Theft Case: ಮನೆ ಕಳವು ಮಾಡುತ್ತಿದ್ದ ನೇಪಾಳ ಮೂಲದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳ ಬಂಧನ

Team Udayavani, Oct 10, 2023, 10:59 AM IST

Theft Case: ಮನೆ ಕಳವು ಮಾಡುತ್ತಿದ್ದ ನೇಪಾಳ ಮೂಲದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳ ಬಂಧನ

ಬೆಂಗಳೂರು: ಹಗಲಿನಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ನೇಪಾಳ ಮೂಲದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಸೋಲದೇವನ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಿತ್ತಗನೂರು ನಿವಾಸಿಗಳಾದ ಮೋಹನ್‌ ಬಿ.ವಿಶ್ವಕರ್ಮ(29) ಮತ್ತು ಗೋರಖ್‌ ವಿಶ್ವಕರ್ಮ(38) ಬಂಧಿತರು.

ಆರೋಪಿಗಳಿಂದ 10.30 ಲಕ್ಷ ರೂ. ಮೌಲ್ಯದ 124 ಗ್ರಾಂ ಚಿನ್ನಾಭರಣ, 3 ಕೆ.ಜಿ. 200 ಗ್ರಾಂ ಬೆಳ್ಳಿ ವಸ್ತುಗಳು, 2 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಹೆಸರಘಟ್ಟದ ದಾಸೇನಹಳ್ಳಿ ಕ್ರಾಸ್‌ ನಿವಾಸಿ ಅಮಿತ್‌ ಭೀಮಯ್ಯ ಎಂಬವರ ಮನೆಯಲ್ಲಿ ಕಳವು ಮಾಡಿದ್ದರು. ಅಮಿತ್‌ ಭೀಮಯ್ಯ, ಕಳೆದ ಜುಲೈನಲ್ಲಿ ಮನೆಗೆ ಬೀಗ ಹಾಕಿಕೊಂಡು ಊರಿಗೆ ತೆರಳಿದ್ದರು. ಕೆಲ ದಿನಗಳ ಬಳಿಕ ವಾಪಾಸ್‌ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾ ಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದರು.

ಮುಂಬೈ ಟು ಬೆಂಗಳೂರು: ಆರೋಪಿಗಳ ಪೈಕಿ ಮೋಹನ್‌ ಕೆಲ ವರ್ಷಗಳ ಹಿಂದೆ ನೇಪಾಳದಿಂದ ಮುಂಬೈಗೆ ಬಂದು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿಯೇ ಮನೆ ಕಳವು ಮಾಡಿ ಜೈಲು ಸೇರಿದ್ದ. ನಂತರ ಜಾಮೀನು ಪಡೆದು ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡಿಕೊಂಡಿದ್ದ. ಗೋರಖ್‌ ಕೂಡ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಈತ ವಿದ್ಯಾರಣ್ಯಪುರ ಠಾಣೆ ಪೊಲೀಸರು ಮನೆ ಕಳವು ಕೇಸ್‌ನಲ್ಲಿ ಬಂಧಿಸಿದ್ದರು. ಜಾಮೀನು ಪಡೆದುಕೊಂಡು ಬಂದು ಮತ್ತೆ ಕೃತ್ಯ ಎಸಗಿದ್ದಾನೆ. ಇಬ್ಬರು ಆರೋಪಿಗಳು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ನಗರದ ವಿವಿಧೆಡೆ ಮನೆಗಳವು ಮಾಡುತ್ತಿದ್ದರು.

ಹಗಲಿನಲ್ಲಿ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಆ ಮನೆಯ ಬೀಗ ಮುರಿದು ನಗದು, ಆಭರಣಗಳನ್ನು ಕಳ್ಳತನ ಮಾಡುತ್ತಿದ್ದರು. ಆರೋಪಿಗಳ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಆರು ಮನೆ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.