Stray dogs: ನಗರದಲ್ಲಿ 2.79 ಲಕ್ಷಕ್ಕೂ ಹೆಚ್ಚು ಬೀದಿನಾಯಿ
Team Udayavani, Oct 5, 2023, 10:18 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 8 ವಲಯ ಗಳಲ್ಲಿ 2,79,335 ಬೀದಿ ನಾಯಿಗಳಿರುವುದು 12 ದಿನಗಳಸಮೀಕ್ಷೆಯಲ್ಲಿ ಸಮೀಕ್ಷೆಯಲ್ಲಿ ಪತ್ತೆಯಾಗಿದೆ. ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಪಾಲಿಕೆಯ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಬುಧವಾರ ವರದಿ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿ, ಬಿಬಿಎಂಪಿ ವ್ಯಾಪ್ತಿ 8 ವಲಯಗಳಲ್ಲಿ ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕರ್ಯಕ್ರಮದ ಯಶಸ್ವಿ ಅನುಷ್ಟಾನದ ಬಗ್ಗೆ ವಸ್ತುನಿಷ್ಠ ಮಾಹಿತಿ ಪಡೆಯಲು ಹಾಗೂ ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು ಎನ್‌ಎಪಿಆರ್‌ಇ ಶಿಫಾರಸು ಮಾಡಿರುವ ಸೈಟ್-ರೀ-ಸೈಟ್ ವಿಧಾನವನ್ನು ಅಳವಡಿಸಿಕೊಂಡು ಬೀದಿನಾಯಿಗಳ ಸಮೀಕ್ಷೆಯನ್ನು ಜೂನ್ 11 ರಿಂದ ಅ.2ರವರೆಗೆ ಕೈಗೊಳ್ಳಲಾಗಿದೆ ಎಂದರು.
ಐಸಿಎಆರ್-ಎನ್‌ಐವಿಇಡಿಐ, ಡಬ್ಲೂವಿಎಸ್, ಪ್ರಿನಿಪಾಲ್ ಸೈಂಟಿಸ್ಟ್ ಡಾ.ಕೆ.ಪಿ.ಸುರೇಶ್ ಸಂಸ್ಥೆ, ಬಿಬಿಎಂಪಿ ಪಶುಪಾಲನಾ ವಿಭಾಗದ ಅಧಿಕಾರಿಗಳು-ಸಿಬ್ಬಂದಿ, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿಯವರ (ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರು) 50 ತಂಡಗಳ ಸಹಯೋಗದೊಂದಿಗೆ 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
ಶೇ.71.85 ನಾಯಿಗಳಿಗೆ ಸಂತಾನ ಶಕ್ತಿಹರಣ ಚಿಕಿತ್ಸೆ: ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳು ಕಂಡು ಬಂದಿರುತ್ತದೆ. 2019ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇರುವುದಾಗಿ, ಶೇ.51.16 ಬೀದಿನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ ಚಿಕಿತ್ಸೆಯಾಗಿರುವುದಾಗಿ ಅಂದಾಜಿಸಲಾಗಿತ್ತು. ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಶೇ.71.85 ಬೀದಿನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ ಚಿಕಿತ್ಸೆಯಾಗಿದ್ದು, ಶೇ.20 ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿದೆ. ಬೀದಿನಾಯಿ ಮರಿಗಳ ಸಂಖ್ಯೆ ಕಡಿಮೆಯಾಗಿದೆ. ಪ್ರಸ್ತುತ ಸಾಲಿನ ಸಮೀಕ್ಷೆ ವರದಿಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.10 ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.
ಬಿಬಿಎಂಪಿಯ 4 ವಿಭಾಗಗಳಾದ ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳನ್ನು 0.5 ಚ.ಕಿ.ಮೀ ವ್ಯಾಪ್ತಿಯ 6,850 ಮೈಕ್ರೋಜೋನ್‌ಗಳನ್ನಾಗಿ ವಿಂಗಡಿಸಲಾಗಿದೆ. ಅದರಲ್ಲಿ ಶೇ.20 ರ್‍ಯಾಂಡಂ ಸ್ಯಾಂಪಲ್‌ಗಳನ್ನು ಅಂದರೆ 1,360 ಮೈಕ್ರೋಜೋನ್‌ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್‌ವಾರು 50 ತಂಡಗಳ ಸಹಯೋಗದಲ್ಲಿ ನಿರ್ವಹಿಸಲಾಗಿದೆ ಎಂದರು.
ಐಸಿಎಆರ್- ಎನ್‌ಐವಿಇಡಿಐಯ ನಿರ್ದೇಶಕ ಡಾ.ಬಲದೇವ್ ರಾಜ್ ಗುಲಾಟಿ, ಐಸಿಎಆರ್- ಎನ್‌ಐವಿಇಡಿಐಯ ಪ್ರಿನಿಪಾಲ್ ಸೈಂಟಿಸ್ಟ್ ಡಾ.ಕೆ.ಪಿ.ಸುರೇಶ್, ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ರವಿಕುಮಾರ್ ಇತರರಿದ್ದರು.
ಬೀದಿ ನಾಯಿ ಸಂಖ್ಯೆ ಇಳಿಕೆ ಏಕೆ?: ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನಶಕ್ತಿಹರಣ ಶಸ್ತ್ರ ಚಿಕಿತ್ಸೆ ಕಾರ್ಯ ಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊ ಳಿಸಿರುವ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿರುವು ದರಿಂದ ಬೀದಿ ನಾಯಿಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ಬೀದಿನಾಯಿಗಳ ಸಮೀಕ್ಷೆ ಮುಂದಿನ ದಿನಗಳಲ್ಲಿ ಪಾಲಿಕೆ 8 ವಲಯಗಳಲ್ಲಿ/ವಾರ್ಡ್‌ಗಳಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ಅವುಗಳಿಗೆ ಸಂಬಂಧಿತ ಸಮಸ್ಯೆಗಳನ್ನು ಸಂದರ್ಭ ಕ್ಕನುಗುಣವಾಗಿ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆ ನೀತಿಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಬಿಬಿಎಂಪಿ\ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.