ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ನಂಟು

Team Udayavani, Feb 23, 2020, 3:07 AM IST

hindu

ಬೆಂಗಳೂರು: ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ಹತ್ತಿರದ ನಂಟಿದೆ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅಂಕಿತ ಪ್ರಕಾಶನ ಶನಿವಾರ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೂ ಆಧ್ಯಾತ್ಮಿಕ ಚಿಂತನೆಗಳು ಮತ್ತು ಸೂಫಿ ಸಂತರ ಚಿಂತನೆಗಳು ಸಂವಾದಿಯಾಗಿವೆ. ಪೂರ್ವಾಗ್ರಹ ಪೀಡಿತರಾಗದೆ ಅಧ್ಯಯನದಲ್ಲಿ ತೊಡಗಿದರೆ, ಎಲ್ಲ ಧರ್ಮಗಳು ಪರಸ್ಪರ ಸಂವಾದ ನಡೆಸಿರುವುದನ್ನು ನಾವು ಕಾಣಬಹುದಾಗಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಫ‌ಕೀರ್‌ ಮುಹಮ್ಮದ್‌ ಕಟಾಡಿ ಮಾತನಾಡಿ, ಗ್ರಂಥಗಳನ್ನು ಓದುವುದರಿಂದ ಸೂಫಿ ಸಂತರಿಗೆ ಜ್ಞಾನ ಬಂದಿಲ್ಲ. ಅವರು ಸದಾ ಪ್ರಯಾಣದಲ್ಲಿದ್ದು, ಜನರ ಸಂಪರ್ಕದಲ್ಲಿ ನಡೆಸಿದ ಮಾತುಕತೆಯ ಅನುಭವದ ಜ್ಞಾನ ಪಡೆದಿದ್ದರು ಎಂದು ಹೇಳಿದರು.

ಸೂಫಿ ಸಂತರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಚರಿಸುತ್ತಿದ್ದರು. ಹೀಗಾಗಿ ಸೂಫಿ ಚಿಂತನೆಯು ಖುರಾನ್‌, ಬೈಬಲ್‌, ವೇದಗಳನ್ನು ಒಳಗೊಂಡಂತೆ ಆಯಾ ಪ್ರದೇಶಗಳ ಆಧ್ಯಾತ್ಮಿಕತೆಯನ್ನು ತನ್ನದಾಗಿಸಿಕೊಂಡು ವಿಶಿಷ್ಟವಾದ ರೀತಿಯಲ್ಲಿ ಹಾಗೂ ಸರಳವಾಗಿ ಆಧ್ಯಾತ್ಮಿಕ ಚಿಂತನೆಯನ್ನು ಪ್ರಸಾರ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

ಲೇಖಕಿ ವಿನಯಾ ಒಕ್ಕುಂದ ಮಾತನಾಡಿ, ಕವಯತ್ರಿ ಪ್ರತಿಭಾ ನಂದಕುಮಾರ್‌ ನಾಲ್ಕು ದಶಕಗಳಲ್ಲಿ ಬರೆದಿರುವ ಕಾವ್ಯವು, ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ವಿಷಯಗಳನ್ನು ಕಾವ್ಯ ರೂಪಕ್ಕೆ ಇಳಿಸಿದ್ದಾರೆ. ವರ್ತಮಾನದ ತಲ್ಲಣಗಳನ್ನು ಕಾವ್ಯದ ಮೂಲಕ ಓದುಗರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿ ದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಫ‌ಕೀರ್‌ ಮುಹಮ್ಮದ್‌ ಕಟ್ಟಾಡಿ ಅವರು ರಚಿಸಿದ “ಸೂಫಿ ಅಧ್ಯಾತ್ಮ ಚಿಂತನೆಗಳು’, ಚ.ಹ. ರಘುನಾಥ ಅವರ “ಜಾಮೂನು ಪದ್ಯಗಳು’ ಮಕ್ಕಳ ಕವನ, ಪ್ರತಿಭಾ ನಂದಕುಮಾರ್‌ ಅವರ “ಕೌಬಾಯ್ಸ ಮತ್ತು ಕಾಮ ಪುರಾಣ’ “ಪ್ರತಿಭಾ ಕಾವ್ಯ’ ಕವಿತೆಗಳು ಹಾಗೂ “ಕಾಗದದ ಸಾಕ್ಷಿ’ ವಿಡಿಯೋ ಆಲ್ಬಂ ಅನ್ನು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಬಿಡುಗಡೆಗೊಳಿಸಿದರು. ಪತ್ರಕರ್ತ ಎನ್‌.ಎ.ಎಂ.ಇಸ್ಮಾಯಿಲ್‌, ಪ್ರತಿಭಾ ನಂದಕುಮಾರ್‌, ಸೇರಿದಂತೆ ಹಲವರು ಉಪಸ್ಥಿತಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.