ಒಕ್ಕಲಿಗರ ಸಮುದಾಯದಲ್ಲಿ ಒಗ್ಗಟ್ಟಿಲ್ಲ


Team Udayavani, Sep 19, 2017, 11:49 AM IST

devegowda-nirmalamnanda.jpg

ಬೆಂಗಳೂರು: ಒಕ್ಕಲಿಗ ಸಮುದಾಯದಲ್ಲಿ ಒಗ್ಗಟ್ಟಿಲ್ಲ. ಸಮುದಾಯದ ಮೂವರು ಸ್ವಾಮೀಜಿಗಳು ಸಮಾಜವನ್ನು ಒಟ್ಟಿಗೆ ಮುನ್ನಡೆಸುವ ಮೂಲಕ ಸಮುದಾಯದವರಲ್ಲಿ ಐಕ್ಯತೆ ಮೂಡಿಸಲು ಮುಂದಾಗಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವು ಕೃಷ್ಣಪ್ಪ ರಂಗಮ್ಮ ಎಜುಕೇಷನ್‌ ಟ್ರಸ್ಟ್‌ ಸಹಯೋಗದಲ್ಲಿ ಸಂಘದ ಕುವೆಂಪು ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ಅಪೂರ್ವ ಪುರುಷಸಿಂಹ ಕೆ.ಎಚ್‌.ರಾಮಯ್ಯ’ ಸಂಸ್ಮರಣ ಗ್ರಂಥ ಬಿಡುಗಡೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಆದಿಚುಂಚನಗಿರಿ ಮಠದ ಹಿಂದಿನ ಮಠಾಧಿಪತಿಗಳಾಗಿದ್ದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರೊಂದಿಗೆ ಸ್ವಲ್ಪ ವ್ಯತ್ಯಾಸವಿದ್ದರೂ ಅದು ವೈಯಕ್ತಿಕವಾಗಿರಲಿಲ್ಲ. ಸರ್ಕಾರಗಳು ಬದಲಾದಾಗ ಸಂಸ್ಥೆಯನ್ನು ಬೆಳೆಸಲು ಕೆಲ ಪ್ರಯತ್ನ ಮಾಡಬೇಕಾಗುತ್ತದೆ. ಅವರ ದೂರದೃಷ್ಟಿ, ಕೊಡುಗೆಯನ್ನು ಸಮುದಾಯವರು ಸದಾ ಸ್ಮರಿಸಬೇಕು. ಸಮುದಾಯವು ಎಲ್ಲ ರೀತಿಯ ಸಶಕ್ತವಾಗಲು ಅವರ ಕೊಡುಗೆ ಅಪಾರ’ ಎಂದು ಬಣ್ಣಿಸಿದರು.

ಒಕ್ಕಲಿಗರ ಸಂಘದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆದಾಗ ಸಂಘವನ್ನು ನಾಶಪಡಿಸಲು ಮುಂದಾದರೆ ಸರ್ಕಾರವೇ ಪತನವಾಗಬಹುದು ಎಂದು ಒಂದೊಮ್ಮೆ ರಾಮಕೃಷ್ಣ ಹೆಗಡೆ ಅವರಿಗೆ ಹೇಳಿದ್ದೆ. ಇದರಿಂದಾಗಿ ಸಂಘದ ವಿಚಾರಗಳಲ್ಲಿ ಅನಗತ್ಯ ಗೊಂದಲ ಮೂಡಿಸದಂತೆ  ಜೀವರಾಜ್‌ ಆಳ್ವಾಗೆ ಹೆಗಡೆ ಸೂಚಿಸಿದ್ದರು ಎಂದು ಹೇಳಿದರು

ದೇವೇಗೌಡರೇ ನನ್ನ ನಾಯಕರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, “ದೇವೇಗೌಡರು ಖಂಡಿತವಾಗಿಯೂ ನನ್ನ ನಾಯಕರು. ಯಾವುದೇ ಸಂದರ್ಭದಲ್ಲೂ ನಮ್ಮತನವನ್ನು ಗಟ್ಟಿಯಾಗಿ ಉಳಿಸಿಕೊಂಡು ನಡೆಸುವಲ್ಲಿ ಈ ಹಿಂದೆ ಕೆಲ ಲೋಪಗಳಾಗಿದ್ದು, ಅದನ್ನು ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಆ ರೀತಿ ಆಗದಂತೆ ಮುನ್ನೆಚ್ಚರಿಕೆಯಿಂದ ಮುಂದುವರಿಯುತ್ತೇನೆ’ ಎಂದು ಹೇಳಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.36ರಷ್ಟು ಒಕ್ಕಲಿಗರಿದ್ದು, ಗೆಲುವಿಗೆ ನಿರ್ಣಾಯಕರೆನಿಸಿದ್ದಾರೆ. ಆ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದಾಗ ಸ್ಥಳೀಯ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದಾಗ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡರೆ ಉಪಯುಕ್ತವಾಗಲಿದೆ ಎಂದು ಸಲಹೆ ನೀಡಿದರು. ಅಲ್ಲಿಯವರೆಗೆ ಸದಾನಂದನಾಗಿದ್ದ ನಾನು ಸದಾನಂದಗೌಡನಾದೆ. ಈ ಗೌಡ ಹೆಸರಿನ ಏಣಿಯ ಮೂಲಕ ಈವರೆಗೆ ನಾನಾ ಉನ್ನತ ಸ್ಥಾನಗಳನ್ನು ಪಡೆದಿದ್ದೇನೆ.

ರಾಜಕೀಯ ಏಳಿಗೆ ಮೂಲಕ ಮುಖ್ಯಮಂತ್ರಿ ಕೇಂದ್ರ ಸಚಿವ ಸ್ಥಾನಗಳನ್ನು ಗೌಡ ಕೋಟವೇ ತಂದುಕೊಟ್ಟಿದೆ ಎಂದು ಹೆಮ್ಮೆಯಿಂದ ನುಡಿದರು. ರಾಜ್ಯ ಒಕ್ಕಲಿಗರ ಸಂಘದ ಅಧRಕ್ಷ ಡಿ.ಎನ್‌.ಬೆಟ್ಟೇಗೌಡ, “ಸಂಘದ ಆಗುಹೋಗುಗಳ ಬಗ್ಗೆ ಸಮುದಾಯದ ಸ್ವಾಮೀಜಿಗಳು, ಮುಖಂಡರು ಗಮನಿಸಿದರೆ ಉತ್ತಮವಾಗಿ ಕಾರ್ಯ ನಿರ್ವಹಿಸಲು ಅನುಕೂಲವಾಗಲಿದೆ. ಪ್ರತಿ ತಿಂಗಳು ಸ್ವಾಮೀಜಿಗಳು ಪರಿಶೀಲನೆ ನಡೆಸಿದರೂ ಉತ್ತಮ. ಕೆ.ಚ್‌.ರಾಮಯ್ಯನವರ ಹೆಸರಿನಲ್ಲಿ ಉಚಿತ ವಿದ್ಯಾರ್ಥಿನಿಲಯ ಆರಂಭಿಸಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಸ್ವಾರ್ಥ ಬಿಟ್ಟು ಕೆಲಸ ಮಾಡಿ: ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, “ಸಮುದಾಯ ಅಭಿವೃದ್ಧಿ ಸಾಧಿಸಬೇಕಾದರೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಸಮುದಾಯದ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗುವಂತಾಗಬೇಕು. ಇದಕ್ಕೆ ಸಂಘವು ನೆರವು ನೀಡಬೇಕು. ಸಂಘದ ಆಡಳಿತದ ಮೇಲೆ ನಿಗಾ ವಹಿಸುವುದು ಸ್ವಾಮೀಜಿ ಕೆಲಸವಲ್ಲ. ಅಗತ್ಯಬಿದ್ದರೆ ಮುತ್ಸದಿಗಳಾದ ಮಾಜಿ ಪ್ರಧಾನಿಯವರ ಮಾರ್ಗದರ್ಶನ ಪಡೆಯಬಹುದು.

ಸಂಘದಲ್ಲೂ ವೃತ್ತಿಪರರಿದ್ದು, ಅವರ ಅಭಿಪ್ರಾಯ ಪಡೆಯಬಹುದು. ಆಧ್ಯಾತ್ಮ ವಿಚಾರದಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಸ್ವಾರ್ಥ ಬಿಟ್ಟು ಕೆಲಸ ಮಾಡಿದರೆ ಸಂಘ ಬೆಳೆಯಲಿದೆ’ ಎಂದು ತಿಳಿಸಿದರು. ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಪ್ರೊ. ಪದ್ಮಾ ಶೇಖರ್‌ ಕೃತಿ ಪರಿಚಯ ನೀಡಿದರು. ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಗ್ರಂಥ ಸಂಪಾದಕ ಹ.ಕ.ರಾಜೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ನೊಬ್ಬರಿಗೆ ಅವಕಾಶ ಸಿಗುವಾಗ ಕಾಲೆಳೆಯಬಾರದು: ಜೀವನದಲ್ಲಿ ಈವರೆಗೆ ಸ್ವಾಭಿಮಾನದಿಂದಲೇ ಹೋರಾಡುತ್ತಾ ಬಂದಿದ್ದೇನೆ. ಯಾವುದೇ ಸಂದರ್ಭ, ಎಂತಹ ಸನ್ನಿವೇಶದಲ್ಲೂ ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮುಂದೆಯೂ ಬಿಡುವುದಿಲ್ಲ. ಅದು ರಕ್ತಗತವಾಗಿದೆ. ಸಂದರ್ಭ, ಸನ್ನಿವೇಶಗಳಲ್ಲಿ ಡಿ.ವಿ.ಸದಾನಂದಗೌಡರು, ಎಸ್‌.ಎಂ.ಕೃಷ್ಣ ಅವರಿಗೆ ನೆರವಾಗಿದ್ದೇನೆ. ಇನ್ನೊಬ್ಬರಿಗೆ ಅವಕಾಶ ಸಿಗುವಾಗ ಕಾಲೆಳೆಯಬಾರದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮಾರ್ಮಿಕವಾಗಿ ನುಡಿದರು.

ಡಿ.ವಿ.ಸದಾನಂದಗೌಡರ ಬಗ್ಗೆ ಒಳ್ಳೆಯ ಮಾತನಾಡಿದರೆ ಅಲ್ಲಿರುವವರೆ ಸದಾನಂದಗೌಡರ ಶಕ್ತಿ ಕುಗ್ಗಿಸುವ ಪ್ರಯತ್ನ ಮಾಡುತ್ತಾರೆ. ಅವರು ಮುಖ್ಯಮಂತ್ರಿಗಳಾಗಿದ್ದಾಗ ಸ್ಥಾನ ತಪ್ಪಿಸುವ ಸಂಚು ನಡೆಯಿತು. ಆಗ ಕಿಂಚಿತ್‌ ಸಹಕಾರ ಕೊಟ್ಟಿದ್ದೇನೆ. ನಾನು ಮುಖ್ಯಮಂತ್ರಿ ಆಗಬೇಕಾದ ಸಂದರ್ಭದಲ್ಲೂ ಹೊಡೆದಾಟ ನಡೆದಿತ್ತು ಎಂದು ಸ್ಮರಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಆಡಳಿತ ಬಿಗಿಯಾಗಿತ್ತು. ಒಬ್ಬ ಸಚಿವರು ಮಿಸುಕಾಡದಂತೆ ಇಟ್ಟಿದೆ. ನನಗೆ ಪ್ರಧಾನಿಯಾಗುವ ಅವಕಾಶ ಒದಗಿಬಂದಾಗ ಸೌಜನ್ಯಕ್ಕೂ ಸಂಪುಟ ಸಹೋದ್ಯೋಗಿಗಳು ಚಹಾ ಕೊಟ್ಟು ಬೀಳೊYಡಲಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಿದರು.

ದುರ್ಬಳಕೆ ಮಾಡಿಕೊಂಡಿಲ್ಲ: ಪ್ರಾಸ್ತಾವಿಕವಾಗಿ ಮಾತನಾಡಿದ ಸಾಂಸ್ಕೃತಿಕ ಚಟುವಟಿಕೆ ಸಮಿತಿ ಅಧ್ಯಕ್ಷ ಅ.ದೇವೇಗೌಡ, “ಈ ಕಾರ್ಯಕ್ರಮ ಆಯೋಜನೆಯಲ್ಲಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ನಾನು ಯಾರಿಂದಲೂ ಹಣ ಪಡೆದಿಲ್ಲ. ಹಾಗೆ ಮಾಡಿದವರ ಮನೆ ಹಾಳಾಗಲಿ. ಹಣವನ್ನು ದುರ್ಬಳಕೆ ಮಾಡಿಕೊಂಡರೆ ಹೆಂಡತಿ, ಮಕ್ಕಳಿಗೆ ತೊಂದರೆಯಾಗಲಿದೆ’ ಎಂದು ಹೇಳಿದರು.

ಟಾಪ್ ನ್ಯೂಸ್

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.