ಸಿಎಂ ವಿರುದ್ಧ ಸ್ಪರ್ಧಿಸೋ ಧೈರ್ಯ ಬಿಎಸ್‌ವೈಗಿಲ್ಲ
Team Udayavani, Apr 24, 2018, 3:50 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಧೈರ್ಯ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಬ್ಲಿಡ್ ಪ್ರಶರ್ ಹೆಚ್ಚಾಗಿದೆ. ಬಾದಾಮಿಯಲ್ಲಿ ನಿಂತು ರಕ್ತದೊತ್ತಡ ತಡೆಯುವ ಶಕ್ತಿ ಅವರಿಗಿಲ್ಲ ಎಂದು ವ್ಯಂಗ್ಯವಾಡಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಇಲ್ಲದೇ ಗ್ರಾಪಂ ಚುನಾವಣೆಯಲ್ಲಿ ಸೋತವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅದನ್ನು ನೋಡಿದರೆ, ಅವರ ಪಕ್ಷ ಅಭ್ಯರ್ಥಿಗಳಿಲ್ಲದೇ ಅಧೋಗತಿಗೆ ಇಳಿದಿದೆ ಎಂದರು. ವರುಣಾ ಕ್ಷೇತ್ರದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಅವರನ್ನು ಎದುರಿಸಲಾಗದೇ ಯಡಿಯೂರಪ್ಪ ಪುತ್ರ ವಿಜಯೇಂದ್ರ ಪಲಾಯನ ಮಾಡಿದ್ದಾರೆ.
2008 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿತ್ತು. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಬಾದಾಮಿ ಚಾಲುಕ್ಯರ ದೊರೆ ಎರಡನೇ ಪುಲಕೇಶಿ ಹರ್ಷವರ್ಧನನ್ನು ಸೋಲಿಸಿದಂತೆ ಸಿದ್ದರಾಮಯ್ಯ ಮೋದಿಯವರನ್ನು ಓಡಿಸುತ್ತಾರೆ ಎಂದು ಹೇಳಿದರು.
ಈ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಡೆಯುತ್ತಿದೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಎನ್ನುವುದು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಜೆಡಿಎಸ್‌ಗೆ ಅಸ್ತಿತ್ವವೇ ಇಲ್ಲ. ಹೀಗಾಗಿ ಅವರು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಬಾರಿಯೂ ಮತ್ತೆ ಕಾಂಗ್ರೆಸ್ 130 ಕ್ಕೂ ಹೆಚ್ಚು ಸ್ಥಾನ ಪಡೆದು ಸ್ವಂತ ಬಲದ ಮೇಲೆಯೇ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.