ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ರಾಮುಲುಗಿಲ್ಲ: ರೇವಣ್ಣ
Team Udayavani, Oct 18, 2018, 7:00 AM IST
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಶ್ರೀರಾಮುಲುಗೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಬಳ್ಳಾರಿಗೆ ದೇವೇಗೌಡರು ಬಂದರೆ ಅಡ್ರೆಸ್ ಇಲ್ಲದೇ ಹೋಗುತ್ತಾರೆ ಎಂದು ಶ್ರೀರಾಮುಲು ನೀಡಿರುವ ಹೇಳಿಕೆಗೆ ವಿಧಾನಸೌಧದಲ್ಲಿ ತಿರುಗೇಟು ನೀಡಿದ ಅವರು, ದೇವೇಗೌಡರ ಅಡ್ರೆಸ್ ಪದ್ಮನಾಭನಗರದಲ್ಲಿದೆ. ಮೊದಲು
ಶ್ರೀರಾಮುಲು ಅಡ್ರೆಸ್ ಹುಡುಕಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ನಾಯಕ ಸಮುದಾಯಕ್ಕೆ ಕೊಡುಗೆ ಕೊಟ್ಟವರು ದೇವೇಗೌಡರು. ನಿನ್ನೆ ಮೊನ್ನೆ ಬಂದವರಿಗೆ ದೇವೇಗೌಡರ ಬಗ್ಗೆ ಏನು ಗೊತ್ತಿದೆ. ಅವರ ಬಗ್ಗೆ ಮಾತನಾಡುವ ನೈತಿಕತೆ ರಾಮುಲುಗೆ ಇಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಎಲ್ಲ ಅನುಭವಿಸಿ ಈಗ ಸುಧಾರಿಸಿಕೊಳ್ಳುತ್ತಿದ್ದಾರೆ. ಪಾಪ ಅವರ ಬಗ್ಗೆ ಈಗ ನಾನೇಕೆ ಮಾತನಾಡಲಿ ಎಂದು ವ್ಯಂಗ್ಯವಾಡಿದರು. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಯಡಿಯೂರಪ್ಪ ಅವರಿಗೆ ಅರಳು ಮರಳು. ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ. ಒಂದು
ಲೋಕಸಭಾ ಕ್ಷೇತ್ರದಲ್ಲಿ 18 ಲಕ್ಷ ಮತದಾರರಿರುತ್ತಾರೆ. ಅವರೆಲ್ಲಾ ಯಡಿಯೂರಪ್ಪ ಅವರ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದರು.
ಇದೇ ವೇಳೆ, ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧೆಯ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಪ್ರಜ್ವಲ್ ಹಿಂಬಾಗಿಲಿನಿಂದ ರಾಜಕಾರಣ ಮಾಡುವ ಅಗತ್ಯವಿಲ್ಲ. ಪಕ್ಷ ಅವನಿಗೆ ಎಲ್ಲವನ್ನೂ ಕೊಡುತ್ತದೆ. ಹೀಗಾಗಿ
ಅವನಿಗೆ ಸ್ಪರ್ಧಿಸುವ ಅವಕಾಶ ಬಂದರೆ ಸೂಕ್ತ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.