ಬುಲೆಟ್ ಕದ್ದಿದ್ದ ಇಬ್ಬರು ಎಂಜಿನಿಯರ್‌ಗಳು: ಬಂಧನ
Team Udayavani, Aug 6, 2023, 12:04 PM IST
ಬೆಂಗಳೂರು: ಬುಲೆಟ್‌ಗಳನ್ನು ಕಳವು ಮಾಡು ತ್ತಿದ್ದ ಇಬ್ಬರು ಬಿಟೆಕ್ ಎಂಜಿನಿಯರ್‌ಗಳನ್ನು ಹನು ಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರು ಮೂಲದ ಹೇಮಾದ್ರಿ (23) ಮತ್ತು ಪವನ್(23) ಬಂಧಿತರು. ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ 2 ರಾಯಲ್ ಎನ್‌ಫೀಲ್ಡ್ ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಹನುಮಂತನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಮನೆ ಎದುರು ನಿಲುಗಡೆ ಮಾಡಿದ್ದ 2 ರಾಯಲ್ ಎನ್‌ಫೀಲ್ಡ್ ಬುಲೆಟ್‌ಗಳನ್ನು ಆರೋಪಿಗಳು ಕದ್ದಿದ್ದರು.
ಆಂಧ್ರಪ್ರದೇಶದಲ್ಲಿ ಬಿಟೆಕ್ ಪದವಿ ಪಡೆದಿದ್ದ ಆರೋಪಿಗಳು ಕೆಲಸಕ್ಕಾಗಿ ಹುಡುಕಾಡುತ್ತಿದ್ದರು. ಈ ಪೈಕಿ ಆರೋಪಿ ಹೇಮಾದ್ರಿ ಇತ್ತೀಚೆಗೆ ನಗರಕ್ಕೆ ಬಂದು ಉದ್ಯೋಗಕ್ಕಾಗಿ ಹುಡುಕಾಟ ನಡೆಸಿ, ಎಂಜಿನಿಯರಿಂಗ್‌ಗೆ ಸಂಬಂಧಿಸಿದ ಕೋರ್ಸ್ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಕೂಡ ಪಡೆಯುತ್ತಿದ್ದ. ಈ ಬಗ್ಗೆ ತನ್ನ ಸಹಪಾಠಿ ಪವನ್‌ಗೂ ವಿಚಾರ ತಿಳಿಸಿ ನಗರಕ್ಕೆ ಕರೆಸಿಕೊಂಡಿದ್ದಾನೆ. ಬಳಿ ಇಬ್ಬರು ಉದ್ಯೋಗಕ್ಕಾಗಿ ತಿಂಗಳುಗಟ್ಟಲೇ ಅಲೆದಿದ್ದಾರೆ. ಎಲ್ಲಿಯೂ ನೌಕರಿ ಸಿಗದ ಹಿನ್ನೆಲೆಯಲ್ಲಿ ಊರಿಗೆ ವಾಪಸ್ ಹೋಗಲು ನಿರ್ಧರಿಸಿದ್ದರು.
ಬುಲೆಟ್ ಕಳ್ಳತನ ಮಾಡಿ ಪರಾರಿ: ಊರಿಗೆ ಹೋಗುವ ಮುನ್ನ ನಗರದಲ್ಲಿ ರಾಯಲ್ ಎನ್‌ಫೀಲ್ಡ್ ಬುಲೆಟ್ ಕದಿಯಲು ಸಂಚು ರೂಪಿಸಿದ್ದರು. ಅದರಂತೆ ಹನುಮಂತನಗರ ಹಾಗೂ ಕೆಂಪೇಗೌಡ ನಗರದಲ್ಲಿ ಮನೆ ಎದುರು ನಿಲ್ಲಿಸಿದ್ದ 2 ಬುಲೆಟ್‌ಗಳನ್ನು ಕದ್ದು ಆಂಧ್ರಕ್ಕೆ ಪರಾರಿಯಾಗಿದ್ದರು. ಘಟನಾ ಸ್ಥಳದ ಸಿಸಿ ಕ್ಯಾಮೆರಾ, ಮೊಬೈಲ್‌ಕರೆಗಳ ಆಧಾರದ ಮೇಲೆ ಆಂಧ್ರಪ್ರದೇಶದ ನೆಲ್ಲೂರು ಬಳಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.