Theft case: ಬೀಗ ಹಾಕಿದ್ದ ಮನೆಗಳ ಬಾಗಿಲು ಒಡೆದು ಕಳ್ಳತನ; ಮೂವರ ಸೆರೆ
Team Udayavani, Mar 27, 2024, 11:05 AM IST
ಬೆಂಗಳೂರು: ಬೀಗ ಹಾಕಿದ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರಹಳ್ಳಿ ನಿವಾಸಿ ರಘು(23), ಜೆ.ಪಿ.ನಗರದ ಜರಗನಹಳ್ಳಿ ನಿವಾಸಿ ದೀಪಕ್(23) ಮತ್ತು ತ್ಯಾಗರಾಜನಗರ ನಿವಾಸಿ ಮಿಥುನ್ ಅಲಿಯಾಸ್ ಮಿಲ್ಕಿ(23) ಬಂಧಿತರು. ಆರೋಪಿಗಳಿಂದ 16.60 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ, 2 ಕೆ.ಜಿ.ಬೆಳ್ಳಿ ವಸ್ತುಗಳು ಮತ್ತು 3 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಆರೋಪಿಗಳ ಪೈಕಿ ಇಬ್ಬರು ಬೈಕ್‌ನಲ್ಲಿ ಬೆಳಗ್ಗೆ ವೇಳೆ ಆಯ್ದ ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದರು. ಈ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಅಲ್ಲಿಂದಲೇ ಮತ್ತೂಬ್ಬನಿಗೆ ಲೋಕೇಷನ್ ಕಳುಹಿಸುತ್ತಿ ದ್ದರು. ಅದೇ ದಿನ ರಾತ್ರಿ ಆ ಮನೆ ಬಳಿ ಬಂದಾಗ ಮನೆ ಬೀಗ ಹಾಕಿದ್ದರೆ, ಬಾಗಿಲು ಒಡೆದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದರು. ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು. ಮೂವರ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಐದು ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.