ಯುವಕನ ಮೇಲೆ ಹಲ್ಲೆ, ಠಾಣೆಯಲ್ಲಿ ಟಾರ್ಚರ್‌

Team Udayavani, Apr 23, 2019, 4:10 AM IST

yuvakana

ಬೆಂಗಳೂರು: ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದ ಆರೋಪ ಪ್ರಕರಣದಲ್ಲಿ ಡಿ.ಜೆ ಹಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ ಸಂತೋಷ್‌, ಪೊಲೀಸ್‌ ಪೇದೆ ಅಯ್ಯಪ್ಪರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಕಾವಲ್‌ಭೈರಸಂದ್ರ ನಿವಾಸಿ ಮೊಹಮ್ಮದ್‌ ತನ್ವೀರ್‌ (23) ಎಂಬ ಯುವಕನ ಮೇಲೆ ಏ.9ರಂದು ರಾತ್ರಿ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಸದ್ಯ, ಮೊಹಮದ್‌ ತನ್ವೀರ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೊಹಮದ್‌ ತನ್ವೀರ್‌ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪರನ್ನು ಅಮಾನತುಗೊಳಿಸಲಾಗಿದೆ. ಇಬ್ಬರ ವಿರುದ್ಧವೂ ಡಿ.ಜೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೂರ್ವವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ “ಉದಯವಾಣಿ’ಗೆ ಖಚಿತಪಡಿಸಿದರು.

ಪೊಲೀಸರ ವಿರುದ್ಧ ಎಫ್ಐಆರ್‌!: ತನ್ವೀರ್‌ ಮೇಲೆ ಗಂಭೀರ ಹಲ್ಲೆ ನಡೆಸಿದ ಆರೋಪ ಸಂಬಂಧ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಹಾಗೂ ಇತರೆ ಪೊಲೀಸರ ವಿರುದ್ಧ, ಐಪಿಸಿ 324 ( ಮಾರಕಾಸ್ತ್ರ ಬಳಸಿ ಹಲ್ಲೆ) 323 (ಹಲ್ಲೆ) 504, 149 ಕಲಂಗಳ ಅಡಿಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಆರೋಪಿಗಳಾದ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಯುವಕನ ಮೇಲೆ ಹಲ್ಲೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಹೀಗಾಗಿ ಅಮಾನತು ಮಾಡಲಾಗಿದೆ. ತನಿಖೆ ಮುಂದುವ ರಿದಿದ್ದು ಈ ಕೃತ್ಯದಲ್ಲಿ ಇತರೆ ಅಧಿಕಾರಿ ಅಥವಾ ಸಿಬ್ಬಂದಿ ಪಾತ್ರವೂ ಕಂಡು ಬಂದರೆ ಅವರು ಅಮಾನತಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಔಷಧಿ ತರಲು ಹೋದವನಿಗೆ ಹಿಡಿದು ಹೊಡೆದ ಪೊಲೀಸ್‌!: ಕಾವಲ್‌ ಭೈರಸಂದ್ರದ ರತನ್‌ ಸಿಂಗ್‌ ಲೇಔಟ್‌ ನಿವಾಸಿಯಾದ ಮೊಹಮದ್‌ ತನ್ವೀರ್‌ ಏ.9 ರಂದು ರಾತ್ರಿ ನೆರೆಮನೆಯ ನಿವಾಸಿಗೆ ಅಗತ್ಯವಿದ್ದ ಔಷಧಿ ತರುವ ಸಲುವಾಗಿ ಸ್ನೇಹಿತನ ಜತೆ ಬೈಕ್‌ನಲ್ಲಿ 1.45ರ ಸುಮಾರಿಗೆ ಸುಮಾರಿಗೆ ಹೊರಗಡೆ ಬಂದಿದ್ದರು.

ಈ ವೇಳೆ, ಗಸ್ತಿನಲ್ಲಿದ್ದ ಪೇದೆ ಅಯ್ಯಪ್ಪ ಅವರನ್ನು ತಡೆದಿದ್ದರು. ಬಳಿಕ ಕ್ಷುಲ್ಲಕ ಕಾರಣಕ್ಕೆ ಅಯ್ಯಪ್ಪ, ತನ್ವೀರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಹೊಯ್ಸಳ ವಾಹನದಲ್ಲಿ ಆಗಮಿಸಿದ ಪಿಎಸ್‌ಐ ಸಂತೋಷ್‌ ಹಾಗೂ ಇತರೆ ಸಿಬ್ಬಂದಿ ಕೂಡ ತನ್ವೀರ್‌ನನ್ನು ಠಾಣೆಗೆ ಕರೆದೊಯ್ದು ಲಾಠಿ ಹಾಗೂ ಪೈಪ್‌ನಿಂದ ಹಲ್ಲೆ ನಡೆಸಿದ್ದರು ಎಂಬ ಆರೋಪವಿದೆ.

ಕ್ರಮ ಜರುಗಿಸಲು ಆಯುಕ್ತರಿಗೆ ದೂರು: ಮಾರನೇ ದಿನ ತನ್ವೀರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಹಲವು ದಿನಗಳ ಬಳಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಪೊಲೀಸರು ನಡೆಸಿದ ಹಲ್ಲೆಯ ಕುರಿತು ಕ್ರಮ ಜರುಗಿಸುವಂತೆ ತನ್ವೀರ್‌ ಸಹೋದರ ಮೊಹಮದ್‌ ಮುಸಾವೀರ್‌ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಅವರಿಗೆ ದೂರು ನೀಡಿದ್ದರು.

ಈ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿಗೆ ಆಯುಕ್ತರು ಸೂಚನೆ ನೀಡಿದ್ದರು. ಡಿಸಿಪಿ ನೀಡಿದ ವರದಿ ಆಧರಿಸಿ ಇಬ್ಬರನ್ನೂ ಅಮಾನತುಗೊಳಿಸಿದ್ದು ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.