ರಾಜ್ಯದಲ್ಲಿ ಇನ್ನೂ 14 ತಾಲೂಕು ಬರಪೀಡಿತ
Team Udayavani, Oct 16, 2018, 6:15 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಹದಿನಾಲ್ಕು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಿಂದಾಗಿ ಈಗಾಗಲೇ ಘೋಷಿತವಾಗಿರುವ 86 ತಾಲೂಕುಗಳು ಸೇರಿ ಒಟ್ಟು 100 ತಾಲೂಕುಗಳು ಬರಪೀಡಿತವಾಗಿವೆ.
ಆನೇಕಲ್,ದೇವನಹಳ್ಳಿ, ದೊಡ್ಡಬಳ್ಳಾಪುರ,ತುರುವೇಕೆರೆ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ,ಜಗಳೂರು, ಪಾಂಡವಪುರ, ಔರಾದ್, ಬಸವಕಲ್ಯಾಣ, ಅಥಣಿ, ಬೀಳಗಿ ಮತ್ತು ಮುಧೋಳ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ.
ಕೇಂದ್ರ ಸರ್ಕಾರವು ಪ್ರಕಟಿಸಿರುವ 2016ರ ಬರ ಕೈಪಿಡಿ ಮತ್ತು ಪರಿಷ್ಕೃತ ಮಾರ್ಗಸೂಚಿಯಂತೆ ಈ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ತಾಲೂಕುಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಒದಗಿಸುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಮುಂತಾದ ಬರ ಪರಿಹಾರ ಕಾಮಗಾರಿ ಕೈಗೊಳ್ಳಲಾಗುವುದು. ಜತೆಗೆ ಬೆಳೆಹಾನಿ ಸಮೀಕ್ಷೆಗೂ ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.