ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲೂ ಹಣವಿಲ್ಲ
Team Udayavani, Aug 15, 2019, 3:06 AM IST
ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಬಜೆಟ್ ತಡೆ ಹಿಡಿದಿರುವ ಕಾರಣ ಪಾಲಿಕೆ ಶಾಲೆಗಳಲ್ಲಿ ಮೂಲ ಸೌಕರ್ಯಗಳಿಗೂ ಹಣಕಾಸಿನ ಕೊರತೆ ಉಂಟಾಗಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮೇಯರ್ ಗಂಗಾಂಬಿಕೆ ಅವರಿಗೆ ಪತ್ರ ಬರೆದಿದ್ದಾರೆ.
ಹಣವಿಲ್ಲದೆ ಮಕ್ಕಳಿಗೆ ತುರ್ತು ಸೇವೆ ಒದಗಿಸಲು ಸಹ ಆಗುತ್ತಿಲ್ಲ. ಬಿಬಿಎಂಪಿ ಶಾಲೆಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳಿಗೆ ಸಮವಸ್ತ್ರ, ನೋಟ್‌ಬುಕ್, ಪಠ್ಯಪುಸ್ತಕ, ಬ್ಯಾಗ್, ಶೂ ನೀಡಲು ಹಾಗೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೂ ಸಮಸ್ಯೆಯಾಗಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
“ಬಜೆಟ್ ತಡೆದಿರುವ ಕಾರಣ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ವಿವಿಧ ತುರ್ತು ಯೋಜನೆಗಳು ನಿಂತು ಹೋಗಿವೆ. ರಾಜ್ಯ ಸರ್ಕಾರ ತುರ್ತು ಬಳಕೆಗೆ ತಡೆ ನೀಡಿಲ್ಲ ಎಂದು ಹೇಳಿದೆಯಾದರೂ ವಾಸ್ತವವೇ ಬೇರೆ ಇದೆ. ಮೌಖಿಕವಾಗಿ ಹೇಳುವುದರಿಂದ ಯಾವುದೇ ಇಲಾಖೆಯ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ.
ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಲಿಖೀತ ರೂಪದ ಯಾವುದೇ ಪತ್ರ ಬಂದಿಲ್ಲ. ಬಜೆಟ್ ತಡೆ ಹಿಡಿದಿದ್ದರೂ ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಎಚ್ಚರ ವಹಿಸಲಾಗಿದೆ. ಬಿಬಿಎಂಪಿಯ ಶಿಕ್ಷಣ ಇಲಾಖೆ ಅಧಿಕಾರಿಗಳೇ ಹಣ ಸಂಗ್ರಹಿಸಿ, ಸ್ವಾತಂತ್ರ್ಯ ದಿನಾಚರಣೆ ಮಾಡಲು ಮುಂದಾಗಿದ್ದೇವೆ’ ಎಂದು ಪಾಷ ಹೇಳಿದ್ದಾರೆ.
ಬಿಬಿಎಂಪಿ ಬಜೆಟ್‌ಗೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೂಮ್ಮೆ ಮನವಿ ಸಲ್ಲಿಸಲಾಗಿದೆ. ತುರ್ತು ಅಗತ್ಯಗಳ ಬಗ್ಗೆಯೂ ಅವರಿಗೆ ವಿವರಿಸಲಾಗಿದೆ. ರಾಜ್ಯ ಸರ್ಕಾರ ಬಜೆಟ್ ತಡೆಹಿಡಿದಿರುವುದರಿಂದ ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ತೊಡಕಾಗಿಲ್ಲ.
-ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.