ನಬಾರ್ಡ್‌ ಧೋರಣೆಯಿಂದ ರೈತರ ಸಂಕಷ್ಟ


Team Udayavani, Jun 30, 2018, 11:54 AM IST

blore-5.jpg

ಬೆಂಗಳೂರು: ಒಂದು ಕೊಳವೆಬಾವಿ ಕೊರೆಯಲು ತಗಲುವ ಸರಾಸರಿ ವೆಚ್ಚ ಎರಡು ಲಕ್ಷ ರೂ. ಇದ್ದರೆ ಅದಕ್ಕಾಗಿ ನಬಾರ್ಡ್‌ನಿಂದ ದೊರೆಯುವ ಸಾಲ ಕೇವಲ 36 ಸಾವಿರ ರೂ. ಈ ಧೋರಣೆ ರೈತರ ಆರ್ಥಿಕ ಸಂಕಷ್ಟಕ್ಕೆ ಪ್ರಮುಖ ಕಾರಣವಾಗುತ್ತಿದೆ ಎಂದು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನಿರ್ದೇಶಕ ಪ್ರೊ.ಎಂ.ಜಿ.ಚಂದ್ರಕಾಂತ್‌
ಹೇಳಿದ್ದಾರೆ.

ನಗರದ ಭಾರತೀಯ ಸಾಂಖ್ಯೀಕ ಸಂಸ್ಥೆಯಲ್ಲಿ ಶುಕ್ರವಾರ ಪ್ರೊ.ಪಿ.ಸಿ.ಮಹಾಲಾನೋಬಿಸ್‌ ಅವರ ಜನ್ಮದಿನ ಹಾಗೂ ರಾಷ್ಟ್ರೀಯ ಸಾಂಖ್ಯೀಕ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಫ‌ಲಗೊಂಡ, ಸಂಭವನೀಯ ಮತ್ತು ಯಶಸ್ವಿ ಕೊಳವೆಬಾವಿಗಳು, ಕೇಸಿಂಗ್‌, ಯಂತ್ರ ಇದೆಲ್ಲದರ ಹೂಡಿಕೆ ಲೆಕ್ಕಹಾಕಿದರೆ ಒಂದು ಕೊಳವೆಬಾವಿ ಕೊರೆಯಲು ಕನಿಷ್ಠ 2.37 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಕೊಳವೆಬಾವಿ ಕೊರೆಯುವ ಉದ್ದೇಶಕ್ಕಾಗಿ ನಬಾರ್ಡ್‌ ನಿಗದಿಪಡಿಸಿರುವ ಗರಿಷ್ಠ ಸಾಲದ ಮೊತ್ತ 36 ಸಾವಿರ ರೂ. ಹೀಗಿರುವಾಗ ರೈತರು ಉಳಿದ ಎರಡು ಲಕ್ಷ ರೂ. ಎಲ್ಲಿಂದ ತರಬೇಕು? ಈ ಧೋರಣೆಯು ರೈತರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಕೋಲಾರ ಸೇರಿದಂತೆ ಬಹುತೇಕ ಭಾಗಗಳನ್ನು ಬರಡು ಪ್ರದೇಶಗಳೆಂದು ಘೋಷಿಸಲಾಗಿದೆ. ಹಾಗಾಗಿ, ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ಸಿಗುವುದೇ ಇಲ್ಲ. ಇನ್ನು ಸಾಲ ಮಾಡಿ ಕೊಳವೆಬಾವಿ ಕೊರೆದಾಗ, ನೀರು ಸಿಗದೆ ಇರುವ ಪರಿಸ್ಥಿತಿಯೂ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕೊಳವೆಬಾವಿಯಲ್ಲಿ ನೀರು ಸಿಗುವ ಸಂಭವನೀಯತೆ ಪ್ರಮಾಣ ಕೇವಲ 0.3ರಷ್ಟಿದೆ.

ಅಂದರೆ, ಮೂರು ಬೋರ್‌ವೆಲ್‌ ಕೊರೆದಾಗ, ಅದರಲ್ಲಿ ಒಂದು ಯಶಸ್ಸು ಆಗುತ್ತಿದೆ. ಆದ್ದರಿಂದ ಕೊಳವೆಬಾವಿ ಕೊರೆಯಲು ಖಾಸಗಿ ಸಾಲ ಅನಿವಾರ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಬಾರ್ಡ್‌ ಸಾಲದ ಮೊತ್ತವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. 

ಗುಣಮಟ್ಟ ಮುಖ್ಯ: ವಿತ್ತೀಯ ಕಾರ್ಯನೀತಿ ಸಂಸ್ಥೆ ನಿರ್ದೇಶಕ ಸುಜಿತ್‌ ಕುಮಾರ್‌ ಚೌಧರಿ ಮಾತನಾಡಿ, ಸರ್ಕಾರದ ಯಾವೊಂದು ಯೋಜನೆ ಅಥವಾ ನೀತಿ ಜಾರಿಯಾಗಲು ಮತ್ತು ಅದರ ಪರಿಣಾಮಗಳನ್ನು ನಿರ್ಧರಿಸುವಲ್ಲಿ ಸಾಂಖ್ಯೀಕ ವಿಭಾಗ ಬಹುದೊಡ್ಡ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಅಂಕಿ-ಅಂಶಗಳು ಗುಣಮಟ್ಟ ಬಹುಮುಖ್ಯ ಎಂದರು.
 
ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ.ರೋಹಿಣಿ ಎಂ.ಗೋಡೊಲೆ, ಭಾರತೀಯ ಸಾಂಖ್ಯೀಕ ಸಂಸ್ಥೆ ಮುಖ್ಯಸ್ಥ ಪ್ರೊ.ಟಿ.ಎಸ್‌.ಎಸ್‌.ಆರ್‌.ಕೆ. ರಾವ್‌, ಡಾ.ಎಂ. ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಪೋಸ್ಟ್‌ಮಾಸ್ಟರ್‌ ಜನರಲ್‌ ಡಾ.ಚಾರ್ಲ್ಸ್‌ ಲೋಬೊ ಅವರು, ಪ್ರೊ.ಪಿ.ಸಿ.ಮಹಾಲಾನೋಬಿಸ್‌ ಅವರ 125ನೇ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿದರು. 

ಟಾಪ್ ನ್ಯೂಸ್

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.