ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ
Team Udayavani, Dec 21, 2017, 6:20 AM IST
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ನಡಿ ವಿದ್ಯುತ್ ಕಡಿತ ಮಾಡುವುದಿಲ್ಲ. ವಿದ್ಯುತ್ ಕೊರತೆ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಬೇಸಿಗೆಯಲ್ಲಿ ರೈತರು, ಉದ್ದಿಮೆದಾರರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಬೆಸ್ಕಾಂ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಬೆಸ್ಕಾಂ ಮಿತ್ರ’ ಮೊಬೈಲ್ ಆ್ಯಪ್ ಸೇವೆಗೆ ಚಾಲನೆ ನೀಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಬೇಸಿಗೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ವಲಯಕ್ಕೂ ನಿಗದಿತ ಪ್ರಮಾಣದಲ್ಲಿ ವಿದ್ಯುತ್ ಒದಗಿಸಲು ಬದ್ಧ ಎಂದು ಹೇಳಿದರು.
ರಾಜ್ಯಕ್ಕೆ ನಿಗದಿತ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಹಾಗಾಗಿ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರಲಾಗುತ್ತಿದೆ. ಅಧಿಕಾರಿಗಳು ಸಹ ನಿರಂತರ ಸಂಪರ್ಕದಲ್ಲಿದ್ದು, ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ವಿದೇಶಿ ಕಲ್ಲಿದ್ದಲು ಆಮದು
ಈ ನಡುವೆ ತುರ್ತು ನಿರ್ವಹಣೆಗಾಗಿ ಒಂದು ದಶಲಕ್ಷ ಟನ್ ವಿದೇಶಿ ಕಲ್ಲಿದ್ದಲು ಖರೀದಿಗೆ ಟೆಂಡರ್ ಆಹ್ವಾನಿಸಲಾಗಿದೆ. ಒಂದೊಮ್ಮೆ ಕಲ್ಲಿದ್ದಲು ಕೊರತೆಯಿಂದ ಸಮಸ್ಯೆ ತಲೆದೋರಿದರೆ ತಕ್ಷಣವೇ ಪರಿಸ್ಥಿತಿ ನಿಭಾಯಿಸಲು ಅನುಕೂಲವಾಗುವಂತೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ಕೆಲ ರಾಜ್ಯಗಳಿಗೆ ಅನುಕೂಲವಾಗಿದ್ದರೆ ಇನ್ನೂ ಕೆಲವು ರಾಜ್ಯಗಳಿಗೆ ಅನುಕೂಲವಾಗುತ್ತಿಲ್ಲ. ಒಡಂಬಡಿಕೆ ಪ್ರಮಾಣದಷ್ಟೂ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಇದಕ್ಕೆ ಈಗಲೇ ಕಾರಣ ಹೇಳಲು ಸಾಧ್ಯವಿಲ್ಲ. ಇದರಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ. ಗೋದ್ನಾ ಘಟಕಕ್ಕೆ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಾಗಿದ್ದರೂ ಈವರೆಗೆ ಸಚಿವಾಲಯದಿಂದ ಆದೇಶ ಸಿಕ್ಕಿಲ್ಲ. ಒಳ್ಳೆಯ ಹೆಸರು ಬರಲಿದೆ ಎಂಬ ಕಾರಣಕ್ಕೆ ನೀಡುತ್ತಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.
ತಾರತಮ್ಯದಿಂದ 700 ಕೋಟಿ ರೂ. ಹೊರೆ
ಕೇಂದ್ರ ಸರ್ಕಾರವು ಕರ್ನಾಟಕ ಹಾಗೂ ನೆರೆ ರಾಜ್ಯಗಳಿಗೆ ವಿಧಿಸುವ ವಿದ್ಯುತ್ ಸಾಗಣೆ ವೆಚ್ಚದಲ್ಲೂ ತಾರತಮ್ಯವಿದೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದ್ದು, ಇದರಿಂದ ಸುಮಾರು 700 ಕೋಟಿ ರೂ. ಹೊರೆ ಬೀಳುತ್ತಿದೆ.
ರಾಜ್ಯದ ತಂತಿ ಮಾರ್ಗದ ಮೂಲಕವೇ ನೆರೆಯ ರಾಜ್ಯಗಳಿಗೆ ವಿದ್ಯುತ್ ಸಾಗಣೆಯಾಗುತ್ತಿದ್ದರೂ ಶುಲ್ಕದಲ್ಲಿ ವ್ಯತ್ಯಯವಿದೆ. ಎಲ್ಲ ರಾಜ್ಯಕ್ಕೂ ಸಮಾನವಾಗಿ ವೆಚ್ಚ ಹಂಚಿಕೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದು, ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಇತ್ತೀಚೆಗೆ ನಡೆದ ಇಂಧನ ಸಚಿವರ ಸಭೆಯಲ್ಲಿ ರಾಜ್ಯದಲ್ಲಿನ ಯಶಸ್ವಿ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
2.50 ರೂ.ಗೆ ವಿದ್ಯುತ್ ಸಿಕ್ಕರೆ ಈಗಲೇ ಖರೀದಿ
ಕೇಂದ್ರ ಸರ್ಕಾರದಿಂದ ಪ್ರತಿ ಯೂನಿಟ್‌ಗೆ 2.50 ರೂ. ದರದಲ್ಲಿ ವಿದ್ಯುತ್ ಖರೀದಿಸಬಹುದು ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ದೂರಿದರು.
ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದಿಂದ 2.50 ರೂ. ಕಡಿಮೆ ದರದಲ್ಲಿ ಯೂನಿಟ್ ವಿದ್ಯುತ್ ಸಿಗಲಿದೆ ಎಂದು ಹೇಳಿದರು. ತಕ್ಷಣವೇ ಅವರಿಗೂ ಸೇರಿದಂತೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದೆ. ಕೇಂದ್ರ ಸಚಿವರನ್ನೂ ಭೇಟಿ ಮಾಡಿದೆ. ಪ್ರತಿ ಯೂನಿಟ್ ವಿದ್ಯುತ್ 2.50 ರೂ. ದರದಲ್ಲಿ ಸಿಗುವುದಾದರೆ ಖಂಡಿತ ಖರೀದಿಸಬಹುದು. ಆದರೆ ಹೇಳಿಕೆ ನೀಡಿದ ಯಡಿಯೂರಪ್ಪ ನಂತರ ಆ ವಿಚಾರ ಬಿಟ್ಟರು. ನಾನು ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಯಡಿಯೂರಪ್ಪ ಸೇರಿದಂತೆ ಬಿಜೆಪಿಯವರು ಹೇಳುತ್ತಿರುವುದು ಸುಳ್ಳು. 2.50 ರೂ. ಯೂನಿಟ್ ದರದಲ್ಲಿ ವಿದ್ಯುತ್ ಸಿಗುವುದಾದರೆ ಈಗಲೇ ಹೋಗೋಣ. ಈವರೆಗೆ 2.50 ರೂ. ದರದಲ್ಲಿ ವಿದ್ಯುತ್ ನೀಡುವುದಾಗಿ ಕೇಂದ್ರ ಸರ್ಕಾರದಿಂದ ಯಾರೊಬ್ಬರೂ ಹೇಳಿಲ್ಲ. ನಾನು ಪತ್ರ ಬರೆದು ಮನವಿ ಮಾಡಿದ್ದೇನೆ. ಕಳೆದ ವರ್ಷ 5.10 ರೂ. ದರದಲ್ಲಿ ವಿದ್ಯುತ್ ಖರೀದಿಸಲಾಗಿತ್ತು. ಈ ಬಾರಿ 4.08 ರೂ. ದರದಲ್ಲಿ ವಿದ್ಯುತ್ ಖರೀದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಗ್ರಾಹಕರಿಗಾಗಿ ಬೆಸ್ಕಾಂ ಮಿತ್ರ ಆ್ಯಪ್ ಸೇವೆ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಗ್ರಾಹಕರು ಅಂಗೈಯಲ್ಲೇ ವಿದ್ಯುತ್ ಸಂಬಂಧಿ ಸೇವೆ ಪಡೆಯಲು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್ ಸೇವೆ ಕಲ್ಪಿಸಲಾಗಿದ್ದು, ಉಳಿದ ನಾಲ್ಕು ವಿದ್ಯುತ್ ವಿತರಣಾ ಕಂಪನಿಗಳ (ಎಸ್ಕಾಂ) ವ್ಯಾಪ್ತಿಯಲ್ಲೂ ಶೀಘ್ರವೇ ಆ್ಯಪ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ “ಬೆಸ್ಕಾಂ ಮಿತ್ರ’ ಮೊಬೈಲ್ ಆ್ಯಪ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು,
ರಾಜ್ಯದಲ್ಲಿ ಸುಮಾರು 2 ಕೋಟಿ ವಿದ್ಯುತ್ ಗ್ರಾಹಕರಿದ್ದು, ಇದರದಲ್ಲಿ ಅರ್ಧದಷ್ಟು ಅಂದರೆ 1.04 ಕೋಟಿ ಗ್ರಾಹಕರು ಬೆಸ್ಕಾಂ ವ್ಯಾಪ್ತಿಯಲ್ಲಿದ್ದಾರೆ. ಗ್ರಾಹಕರಿಗೆ ಅಗತ್ಯ ಸೇವೆ ಜತೆಗೆ ದೂರು ಸಲ್ಲಿಕೆಗೆ ಸಹಕಾರಿಯಾಗುವ ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್
ಅಭಿವೃದಿಟಛಿಪಡಿಸಲಾಗಿದೆ. ರಾಜ್ಯದ ಇತರೆ ಗ್ರಾಹಕರಿಗೂ ಸದ್ಯದಲ್ಲೇ ಮೊಬೈಲ್ ಆ್ಯಪ್ ಸೇವೆ ಕಲ್ಪಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.