ಕಣ್ಣೀರು ತರಿಸುವ ಸರದಿ ಈರುಳ್ಳಿಯದ್ದು

Team Udayavani, Aug 14, 2017, 12:04 PM IST

onion.jpg

ಬೆಂಗಳೂರು: ಟೊಮೆಟೋ ಬೆಲೆ ಗಗನಕ್ಕೇರಿದ್ದು ಈಗ ಹಳೇ ಸುದ್ದಿ. ಇದೀಗ ಈರುಳ್ಳಿಯ ಸರದಿ. ಅಡುಗೆ ಮಾಡಲು ಕತ್ತರಿಸುವುದಕ್ಕೂ ಮೊದಲೇ ಖರೀದಿ ಮಾಡುವಾಗಲೇ ಈರುಳ್ಳಿಯು ಗ್ರಾಹಕರಲ್ಲಿ ಕಣ್ಣೀರು ತರಿಸಲು ಸಿದ್ಧವಾಗಿದೆ. ಹೌದು…ಮಾರುಕಟ್ಟೆ ತಜ್ಞರ ಪ್ರಕಾರ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳೊಳಗೆ ಪ್ರತಿ ಕೆಜಿ ಈರುಳ್ಳಿ ದರ ಸುಮಾರು 85ರಿಂದ 90 ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಕೇವಲ 9ರಿಂದ 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಈರುಳ್ಳಿ ಬಿತ್ತನೆಯಾಗಿದೆ. ಕಳೆದ ವರ್ಷದಲ್ಲಿ ಬಿತ್ತನೆ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಶೇ.10ರಷ್ಟು ಸಹ ಬಿತ್ತೆನೆಯಾಗಿಲ್ಲ ಎಂದು ತೋಟಗಾರಿಕೆ ಇಲಾಖೆ ಮಾಹಿತಿ ದೃಢಪಡಿಸಿದೆ. 

ಯಶವಂತಪುರ ಈರುಳ್ಳಿ ವರ್ತಕರ ಪ್ರಕಾರ ಬೆಂಗಳೂರಿಗೆ ಪ್ರತಿದಿನಕ್ಕೆ 3 ಸಾವಿರಕ್ಕೂ ಅಧಿಕ ಟನ್‌ ಈರುಳ್ಳಿ ಅಗತ್ಯವಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ಈರುಳ್ಳಿ ಪೂರೈಕೆ ಸಾಧ್ಯವಾಗುತ್ತಿಲ್ಲ. ವಿಜಯಪುರ, ಚಿತ್ರದುರ್ಗ, ಚಳ್ಳಕೆರೆ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಈರುಳ್ಳಿ ಬೆಳೆಯುವ ಜಿಲ್ಲೆಗಳಿಂದ ಸರಬರಾಜಾಗುತ್ತಿರುವ ಈರುಳ್ಳಿ ಪ್ರಮಾಣದಲ್ಲಿ ಶೇ.65ರಿಂದ 70ರಷ್ಟು ಕೊರತೆ ಕಂಡುಬಂದಿದೆ. 

ಮಹಾರಾಷ್ಟ್ರದಿಂದ ದಿನಕ್ಕೆ 100ರಿಂದ 110 (ಒಂದು ಲಾರಿಗೆ 20 ಟನ್‌) ಲಾರಿಗಳು, ವಿಜಯಪುರದಿಂದ 30 ಹಾಗೂ ಚಿತ್ರದುರ್ಗ, ಚಳ್ಳಕೆರೆಯಿಂದ ಕೇವಲ 10ರಿಂದ 15 ಲಾರಿಗಳು ಮಾತ್ರ ಯಶವಂತಪುರ ಈರುಳ್ಳಿ ಮಾರುಕಟ್ಟೆಗೆ ಬರುತ್ತಿವೆ. ಈ ಮೊದಲು ದಾವಣಗೆರೆ-ಚಿತ್ರದುರ್ಗದ ಮೂಲಕ ಸೀಜ‚ನ್‌ ವೇಳೆಯಲ್ಲಿ 400ರಿಂದ 500 ಲಾರಿಗಳಲ್ಲಿ ಈರುಳ್ಳಿ ಸರಬರಾಜಾಗುತ್ತಿತ್ತು.

ಈ ಬಾರಿ ಅದರ ಪ್ರಮಾಣದಲ್ಲಿ ಗಣನೀಯವಾಗಿ ಕುಸಿತವಾಗಲಿದ್ದು, ಕೇವಲ 100ರಿಂದ 150 ಲಾರಿಗಳಷ್ಟೇ ಈರುಳ್ಳಿ ಸರಬರಾಜಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದಕ್ಕೆ ಮುಖ್ಯ ಕಾರಣ ಮಳೆಯ ಕೊರತೆಯಿಂದ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುತ್ತಿದ್ದ ಈರುಳ್ಳಿ ಈ ಸಲ ನೂರಾರು ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿರುವುದು.

ಮಾರುಕಟ್ಟೆ ಬೆಲೆ
ಅತ್ಯುತ್ತಮ ದರ್ಜೆಯ ಈರುಳ್ಳಿಗೆ ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ 50 (ಚೀಲ) ಕೆಜಿಗೆ 1400ರಿಂದ 1500 ರೂ.ನಂತೆ ದರವಿದೆ. ದ್ವಿತೀಯ ದರ್ಜೆಯ ಈರುಳ್ಳಿಗೆ 1250ರಿಂದ 1300 ರೂ. ಹಾಗೂ ತೃತೀಯ ದರ್ಜೆ ಈರುಳ್ಳಿಗೆ 750ರಿಂದ 800 ರೂ.ಗೆ ದರ ನಿಗದಿ ಮಾಡಲಾಗಿದೆ. ದರ್ಜೆಗೆ ತಕ್ಕಂತೆ ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ ಕನಿಷ್ಠ 15 ಹಾಗೂ ಗರಿಷ್ಠ 30 ರೂ. ಬೆಲೆ ಇದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 25ರಿಂದ 35ರಂತೆ ಮಾರಾಟ ಮಾಡಲಾಗುತ್ತಿದೆ.

ಕೆಲವು ಕಡೆಗಳಲ್ಲಿ 100 ರೂ.ಗಳಿಗೆ ಮೂರು ಕೆಜಿ, ಹೆಬ್ಟಾಳ, ಜಯನಗರ, ಮಹಾಲಕ್ಷ್ಮೀಲೇಔಟ್‌, ಸುಂಕದ ಕಟ್ಟೆ, ಬೊಮ್ಮನಹಳ್ಳಿ, ಯಶವಂತಪುರ, ವಿಜಯನಗರ, ಕೆಂಗೇರಿ ಸೇರಿದಂತೆ ಹಲವೆಡೆ ನಾಲ್ಕು ಕೆ.ಜಿಗೆ 100 ರೂ.ಇದ್ದರೆ, ಅಂಗಡಿಗಳಲ್ಲಿ ಕೆಜಿಗೆ 27ರಿಂದ 29ರೂ.ಗೆ ಕೆಜಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ.

ಅಧಿಕ ಬೇಡಿಕೆ 
ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳ ಸಮಯದಲ್ಲಿ ಈರುಳ್ಳಿ ಖಾಲಿಯಾಗಲಿದೆ. ಆ ಹೊತ್ತಿಗೆ, ಈಗಾಗಲೇ ರಾಜ್ಯದೆಲ್ಲೆಡೆ ಬಿತ್ತನೆಯಾಗಿರುವ ಈರುಳ್ಳಿ ಫ‌ಸಲು ಮಾರುಕಟ್ಟೆ ಪ್ರವೇಶಿಸಲಿದೆ. ಇದರಿಂದಾಗಿ ಸ್ವಲ್ಪಮಟ್ಟಿಗೆ ಗ್ರಾಹಕರ ನಿರಾಳವಾಗುವ ಸಾಧ್ಯತೆ ಇದೆ. ಆದರೆ, ದಸರಾ, ದೀಪಾವಳಿ ಹಬ್ಬಗಳ ಸಡಗರ ಇರಲಿದ್ದು, ಈರಳ್ಳಿಗೂ ಅಧಿಕ ಬೇಡಿಕೆ ಇರಲಿದೆ. ಬಹುಶಃ ಆ ಸಂದರ್ಭದಲ್ಲಿ 18 ಸಾವಿರಕ್ಕೂ ಅಧಿಕ ಟನ್‌ ಈರುಳ್ಳಿ ಪ್ರತಿ ದಿನ ಬೇಕಾಗುತ್ತದೆ. 

ಅಕ್ಟೋಬರ್‌ ವೇಳೆ ಬೆಂಗಳೂರಿನಿಂದ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಪಶ್ಚಿಮ ಬಂಗಾಳ, ಇಂಡೋನೇಷಿಯಾ, ಮಲೇಷ್ಯಾ ಸೇರಿದಂತೆ ವಿವಿಧ ಕಡೆಗಳಿಗೆ ಈರುಳ್ಳಿ ರಫ್ತಾಗಲಿದೆ. ಈರುಳ್ಳಿ ಉತ್ಪಾದನೆ ಕಡಿಮೆ ಇರುವುದರ ಜತೆಗೆ ವಿವಿಧ ರಾಜ್ಯ, ದೇಶಗಳಿಗೆ ರಫ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಹಕನ ಜೇಬಿಗೆ ಕತ್ತರಿ ಬೀಳಲಿದೆ. 
ರಾಜ್ಯದ ಈರುಳ್ಳಿ ಬೆಳೆ ಮಾರುಕಟ್ಟೆ ಪ್ರವೇಶಿಸುವ ವರೆಗೂ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುತ್ತದೆ. ಬಹುಶಃ ಎರಡು ತಿಂಗಳಲ್ಲಿ 85ರಿಂದ 90 ರೂ.ಗಳಿಗೆ ತಲುಪಲಿದೆ ಎಂದು ಎಪಿಎಂಸಿ ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಮಳೆ ಕೊರತೆಯಿಂದ ಬಿತ್ತನೆಯಾಗಿಲ್ಲ. ಈಗಾಗಲೇ ಮಾರುಕಟ್ಟೆಗೆ ಪೂರೈಕೆಯಾಗುವ ಈರುಳ್ಳಿಯಲ್ಲಿ ಕುಂಠಿತವಾಗಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ತರಿಸಿಕೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಗಣೇಶ, ದಸರ, ದೀಪಾವಳಿ ಹಬ್ಬಗಳು ಇದ್ದು, ಬೇಡಿಕೆ ಹೆಚ್ಚಲಿದೆ. ಪೂರೈಕೆ ಕೇವಲ ಶೇ.25ರಿಂದ 30ರಷ್ಟಿದೆ. ಇದರಿಂದ ಮುಂದಿನ ತಿಂಗಳಲ್ಲಿ ಪ್ರತಿ ಕೆಜಿಗೆ 75ರಿಂದ 80 ರೂ.ತಲುಪುವ ನಿರೀಕ್ಷೆ ಇದೆ.
-ಶ್ರೀನಿವಾಸ್‌, ಮಾಲೀಕರು, ರಾಮಸ್ವಾಮಿ ಆ್ಯಂಡ್‌ ಕಂಪನಿ, ಎಪಿಎಂಸಿ, ಯಶವಂತಪುರ.

ದಿನಕ್ಕೊಂದು ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ. ಕೇಲವೇ ದಿನಗಳ ಹಿಂದೆ ಟೊಮೆಟೋ, ಈಗ ಈರುಳ್ಳಿ. ಬಡಕುಟುಂಬದವರ ಪಾಡು ಆ ದೇವರಿಗೆ ಪ್ರೀತಿ. ಸರ್ಕಾರ ಮುಂಜಾಗ್ರತೆ ವಹಿಸಿ, ಮಾರುಕಟ್ಟೆಯಲ್ಲಿ ಈರುಳ್ಳಿ ಸೇರಿದಂತೆ ಇತರ ತರಕಾರಿಗಳ ಬೆಲೆ ಏರಿಕೆಯಾಗದಂತೆ ಪರಿಹಾರೋಪಾಯ ಕಂಡುಕೊಳ್ಳಬೇಕು. ಗ್ರಾಹಕರ ಹಿತ ಕಾಯಬೇಕು.
-ರಾಘವೇಂದ್ರ ಭಟ್‌, ಗ್ರಾಹಕ

* ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.