ಜನರ ಸಮಸ್ಯೆಗೆ ಸ್ಪಂದಿಸಿದ ತೃಪ್ತಿಯಿದೆ
Team Udayavani, May 11, 2018, 11:56 AM IST
ಬೆಂಗಳೂರು: ಕೆ.ಆರ್.ಪುರ ಕಾಂಗ್ರೆಸ್ ಅಭ್ಯರ್ಥಿ ಬೈರತಿ ಬಸವರಾಜ್ ಗುರುವಾರ ಕ್ಷೇತ್ರದಲ್ಲಿ ಪಾದಯಾತ್ರೆ ಹಾಗೂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಗುರುವಾರ ಕಾಂಗ್ರೆಸ್ ಪಾಲಿಕೆ ಸದಸ್ಯರು ಹಾಗೂ ಮುಖಂಡರ ಜತೆಗೂಡಿ ಕ್ಷೇತ್ರದೆಲ್ಲೆಡೆ ಬಿರುಸಿನ ಪಾದಯಾತ್ರೆ ಮಾಡಿ ಮತ ನೀಡುವಂತೆ ಕೋರಿದರು.
ಕಳೆದ ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಜನರ ಸಮಸ್ಯೆಗೆ ಸ್ಪಂದಿಸಿರುವ ತೃಪ್ತಿಯಿದೆ. ನಿರಂತರವಾಗಿ ಜನರ ಸಂಪರ್ಕದಲ್ಲಿದ್ದು ಎಲ್ಲ ಸಮಸ್ಯೆಗಳನ್ನೂ ನಿವಾರಿಸಿದ್ದೇನೆ. ಮತ್ತೂಮ್ಮೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು , ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ. ಉದ್ಯಾನ ಅಭಿವೃದ್ಧಿ ಮಾಡಿದ್ದೇನೆ. ನಿಮ್ಮ ಸೇವೆಗೆ ಮತ್ತೂಮ್ಮೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.