ಸಂಪುಟ ವಿಸ್ತರಣೆಯಲ್ಲಿ ದೇವೇಗೌಡರ ಹಸ್ತಕ್ಷೇಪವಿಲ್ಲ
Team Udayavani, Jun 3, 2018, 6:10 AM IST
ಬೆಂಗಳೂರು: ಸಂಪುಟ ವಿಸ್ತರಣೆಯಲ್ಲಿ ದೇವೇಗೌಡರ ಹಸ್ತಕ್ಷೇಪವಿಲ್ಲ. ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬ ವರದಿಗಳಲ್ಲಿ ಸತ್ಯಾಂಶವಿಲ್ಲ. ಆ ಖಾತೆ ಒತ್ತಡ ಹಾಕಿ ಪಡೆದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂಧನ ಖಾತೆ ವಿಚಾರದಲ್ಲಿ ದೇವೇಗೌಡರು ಮಾಸ್ಟರ್ ಪ್ಲಾನ್ ಮಾಡಿದರು, ಡಿ.ಕೆ.ಶಿವಕುಮಾರ್-ಎಚ್. ಡಿ.ರೇವಣ್ಣ ಜಟಾಪಟಿ ಮಾಡಿದರು ಎಂಬುದೆಲ್ಲ ನಿರಾಧಾರ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರದಲ್ಲಿ ಕೊಟ್ಟು ತೆಗೆದುಕೊಳ್ಳುವ ನೀತಿ ಅನ್ವಯ ಆಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ
ವೇಣುಗೋಪಾಲ್ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುವ ಬಗ್ಗೆ ದೇವೇಗೌಡರ ಜತೆ ಚರ್ಚಿಸಿದ್ದಾರೆ ಎಂದರು.
ಜೆಡಿಎಸ್ ಹಣಕಾಸು ಇಲಾಖೆ ಕೇಳಿದ್ದು ನಿಜ. ಆದರೆ ಬೇರೆ ವಿಚಾರದಲ್ಲಿ ಯಾವುದೇ ಜಟಾಪಟಿ ನಡೆದಿಲ್ಲ. ನಾನೂ ಡಿ.ಕೆ.ಶಿವಕುಮಾರ್ ಜತೆ ಮಾತನಾಡಿದ್ದೇನೆ. ಯಾವ ಖಾತೆ ಬೇಕು ಎನ್ನುವುದು ಅವರಿಗೆ ಬಿಟ್ಟಿದ್ದು. ಎರಡೂ
ಪಕ್ಷಗಳಿಗೆ ಎಷ್ಟೆಷ್ಟು ಮತ್ತು ಯಾವ್ಯಾವ ಖಾತೆ ಎಂಬುದು ಹಂಚಿಕೆಯಾಗಿದೆ. ಆದರೆ,ಸಚಿವರ ಪಟ್ಟಿ ಇನ್ನೂ ಸಿದ್ಧವಾಗಿಲ್ಲ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ನಂತರ ಹೊಸ ಬಜೆಟ್ ಮಂಡಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಜತೆಗೆ ಜಂಟಿ
ಅಧಿವೇಶನದ ಬಗ್ಗೆಯೂ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.