪ್ರಪಂಚಕ್ಕೆ ಕಾಲಿಡುವ ಹೊಸ ಪ್ರತಿಭೆಗಳು ಪರಿಶ್ರಮದ ಮೆರುಗಿನಿಂದ ತಮ್ಮನ್ನು ತಾವು ಅಭಿವೃದ್ಧಿಪಡಿಸಿಕೊಳ್ಳಬೇಕು. ಈ ಪ್ರಗತಿ ನಿರಂತರವಾಗಿ ಮುಂದುವರಿಯಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ಡಾ. ಹಂಸಲೇಖ ಸಲಹೆ ನೀಡಿದ್ದಾರೆ.

ಶರಣ್‌Õ ಮ್ಯೂಸಿಕ್‌ ಅಕಾಡೆಮಿ ವತಿಯಿಂದ ಇತ್ತೀಚೆಗೆ ಮಲ್ಲೇಶ್ವರದ ಎವಿಆರ್‌ ಪ್ರಿವ್ಯೂ ಥಿಯೇಟರ್‌ನಲ್ಲಿ “ಗೆಳೆತನ-ದೋಸ್ತಿ’ ಎಂಬ ಎರಡು ಕನ್ನಡ ಹಾಗೂ ಹಿಂದಿ ವಿಡಿಯೋ ಆಲ್ಬಮ್‌ಗಳ ಯೂಟ್ಯೂಬ್‌ ಅಂತರ್ಜಾಲ ಆವೃತ್ತಿ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದೆ ಸಂಗೀತ ಕಲೆಯನ್ನು ವ್ಯವಸ್ಥಿತವಾಗಿ, ಪ್ರಭಾವಶಾಲಿಯಾಗಿ ಜನರಿಗೆ ತಲುಪಿಸುವ ಚಟುವಟಿಕೆಗಳ ಬಗ್ಗೆ ಹೆಚ್ಚಾಗಿ ತಿಳಿದಿರಲಿಲ್ಲ. ಇಂದು ಪರಿಸ್ಥಿತಿ ಬದಲಾಗಿದೆ. ಒಂದು ಸಾಧಾರಣ ವಿಷಯವನ್ನೂ ಅತ್ಯಂತ ಸಮರ್ಥವಾಗಿ ಜನರ ಮುಂದೆ ಪ್ರಸ್ತುತಪಡಿಸುವ ಮಾಧ್ಯಮಗಳ ಸಂಖ್ಯೆಯೂ ಹೆಚ್ಚಾಗಿದೆ.

“ಪ್ರತಿಭಾವಂತ ಗಾಯಕ ರುಮಿತ್‌ ಎರಡೂ ಆಲ್ಬಮ್‌ಗಳಲ್ಲಿ ಚೆನ್ನಾಗಿ ಹಾಡಿದ್ದಾರೆ. ಅಭಿನಯವೂ ಹದವಾಗಿದೆ. ಅವರಿಗೆ ನನ್ನ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳಕಿಗೆ ತರುವ ಪಂಡಿತ್‌ ಶರಣ್‌ ಚೌಧರಿ ಅವರ ಕಾಳಜಿ ಪ್ರಶಂಸನೀಯ. ಅವರಂಥ ಗುರುಗಳ ಸಂಖ್ಯೆ ಹೆಚ್ಚಾಗಬೇಕು.

ಉತ್ತರ ಕರ್ನಾಟಕದ ಅನೇಕ ಹಿಂದೂಸ್ಥಾನಿ ಗಾಯಕರು ಬೆಂಗಳೂರಿಗೆ ಬರುತ್ತಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಶರಣ್‌Õ ಮ್ಯೂಸಿಕ್‌ ಅಕಾಡೆಮಿ ತನ್ನ ಬದ್ಧತೆ, ಪ್ರಾಮಾಣಿಕತೆ ಹಾಗೂ ಸಂಗೀತ ಪ್ರೀತಿಯಿಂದ ಇತರ ಸಂಗೀತ ಸಂಸ್ಥೆಗಳಿಗೆ ಮಾದರಿಯಾಗಿದೆ,’ ಎಂದರು. 

“ಗೆಳೆತನ-ದೋಸ್ತಿ ಆಲ್ಬನ್‌ನ ಹಾಡುಗಳನ್ನು www.youtube.comharansmusicacademy ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದು,’ ಎಂದು ಗಾಯಕ ರುಮಿತ್‌ ಕೆ. ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಪೊ›.ಬಿ.ಕೆ. ಕಣ್ಣೂರ, ರವಿ ಕಮಲಾಪುರಕರ್‌, ಹಿಂದೂಸ್ಥಾನಿ ಗಾಯಕರಾದ ಪಂ. ಬಸವರಾಜ ಮುಗಳಖೋಡ, ರಂಗಕರ್ಮಿ-ಸಾಹಿತಿ ಶ್ರೀ ಹರಿ ಧೂಪದ, ಗೀತ ರಚನಕಾರ ವಿಜಯ್‌ ವಿ., ನವೀನ್‌ ಚಂದ್ರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.