ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯವಿಲ್ಲ
Team Udayavani, Jan 22, 2018, 11:54 AM IST
ಬೆಂಗಳೂರು: ಅಭಿವೃದ್ಧಿಯಲ್ಲಿ ತಾರತಮ್ಯ ಮಾಡದೆ ರಾಜ್ಯದ 224 ಕ್ಷೇತ್ರಗಳಿಗೂ ಸಮಾನವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಬಿಎಂಪಿಯಿಂದ ಭಾನುವಾರ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ “ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ’ ಹಾಗೂ “ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದ ಎಲ್ಲ 224 ಕ್ಷೇತ್ರಗಳು ಅಭಿವೃದ್ಧಿಗೊಂಡಾಗ ಮಾತ್ರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ. ಹೀಗಾಗಿ ನಮ್ಮ ಸರ್ಕಾರ ತಾರತಮ್ಯ ಮಾಡದೆ ವಿರೋಧ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗಳಲ್ಲೂ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
4 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ತಲಾ 7 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಿದ್ದು, 1.02 ಕೋಟಿ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿರುವ 10 ಲಕ್ಷ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕಾಂಶಯುತ ಆಹಾರ ನೀಡಲು ಮಾತೃಪೂರ್ಣ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಬಿ.ಎಸ್.ಯಡಿಯೂರಪ್ಪ ನಾವೂ ಅಕ್ಕಿ ನೀಡಿದ್ದೇವೆ ಎನ್ನುತ್ತಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಉತ್ತರ ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರಗಳಿವೆ. ಆದರೂ ಯಾಕೆ ಉಚಿತವಾಗಿ ಅಕ್ಕಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದ ಯಾವುದೇ ವ್ಯಕ್ತಿ ಹಸಿವಿನಿಂದ ಮಲಗಬಾರದೆಂಬ ಉದ್ದೇಶದಿಂದ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿ ರಿಯಾಯಿತಿ ದರದಲ್ಲಿ ಆಹಾರ ವಿತರಿಸಲಾಗುತ್ತಿದೆ ಎಂದರು.
ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಉದ್ಯಾನನಗರಿ ಬೆಂಗಳೂರಿಗೆ ಗಾಬೇìಜ್ ಸಿಟಿ ಎಂಬ ಅಪಕೀರ್ತಿ ಬರುವಂತೆ ಮಾಡಿದ್ದರು. ಪಾಲಿಕೆಯಲ್ಲಿ ನಮ್ಮ ಪಕ್ಷ ಆಡಳಿತಕ್ಕೆ ಬಂದ ನಂತರದಲ್ಲಿ ಮತ್ತೆ ನಗರವನ್ನು ಉದ್ಯಾನನಗರವನ್ನಾಗಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.
ಸದಾ ಯಡಿಯೂರಪ್ಪ ಬಿಡಿಎ ಮೇಲೆ ಸಾಲ ಪಡೆಯಲಾಗಿದೆ ಎಂದು ಆರೋಪಿಸುತ್ತಾರೆ. ಆದರೆ, ಬಿಬಿಎಂಪಿಯ ಕಟ್ಟಡಗಳನ್ನು ಬಿಜೆಪಿ ಅಡಮಾನವಿಟ್ಟಿರುವುದನ್ನು ಮರೆತುಬಿಟ್ಟಿದ್ದಾರೆ. ಬಿಜೆಪಿಯವರು ನಾಚಿಕೆ, ಮಾನ, ಮರ್ಯಾದೆ ಇಲ್ಲದೆ, ಎಂತಹ ಸುಳ್ಳು ಬೇಕಾದರೂ ಹೇಳುತ್ತಾರೆ ಎಂದು ಟೀಕಿಸಿದರು.
ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಬೆಳ್ಳಂದೂರು ಕೆರೆ ಅಂಗಳದಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣವನ್ನು ಅಪಪ್ರಚಾರ ಮಾಡಲಾಗುತ್ತಿದ್ದು, ಕೆರೆ ಸಂರಕ್ಷಣೆಗೆ ರಚಿಸಲಾದ ತಜ್ಞರ ಸಮಿತಿ ಹಾಗೂ ಮೇಲ್ವಿಚಾರಣಾ ಸಮಿತಿಯಲ್ಲಿದ್ದವರೇ ಮಾಧ್ಯಮಗಳ ಮುಂದೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಕೆರೆ ಕಲುಷಿತಗೊಂಡಿದ್ದು, ಸ್ವಲ್ಪ ಪ್ರಮಾಣದ ಗ್ಯಾಸ್ ಇರುವುದು ಒಪ್ಪಿಕೊಳ್ಳುತ್ತೇವೆ.
ಆದರೆ, ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳದಿದ್ದರೂ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಸಚಿವ ರೋಷನ್ ಬೇಗ್, ಶಾಸಕರಾದ ಬೈರತಿ ಬಸವರಾಜ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಎಂಟಿಬಿ ನಾಗರಾಜ್, ಎನ್.ಎ.ಹ್ಯಾರೀಸ್, ವಿಧಾನ ಪರಿಷತ್ ಸದಸ್ಯರಾದ ನಾರಾಯಣಸ್ವಾಮಿ, ಬೈರತಿ ಸುರೇಶ್, ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಸಲೀಂ ಅಹಮದ್, ಅಲೆಗಾಡರ್ ಇತರು ಇದ್ದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳಲ್ಲಿ 11 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದ್ದು, ಪಾಲಿಕೆಗೆ ಸೇರ್ಪಡೆಗೊಂಡ 110 ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದೇ ರೀತಿ ನಗರದಲ್ಲಿ ಕೆರೆಗಳ ಅಭಿವೃದ್ಧಿಗೂ ಕ್ರಮಕೈಗೊಂಡಿದ್ದು, ಬೆಳ್ಳಂದೂರು ಕೆರೆಯ ಅಂಗಳದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕೆಲವರು ಕೆರೆಯಲ್ಲಿ ಕಾಣಿಸಿಕೊಂಡಿದೆ ಎಂದು ಅಪಪ್ರಚಾರ ಮಾಡುತ್ತಿದ್ದು, ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಸೋಲಿನ ಭಯ ಶುರುವಾಗಿದೆ: ವೇದಿಕೆಯಲ್ಲಿದ್ದವರ ಹೆಸರು ಹೇಳುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಅಧ್ಯಕ್ಷತೆ ವಹಿಸಿಕೊಳ್ಳಲು ಬಿಜೆಪಿ ಶಾಸಕ ಸಿ.ರಘು ಬರಬೇಕಿತ್ತಾದರೂ ತಪ್ಪಿಸಿಕೊಂಡಿದ್ದಾರೆ. ಅವರಿಗೆ ಸೋಲಿನ ಭಯ ಶುರುವಾಗಿದೆ ಅನಿಸುತ್ತದೆ.
ರಘು ಈವರೆಗೆ ಒಂದೇ ಒಂದು ದಿನವೂ ಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚಿಸಲು ಹಾಗೂ ಅನುದಾನ ಕೇಳಲು ನನ್ನ ಬಳಿಗೆ ಬಂದಿಲ್ಲ. ಜತೆಗೆ ವಿಧಾನಸಭೆಯ ಒಳಗೂ- ಹೊರಗೂ ಅವರು ಸಕ್ರಿಯವಾಗಿ, ಕ್ರಿಯಾಶೀಲವಾಗಿರುವುದನ್ನು ನಾನು ಕಂಡಿಲ್ಲ. ಬಹುಶಃ ಟಿಎ-ಡಿಎ ತೆಗೆದುಕೊಳ್ಳಲು ಬರುತ್ತಾರೆ ಅನಿಸುತ್ತದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.