ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಇಲ್ಲ ಒಂದೂ ಬಸ್ ತಂಗುದಾಣ
Team Udayavani, Jun 23, 2017, 12:17 PM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣಕ್ಕೆ ಬಸ್ ಸೌಲಭ್ಯವಿದೆಯಾದರೂ, ಒಂದೇ ಒಂದು ತಂಗುದಾಣವೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು, ಉಪನ್ಯಾಸಕರು, ನಾಗರಿಕರಿಗೆ ಬಿಸಿಲು, ಮಳೆಯಲ್ಲೇ ಬಸ್ ಕಾಯಬೇಕಾದ ಸ್ಥಿತಿ ಇದೆ.
ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿ ಅನುಕೂಲಕ್ಕಾಗಿ ಈ ಹಿಂದೆ ತನ್ನದೇ ಬಸ್ ಸೇವೆ ಒದಗಿಸಿತ್ತು. ಆರ್ಥಿಕ ಹೊರೆ ಹೆಚ್ಚಾದ್ದರಿಂದ ವರ್ಷಗಳ ಹಿಂದೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಸದ್ಯ ಬಿಎಂಟಿಸಿ ಬಸ್ ಹೊರತುಪಡಿಸಿ ಬೇರ್ಯಾವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಇಲ್ಲಿಲ್ಲ.
ಜ್ಞಾನಭಾರತಿ ಆವರಣದಲ್ಲಿ ಎಲ್ಲ ವಿಭಾಗಗಳಿಂದ ಎರಡು ಸಾವಿರಕ್ಕೂ ಮಿಗಿಲಾದ ವಿದ್ಯಾರ್ಥಿಗಳಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳು ಹೊರತುಪಡಿಸಿ, ನಿತ್ಯ ಮನೆಯಿಂದಲೇ ಬರುವ ವಿದ್ಯಾರ್ಥಿಗಳ ಸಂಖ್ಯೆ ಸಾವಿರ ಇರಬಹುದು. ಹಾಗೆಯೇ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಸಂಖ್ಯೆಯೂ ಹೆಚ್ಚಿದೆ. ದ್ವಿಚಕ್ರ ಹಾಗೂ ಕಾರುಗಳಲ್ಲಿ ಬರುವ ವಿದ್ಯಾರ್ಥಿ ಹಾಗೂ ಸಿಬ್ಬಂದಿ ಸಂಖ್ಯೆ ಬಹಳ ಕಡಿಮೆ.
ಜ್ಞಾನಭಾರತಿ ಆವರಣದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ರಸ್ತೆ ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಬಸ್ ನಿಲ್ದಾಣ ಮಾಡಿಲ್ಲ. ಹೀಗಾಗಿ ಎಲ್ಲರೂ ರಸ್ತೆ ಬದಿಯ ಬಯಲಲ್ಲೇ ನಿಂತು ಬಸ್‌ಗೆ ಕಾಯಬೇಕು. ಮಳೆ ಬಂದರೆ ಅಲ್ಲಿಯೇ ನೆನೆಯ ಬೇಕು. ಬಿಸಿಲಿಗೆ ಮರದ ನೆರಳೇ ಗತಿ.
ಎಲ್ಲೇಲ್ಲಿ ಬೇಕು ತಂಗುದಾಣ: ಜ್ಞಾನಭಾರತಿ ಆವರಣದ ವಿದ್ಯಾರ್ಥಿನಿಯರ ಹಾಸ್ಟೆಲ್, ಮುನೇಶ್ವರ ದೇವಸ್ಥಾನ, ಕೇಂದ್ರ ಕಚೇರಿ ಹಾಗೂ ಗಣಪತಿ ದೇವಸ್ಥಾನದಲ್ಲಿ ಬಸ್ ನಿಲ್ದಾಣ ಅಗತ್ಯವಾಗಿದೆ.
ಹಣವಿಲ್ಲದಿದ್ದರೆ ಸರ್ಕಾಕ್ಕೆ ಮನವಿ ಮಾಡಲಿ: ಬಸ್ ನಿಲ್ದಾಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಈಗಾಗಲೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ವಿವಿ ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸ್ಥಳೀಯ ಶಾಸಕರೊಂದಿಗಾದರೂ ಚರ್ಚಿಸಬೇಕಿತ್ತು. ಅದನ್ನೂ ಮಾಡಿಲ್ಲ. ಬಸ್ ನಿಲ್ದಾಣ ನಿರ್ಮಿಸಲು ವಿಶ್ವವಿದ್ಯಾಲಯದಲ್ಲಿ ಅನುದಾನವಿಲ್ಲದಿದ್ದರೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು. ಬಸ್ ನಿಲ್ದಾಣ ಇಲ್ಲದೇ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬೋಧಕೇತರ ಸಿಬ್ಬಂದಿ ಸಂಘದ ಸದಸ್ಯರೊಬ್ಬರು ಹೇಳಿದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ಮಾಡಲಾಗುತ್ತದೆ. ಈ ಸಂಬಂಧ ಹಲವು ಮನವಿಗಳು ಬಂದಿದೆ. ಜ್ಞಾನಭಾರತಿಯಿಂದ ವಿವಿಧ ಭಾಗಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬೆಂವಿವಿ ಸಾರಿಗೆ ವಿಭಾಗದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ.
-ಡಾ.ಎಂ.ಮುನಿರಾಜು, ಬೆಂವಿವಿ ಕುಲಪತಿ(ಹಂಗಾಮಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.