Theft case: 2 ಪ್ರತ್ಯೇಕ ಕಳವು ಪ್ರಕರಣ: ಬಂಧನ
Team Udayavani, Nov 16, 2023, 11:42 AM IST
ಬೆಂಗಳೂರು: ಪಶ್ಚಿಮ ವಿಭಾಗ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದ ನಿವಾಸಿ ಲಕ್ಷ್ಮಮ್ಮ (53) ಬಂಧಿತೆ.
ಆರೋಪಿಯಿಂದ 20.98 ಲಕ್ಷ ರೂ. ಮೌಲ್ಯದ ಮೌಲ್ಯದ 374 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮೀನಾಕ್ಷಿನಗರ ನಿವಾಸಿ ರಂಜಿತಾ ಎಂಬ ವರ ಮನೆಯಲ್ಲಿ ಲಕ್ಷ್ಮಮ್ಮ ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬಟ್ಟೆ ವ್ಯಾಪಾರಿ ರಂಜಿತಾ ಮನೆಯಲ್ಲಿ ಒಂದು ವರ್ಷದಿಂದ ಲಕ್ಷ್ಮಮ್ಮ ಮನೆ ಕೆಲಸ ಮಾಡುತ್ತಿದ್ದರು. ನ.6ರಂದು ರಂಜಿತಾ ತಮ್ಮ ಮಾವ ಲಕ್ಷ್ಮಣ್‌ಗೆ ಚಿನ್ನದ ಚೈನು ಕೊಡಲು ಕಬೋರ್ಡ್ ತೆರೆದಾಗ ಚಿನ್ನಾ ಭರಣಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಈ ನಡುವೆ ಲಕ್ಷ್ಮಮ್ಮ ಮನೆಯಲ್ಲಿ ಸಣ್ಣ-ಪುಟ್ಟ ಕಳ್ಳತನ ಮಾಡು ತ್ತಿದ್ದ ವಿಚಾರ ಗೊತ್ತಾಗಿ ನ.2ರಂದು ಆಕೆಯನ್ನು ಕೆಲಸದಿಂದ ತೆಗೆದಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮಮ್ಮ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲಕ್ಷ್ಮಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರತಿದಿನ ಒಂದೊಂದು ಚಿನ್ನಾಭರಣ ಕಳವು ಮಾಡುತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದರು.
ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಕಳ್ಳನ ಬಂಧನ: ಮತ್ತೂಂದು ಪ್ರಕರಣದಲ್ಲಿ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಹಾಗೂ ಮನೆಗಳಿಗೆ ನುಗ್ಗಿಕಳವು ಮಾಡು ತ್ತಿದ್ದ ಕಳ್ಳನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುಟ್ಟೇನಹಳ್ಳಿ ನಿವಾಸಿ ಕಾರ್ತಿಕ್ ಅಲಿಯಾಸ್ ಹಂದಿ ಅಲಿಯಾಸ್ ತುಕಡಿ (24) ಬಂಧಿತ. ಆರೋಪಿಯಿಂದ 2.85 ಲಕ್ಷ ರೂ. ಮೌಲ್ಯದ 51 ಗ್ರಾಂ ತೂಕದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. 4 ವರ್ಷಗಳ ಹಿಂದೆ ರಾಮನಗರ ಮೂಲದ ನಿಂಗಪ್ಪ ಅವರ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ವೃತ್ತಿಪರ ಕಳ್ಳನಾಗಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಮೋಜಿಗಾಗಿ ಹಣ ಹೊಂದಿಸಲು ದ್ವಿಚಕ್ರ ವಾಹನ ಕಳವು, ಮನೆಗಳವು ಮಾಡುತ್ತಿದ್ದ. ಜೈಲು ಸೇರಿ ಹೊರಬಂದ ಬಳಿಕವೂ ಮತ್ತೆ ಹಳೇ ಚಾಳಿ ಮುಂದುವರಿಸಿದ್ದ. ಈತನ ಬಂಧನದಿಂದ ಕೆಂಗೇರಿ ಹಾಗೂ ನಗರದ ಇತರೆ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.