ವರ್ಗಾವಣೆಗೆ ಹಣ ತಗೋಳಲ್ಲ: ಭೂ ಮಾಫಿಯಾಗೆ ಹೆದರೋಲ್ಲ
Team Udayavani, Oct 2, 2018, 12:41 PM IST
ಬೆಂಗಳೂರು: ವರ್ಗಾವಣೆಗೆ ಯಾರಿಂದಲೂ ಹಣ ತೆಗೆದುಕೊಳ್ಳುವುದಿಲ್ಲ. ಖಡಕ್ ಅಧಿಕಾರಿಗಳನ್ನು ಬೆಂಗಳೂರು ನಗರಕ್ಕೆ ವರ್ಗಾವಣೆ ಮಾಡಿದ್ದೇನೆ. ಇಲ್ಲಿನ ಕಾನೂನು ಬಾಹಿರ ಚುಟವಟಿಕೆಗೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ನಾನು ವರ್ಗಾವಣೆ ವಿಚಾರದಲ್ಲಿ ಎಲ್ಲೂ ರಾಜಿ ಆಗುವುದಿಲ್ಲ. ಯಾವ ಭೂಗಳ್ಳರು ನನ್ನನ್ನು ಕೊಂಡುಕೊಳ್ಳಲು ಆಗಲ್ಲ. ಬೆಂಗಳೂರಿಗೆ ಕೆಲ ಕಠಿಣ ನಿರ್ಧಾರ ತೆಗೆದುಕೊಂಡು ಒಂದೆರಡು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇನೆ ಎಂದರು.
ಭೂಗಳ್ಳರು ಮತ್ತು ಇಸ್ಪೀಟ್ ಮಾಫಿಯಾಕ್ಕೆ ಬಗ್ಗುವ, ಜಗ್ಗುವ ಪ್ರಶ್ನೆಯೇ ಇಲ್ಲ. ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳ ಮುಂದೆ ಗಾಂಜಾ ಮಾರಾಟ ನಿಯಂತ್ರಣಕ್ಕೂ ಆದೇಶಿಸಿದ್ದೇನೆ ಎಂದು ಹೇಳಿದರು.
ಸರಗಳ್ಳತನ ಸೇರಿದಂತೆ ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಸಹಿತವಾಗಿ ರಾಜ್ಯದ ಎಲ್ಲ ನಗರದ ಬೀದಿಗಳಲ್ಲೂ ಸಿಸಿಟಿವಿ ಅಳವಡಿಸಲಿದ್ದೇವೆ. ಇದಕ್ಕೆ ಎಷ್ಟೇ ಕೋಟಿ ಖರ್ಚಾದರೂ ಪರವಾಗಿಲ್ಲ. ಸಿಸಿಕ್ಯಾಮೆರಾ ಅಳಡಿಸುತ್ತೇವೆ. ಹಾಗೆಯೇ ಈಗಾಗಲೇ ಅಳವಡಿಸಿ ಕೆಟ್ಟಿರುವ ಸಿಸಿ ಕ್ಯಾಮೆರಾಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳುತ್ತೇವೆ.
ಹೀಗೆ ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆ ಮಾಡುವುದಕ್ಕೆ ಎಲ್ಲ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಸಮ್ಮಿಶ್ರ ಸರ್ಕಾರ ಬಿದ್ದೆ ಹೋಯಿತು ಎಂದು ಹದಿನೈದು ದಿನದ ಹಿಂದೆ ಎಡೆಬಿಡದೆ ಸುದ್ದಿ ಮಾಡಿದರು. ಆದರೆ, ರಾಜ್ಯದ ಜನರ ಆಶೀರ್ವಾದದಿಂದ ಏನೂ ಆಗಿಲ್ಲ.
ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ರೈತರ ಸಾಲಮನ್ನಾ ಮಾತ್ರವಲ್ಲ ಮೂರು ತಿಂಗಳಲ್ಲಿ ಹಲವು ಕಾರ್ಯಕ್ರಮ ಹಾಗೂ ಯೋಜನೆ ಜಾರಿ ಮಾಡಿದ್ದೇವೆ. ಬೆಳಗ್ಗೆಯಿಂದ ರಾತ್ರಿವರೆಗೂ ಜನತಾ ದರ್ಶನ ಮಾಡಿ ಜನರ ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗಿದೆ ಎಂದು ಸರ್ಕಾರದ ಸಾಧನೆಯನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.