ಆಗ ಟೀಕೆ- ಈಗ ಅನುಕರಣೆ: ಬಿಎಸ್ವೈ
Team Udayavani, Apr 3, 2019, 3:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಯೋಜನೆ ಹಾಗೂ ಅಭಿವೃದ್ಧಿ ಮಾದರಿಗೆ ಹೆದರಿದ ಕಾಂಗ್ರೆಸ್ ರೈತರಿಗೆ ಪೊಳ್ಳು ಭರವಸೆ ನೀಡಿ ಚುನಾವಣೆ ಸಂದರ್ಭದಲ್ಲಿ ಜನರ ದಾರಿ ತಪ್ಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ದೇಶದಲ್ಲಿ 55 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದರೂ ಕಾಂಗ್ರೆಸ್ ನಾಯಕರಿಗೆ ರೈತರು ನೆನಪಾಗಲಿಲ್ಲ. ಮೋದಿಯವರು ಸಣ್ಣ ಹಿಡುವಳಿದಾರರಿಗೆ ವಾರ್ಷಿಕ 6000 ರೂ. ನೆರವು ಘೋಷಿಸಿದ ಬಳಿಕ ಗಾಬರಿಗೊಂಡಿದ್ದಾರೆ.
ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ಛತ್ತೀಸ್ಗಡದಲ್ಲಿ ಈವರೆಗೆ ರೈತರ ಸಾಲ ಮನ್ನಾ ಆಗಿಲ್ಲ. ಹಾಗಿದ್ದರೂ ಸಾಲ ಮುಕ್ತಿ ಎಂಬ ಸುಳ್ಳು ಭರವಸೆ ನೀಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಈ ಹಿಂದೆ 2009ರಲ್ಲಿ ನಾನು ಕೃಷಿ ಬಜೆಟ್ ಮಂಡಿಸಿದಾಗ ಕಾಂಗ್ರೆಸ್ಸಿಗರು ಟೀಕಿಸಿದ್ದರು.
ಆದರೆ ಈಗ ಕೃಷಿ ಬಜೆಟ್ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ರೈತರ ಬಗ್ಗೆ ಕಾಳಜಿ ತೋರುತ್ತಿರುವ ಕಾಂಗ್ರೆಸ್ ಸ್ವಾಮಿನಾಥನ್ ವರದಿಯನ್ನು ಏಕೆ ಜಾರಿಗೊಳಿಸಿಲ್ಲ. 17 ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.