Arrested: ಮದುವೆ ಮನೆಗೆ ಎಂಟ್ರಿ ಕೊಟ್ಟು ಕಳವು ಮಾಡುತ್ತಿದ್ದವನ ಬಂಧನ
Team Udayavani, Jan 25, 2024, 10:37 AM IST
ಬೆಂಗಳೂರು: ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನೊಬ್ಬ ಮಾಗಡಿ ರಸ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ನಿಖಿಲ್ ಬಂಧಿತ ಆರೋಪಿ. ಆತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಯಾರದ್ದೊ ಮದುವೆ ಮನೆಗೆ ಟಿಪ್ ಟಾಪ್ ಆಗಿ ಯಾರಿಗೂ ಅನುಮಾನ ಬಾರದಂತೆ ಬೆಲೆ ಬಾಳುವ ಉಡುಗೆ ಜತೆಗೆ ಎಂಟ್ರಿ ಕೊಡುತ್ತಿದ್ದ. ವಿಶ್ ಮಾಡುವ ನೆಪದಲ್ಲಿ ವಧು ಅಥವಾ ವರರ ರೂಮ್ ಗೆ ತೆರಳುತ್ತಿದ್ದ. ವರ ಅಥವಾ ವಧುವಿನ ಸಂಬಂಧಿಗಳ ಸೋಗಿನಲ್ಲಿ ನೇರವಾಗಿ ಡ್ರೆಸಿಂಗ್ ರೂಮ್ ಗೆ ಹೋಗುತ್ತಿದ್ದ. ಸಮಯ ನೋಡಿಕೊಂಡು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ. ಈ ಹಿಂದೆ ಇದೇ ರೀತಿ ಕಳ್ಳತನ ನಡೆಸಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ.
ಮತ್ತೆ ಹಳೆ ಚಾಳಿ: ಪಶ್ಚಿಮ ಕಾರ್ಡ್ ರಸ್ತೆಯಲ್ಲಿರುವ ಜಲರಾಂ ಭವನ ಕಲ್ಯಾಣ ಮಂಟಪದಲ್ಲಿ 2023 ನ.28ರಂದು ರಾತ್ರಿ ವಿವಾಹ ಸಮಾರಂಭಕ್ಕೆ ಎಂಟ್ರಿ ಕೊಟ್ಟಿದ್ದ. ಜನಸಂದಣಿ ಇದ್ದ ಸಮಯದಲ್ಲಿ ಮಧುವಿನ ಕೋಣೆಗೆ ನುಗ್ಗಿ 1.81 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಲಪಟಾಯಿಸಿ ಮತ್ತೆ ಹಳೆ ಚಾಳಿ ಮುಂದುವರೆಸಿದ್ದ. ಮಾಗಡಿ ರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.