ಸ್ಟೀಲ್ ಬ್ರಿಡ್ಜ್ ಕೈಬಿಟ್ಟ ಬೆನ್ನೆಲ್ಲೇ ಸುರಂಗ ಮಾರ್ಗದ ಪ್ರಸ್ತಾಪ
Team Udayavani, Jun 9, 2017, 12:37 PM IST
ವಿಧಾನ ಪರಿಷತ್ತು: ಬಸವೇಶ್ವರ ವೃತ್ತದಿಂದ ಹೆಬ್ಟಾಳದವರೆಗೆ ಉದ್ದೇಶಿತ ಉಕ್ಕಿನ ಸೇತುವೆ ನಿರ್ಮಾಣ ಮಾಡುವ ಯೋಜನೆಯನ್ನು ಸರ್ಕಾರ ಕೈಬಿಟ್ಟ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬಲ್ಗೇರಿಯಾದ ಕಂಪನಿಯೊಂದು ಸುರಂಗ ಮಾರ್ಗ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಕಾಂಗ್ರೆಸ್‌ನ ಕೆ.ಸಿ.ಕೊಂಡಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, “ಬಸವೇಶ್ವರ ವೃತ್ತದಿಂದ ಹೆಬ್ಟಾಳದವರೆಗೆ ಸುಗಮ ಸಂಚಾರಕ್ಕಾಗಿ ಉಕ್ಕಿನ ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಜನರ ವಿರೋಧ, ಎನ್‌ಜಿಟಿ ವಿಚಾರಣೆ ಇತರೆ ಕಾರಣಕ್ಕೆ ಯೋಜನೆ ಕೈಬಿಡಲಾಯಿತು. ನಗರದಲ್ಲಿ 1.20 ಕೋಟಿ ಜನರಿದ್ದು, 65 ಲಕ್ಷ ವಾಹನಗಳಿವೆ. ಹೀಗಾಗಿ ದಟ್ಟಣೆ ನಿವಾರಣೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕಿದೆ,’ ಎಂದು ಹೇಳಿದರು.
ಮರ ಕಡಿಯಲು ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಚರ್ಚೆ ನಡೆದಿದೆ. ಬಲ್ಗೇರಿಯಾದ ಸಂಸ್ಥೆಯೊಂದು ಪ್ರಸ್ತಾವ ಸಲ್ಲಿಸಿದ್ದು, ನಾಲ್ಕು ಪಥದ ಹೆದ್ದಾರಿ ಜತೆಗೆ ಎರಡು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಪ್ರತಿ ಕಿ.ಮೀ.ಗೆ 500 ಕೋಟಿ ರೂ. ವೆಚ್ಚವಾಗುವುದಾಗಿ ಅಂದಾಜಿಸಿದೆ. ಸದ್ಯ ಇದು ಪ್ರಾಥಮಿಕ ಹಂತದಲ್ಲಿದೆ. ಮುಂದಿನ ವಾರ ಸಂಸ್ಥೆಯು ಅಧ್ಯಯನ ವರದಿ ಸಲ್ಲಿಸಲಿದ್ದು, ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.