ನಿಷೇಧಿತ ಪ್ಲಾಸ್ಟಿಕ್‌ ಬಳಕೆ 86 ಲಕ್ಷ ರೂ. ದಂಡ ಸಂಗ್ರಹ

Team Udayavani, Sep 11, 2019, 3:07 AM IST

nishedita

ಬೆಂಗಳೂರು: ಬಿಬಿಎಂಪಿ ಪ್ಲಾಸ್ಟಿಕ್‌ ವಶಕ್ಕೆ ಪಡೆಯುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು ಕಳೆದ ಆರು ತಿಂಗಳಲ್ಲಿ ನಗರದ ವಿವಿಧೆಡೆ ದಾಳಿ ನಡೆಸಿ 32 ಸಾವಿರ ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ವಶಕ್ಕೆ ಪಡೆದಿದ್ದು, 86 ಲಕ್ಷ ರೂ. ದಂಡ ವಿಧಿಸಿದ್ದಾರೆ. 2016ರರಿಂದ ರಾಜ್ಯ ಸರ್ಕಾರವು ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟಿಕ್‌ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ.

ಇದರ ಹೊರತಾಗಿಯೂ ನಗರದ ಹಲವು ಭಾಗಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿರಂತರವಾಗಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಿಷೇಧಿತ ಪ್ಲಾಸ್ಟಿಕ್‌ ಬಳಸುವ ಹಾಗೂ ಮಾರಾಟ ಮಾಡುವವರ ಮೇಲೆ ಮೇಲೆ ದಾಳಿ ನಡೆಸಲಾಗಿತ್ತು. ಹೀಗಾಗಿ, ಪ್ರಸಕ್ತ ವರ್ಷದಲ್ಲಿ 32,118 ಕೆ.ಜಿ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಿಬಿಎಂಪಿ ಆರೋಗ್ಯಅಧಿಕಾರಿಗಳು ಕಳೆದ ಏಪ್ರಿಲ್‌ನಿಂದ ಆಗಸ್ಟ್‌ ಅಂತ್ಯದ ವರೆಗೆ 86,78,580 ರೂ. ದಂಡ ವಿಧಿಸಲಾಗಿದೆಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

4ವರ್ಷದಲ್ಲಿ 3.45 ಕೋಟಿ ರೂ ದಂಡ: ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಎಂಟು ವಲಯದಲ್ಲಿ ದಾಳಿ ನಡೆಸಿ ಈವರೆಗೆ 2.64 ಲಕ್ಷ ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ವಶಕ್ಕೆ ಪಡೆದುಕೊಂಡು ವ್ಯಾಪಾರಿಗಳಿಗೆ 3.45 ಕೋಟಿ ರೂ. ದಂಡ ವಿಧಿಸಿದ್ದಾರೆ. 2015-16ನೇ ಸಾಲಿನಲ್ಲಿ 16 ಸಾವಿರ ಕೆ,ಜಿ ಪ್ಲಾಸ್ಟಿಕ್‌ ವಶ, 29.03 ಲಕ್ಷ ರೂ. ದಂಡ.

2016-17ರಲ್ಲಿ 54 ಸಾವಿರ ಕೆ.ಜಿ ಪ್ಲಾಸ್ಟಿಕ್‌ ವಶ,1 ಕೋಟಿ ರೂ. ದಂಡ ವಸೂಲಿ. 2017-18ರಲ್ಲಿ 40 ಸಾವಿರ ಕೆ.ಜಿ. ಪ್ಲಾಸ್ಟಿಕ್‌ ವಶ, 55.93 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. 2018-19ರಲ್ಲಿ 1.12 ಲಕ್ಷ ಕೆ.ಜಿ. ಪ್ಲಾಸ್ಟಿಕ್‌ ವಶಕ್ಕೆ ಪಡೆಯಲಾಗಿದ್ದು, 73.90 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೇಯರ್‌ ಜೊತೆ ವಿದ್ಯಾರ್ಥಿಗಳ ಸಂವಾದ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೆ.16 ರಂದು ನಗರದಲ್ಲಿ “ಪ್ಲಾಸ್ಟಿಕ್‌ ಬಳಕೆ ನಿಷೇಧ’ ಕುರಿತಂತೆ ಮೇಯರ್‌ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ಕಂದಾಯ ಭವನದ 3ನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಏಪ್ರಿಲ್‌- ಆಗಸ್ಟ್‌ ವರೆಗೆ ಜಪ್ತಿಯಾದ ಪ್ಲಾಸ್ಟಿಕ್‌, ದಂಡ
ವಲಯ ಪ್ಲಾಸ್ಟಿಕ್‌ ಜಪ್ತಿ(ಕೆ.ಜಿ.) ದಂಡ (ರೂ.)
ಪಶ್ವಿ‌ಮ 2,877 17,47,300
ಉತ್ತರ 1,375 10,21,700
ದಕ್ಷಿಣ 4,174 11,59,650
ಬೊಮ್ಮನಹಳ್ಳಿ 3,403 16,40,800
ದಾಸರಹಳ್ಳಿ 3,135 4,58,400
ಆರ್‌.ಆರ್‌.ನಗರ 6,941 3,73,600
ಯಲಹಂಕ 3,841 6,00,230
ಮಹದೇವಪುರ 6,372 16,76,900
ಒಟ್ಟು 32,118 86,78,580

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.