ಲೈಂಗಿಕ ಕ್ರಿಯೆಗೆ ಪತಿಯಿಂದ ಬಲವಂತ ಎಂದು ಆರೋಪಿಸಿ ಮಹಿಳೆ ದೂರು
Team Udayavani, Sep 1, 2017, 11:51 AM IST
ಬೆಂಗಳೂರು: ಪತಿಯು ಲೈಂಗಿಕ ಕ್ರಿಯೆಗೆ ವಿಪರೀತ ಒತ್ತಾಯಿಸುತ್ತಿದ್ದು ಕಿರುಕುಳ ನೀಡುತ್ತಿದ್ದಾರೆ, ಇದಕ್ಕೆ ಪತಿಯ ಪೋಷಕರು ಬೆಂಬಲವಾಗಿ ನಿಂತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಈ ಸಂಬಂಧ ಮಲ್ಲೇಶಪಾಳ್ಯದ ನಿವಾಸಿ ಕಮಲ ( ಹೆಸರು ಬದಲಿಸಲಾಗಿದೆ) ಎಂಬುವವರು, ತನ್ನ ಪತಿ, ಆತನ ತಂದೆ, ತಾಯಿ, ಸಹೋದರಿಯ ವಿರುದ್ಧ ಭೈಯಪ್ಪನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ನಾಲ್ವರ ವಿರುದ್ಧವೂ ಸೆಕ್ಷನ್ 498(ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
2008ರಲ್ಲಿ ನಮ್ಮಿಬ್ಬರ ಮದುವೆಯಾಗಿದ್ದು, ಎರಡು ವರ್ಷಗಳ ನಂತರ ನನ್ನ ಪತಿ ನನ್ನ ವಿರುದ್ಧ ವಿನಾಕಾರಣ ಆರೋಪಗಳನ್ನು ಮಾಡುತ್ತಾ ದೈಹಿಕ ಹಾಗೂ ಮಾನಸಿಕ ಹಿಂಸೆ ನಡೆಸುತ್ತಿದ್ದಾರೆ. ಅಲ್ಲದೆ ಲೈಂಗಿಕ ಕ್ರಿಯೆಗೆ ವಿಪರೀತ ಒತ್ತಾಯ ಮಾಡುತ್ತಿರುತ್ತಾರೆ. ಸಹಕರಿಸದಿದ್ದರೆ ಕಿರುಕುಳ ನೀಡುತ್ತಾರೆ. ಅದೇ ರೀತಿ ಆತನ ಪೋಷಕರು ಹಾಗೂ ಸಹೋದರಿ ವಿವಿಧ ಕಾರಣಗಳಿಗೆ ಕಿರುಕುಳ ನೀಡುತ್ತಿದ್ದು, ಈ ಸಂಬಂಧ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ ಎಂದು ಪೊಲೀಸರು ತಿಳಿಸಿದರು.
ದೂರುದಾರ ಮಹಿಳೆ ಎರಡು ವರ್ಷಗಳ ಹಿಂದೆ ಗಂಡನಿಂದ ಬೇರೆಯಾಗಿ ತಾಯಿ ಮನೆಯಲ್ಲಿ ನೆಲೆಸಿದ್ದಾರೆ. ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಹಿಳೆಯ ಪತಿ ಕೂಡ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಬಳಿಕ ಈ ಪ್ರಕರಣವನ್ನು ಹೆಬ್ಟಾಳ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.