ಉಪ್ಪುನೀರು ಶುದ್ಧೀಕರಣ ಕೇಂದ್ರಕ್ಕೆ ತಾತ್ವಿಕ ಒಪ್ಪಿಗೆ
Team Udayavani, Mar 20, 2018, 6:10 AM IST
ಬೆಂಗಳೂರು: ಮಂಗಳೂರಿನಲ್ಲಿ ಸಮುದ್ರದ ಉಪ್ಪುನೀರು ಶುದ್ಧೀಕರಿಸುವ ಘಟಕ ಆರಂಭಿಸುವ ಯೋಜನೆಗೆ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಂತೆ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸುಮಾರು 806 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ವರದಿಗೆ ಸಂಪುಟ ಒಪ್ಪಿಗೆ ನೀಡಿದೆ. ಇನ್ನು ಮುಂದೆ ಸಮಗ್ರ ಯೋಜನಾ ವರದಿ ತಯಾರಿಸಬೇಕಾಗಿದ್ದು, ವರದಿ ತಯಾರಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮುದ್ರದ ಉಪ್ಪುನೀರನ್ನು ಶುದ್ಧೀಕರಿಸಿ ಅದನ್ನು ಪೈಪ್‌ಲೈನ್ ಮೂಲಕ ಬೆಂಗಳೂರಿಗೆ ತರುವ ಬಗ್ಗೆ ಈ ಹಿಂದೆ ಚರ್ಚಿಸಲಾಗಿತ್ತು. ಅದರಂತೆ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಈ ಯೋಜನೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ರೂಪುರೇಷೆಗಳು ಸಿದ್ಧವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.