ಕನ್ನಡ ಬಂದರೂ ಮಾತಾಡಲ್ಲ

Team Udayavani, Oct 30, 2017, 11:42 AM IST

Boluvaru-Md-Kuyi.jpg

ಬೆಂಗಳೂರು: “ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವ ಶೇ. 95ರಷ್ಟು ಸಾಹಿತ್ಯಾಸಕ್ತರಿಗೆ ಕನ್ನಡ ಬಂದರೂ ಮಾತನಾಡುತ್ತಿಲ್ಲ’ ಎಂದು ಬೊಳುವಾರು ಮಹಮ್ಮದ್‌ ಕುಂಞ ಬೇಸರ ವ್ಯಕ್ತಪಡಿಸಿದರು.

ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಹಮ್ಮಿಕೊಂಡ ಎರಡು ದಿನಗಳ ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾನುವಾರ ನಗರದ ಪುಸ್ತಕ ಅಂಗಡಿಯೊಂದು ನೀಡುವ “ಆಟಾ ಗಲಾಟಾ-ಬೆಂಗಳೂರು ಸಾಹಿತ್ಯ ಉತ್ಸವ ಪುಸ್ತಕ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.

ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವ ಶೇ. 95ರಷ್ಟು ಸಾಹಿತ್ಯಾಸಕ್ತರಿಗೆ ಕನ್ನಡ ಬರುತ್ತದೆ. ಆದರೆ, ಯಾರೂ ಮಾತನಾಡುವುದಿಲ್ಲ. ಇದು ನನ್ನ ಆರೋಪ ಮಾಡುತ್ತಿಲ್ಲ. ನನ್ನ ಮೊಮ್ಮಗನೂ ಸೇರಿದಂತೆ ಕನ್ನಡ ಮಾತನಾಡಬೇಕು ಎಂದು ಹೇಳುತ್ತಿದ್ದೇನೆ. ಕನ್ನಡವನ್ನು ಮತ್ತಷ್ಟು ಚೆಂದಗೊಳಿಸಬೇಕು ಎಂದು ಮನವಿ ಮಾಡಿದರು. 

ಅದೇ ರೀತಿ, ಸಾಹಿತ್ಯ ಉತ್ಸವ ಅತ್ಯುತ್ತಮವಾಗಿ ಆಯೋಜನೆ ಮಾಡಲಾಗಿದೆ. ಆದರೆ, ಪಂಚತಾರಾ ಹೋಟೆಲ್‌ನಲ್ಲಿ ಇದನ್ನು ಆಯೋಜಿಸಿರುವುದರಿಂದ ಬಡ ಕನ್ನಡಿಗರಿಗೆ ಇಲ್ಲಿ ಭಾಗವಹಿಸಲು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಪಂಚತಾರಾ ಹೋಟೆಲ್‌ ಹೊರತುಪಡಿಸಿ, ಸಾಮಾನ್ಯರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾದ ಸ್ಥಳಗಳಲ್ಲಿ ಏರ್ಪಡಿಸಬೇಕು ಎಂದು ಕೋರಿದರು. 

ಇನ್ನು ಕನ್ನಡ ಪತ್ರಿಕೆಗಳಲ್ಲಿ ಕನ್ನಡ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರಚಾರ ಸಿಗುತ್ತಿದೆ. ಆದರೆ, ವಿಮರ್ಶೆಗೆ ಜಾಗ ಇಲ್ಲವಾಗಿದೆ. ಮೊದಲು ಪ್ರತಿ ವಾರ ವಿಮರ್ಶೆಗೆ ಜಾಗ ಮೀಸಲಿರುತ್ತಿತ್ತು. ಅದೇ ರೀತಿ, ಮುಂದಿನ ದಿನಗಳಲ್ಲೂ ವಾರಕ್ಕೊಮ್ಮೆ ಅರ್ಧಪುಟವಾದರೂ ಕತೆ, ಕವನ ಮತ್ತಿತರ ವಿಮರ್ಶೆಗೆ ಜಾಗ ಮೀಸಲಿಡಬೇಕು ಎಂದು ಮನವಿ ಮಾಡಿದರು. 

ಇದೇ ವೇಳೆ ಬಾಲಿವುಡ್‌ ನಟಿ ಟ್ವಿಂಕಲ್‌ ಖನ್ನಾ, ಅನೀಸ್‌ ಸಲೀಂ ಅವರಿಗೂ ಪ್ರಶಸಿ ಪ್ರದಾನ ಮಾಡಲಾಯಿತು. 

ಜಿರಳೆಯಷ್ಟೂ ಸುದ್ದಿ ಮಾಡ್ತಿಲ್ಲ; ಬೇಸರ
ಇಂದಿರಾ ಕ್ಯಾಂಟೀನ್‌ನಲ್ಲಿಯ ಪ್ಲೇಟ್‌ನಲ್ಲಿ ಬಿದ್ದ ಜಿರಳೆ ಮಾಡುವಷ್ಟು ಸುದ್ದಿಯನ್ನೂ ಕನ್ನಡ ಸಾಹಿತ್ಯ ಮಾಡುತ್ತಿಲ್ಲ ಎಂದು ಬೊಳುವಾರು ಮಹಮ್ಮದ್‌ ಕುಂಞ ಬೇಸರ ವ್ಯಕ್ತಪಡಿಸಿದರು. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠಗಳು, ಹೆಚ್ಚು ಸಾಹಿತ್ಯದ ಕಾರ್ಯಕ್ರಮಗಳು, ಅತಿ ಹೆಚ್ಚು ಕನ್ನಡ ಪುಸ್ತಕಗಳು ಪ್ರಕಟವಾಗಲು ಕನ್ನಡ ಪತ್ರಿಕೆಗಳ ಸಹಕಾರವೇ ಕಾರಣ. ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿದೆ. ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಪ್ರಚಾರ ಅವಶ್ಯಕತೆಯಿದೆ ಎಂದರು.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.