ಪಟ್ಟಿಯಿಂದ ಬಂಜಾರರ ಬಿಡುವ ಪ್ರಸ್ತಾವನೆಯಿಲ್ಲ
Team Udayavani, Feb 16, 2019, 6:30 AM IST
ಬೆಂಗಳೂರು: ಬಂಜಾರ ಸಮುದಾಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈಬಿಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಸಂತ ಸೇವಾಲಾಲ್ ಅವರ 280ನೇ ಜಯಂತೋತ್ಸವ’ದಲ್ಲಿ ಮಾತನಾಡಿದ ಅವರು, ಬಂಜಾರ ಸಮುದಾಯವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಈ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ಬಂಜಾರ ಸಮುದಾಯ ಮತ್ತು ತಾಂಡಗಳ ಅಭಿವೃದ್ದಿಗಾಗಿ ಸರ್ಕಾರ ಹಲವು ಯೋಜನೆಯನ್ನು ರೂಪಿಸಿದೆ. ಸಮುದಾಯದ ಕಸೂತಿ ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ಸರ್ಕಾರ ಕ್ರಮ ಕೈಗೊಂಡಿದೆ. ತಾಂಡಗಳ ರಸ್ತೆ ಅಭಿವೃದ್ಧಿಗಾಗಿ “ಸೇವಾಲಾಲ್ ಪ್ರಗತಿ ಕಾಲೋನಿ’ ಯೋಜನೆ ಜಾರಿಗೊಳಿಸಿದೆ. ಸೇವಾಲಾಲ್ ಸಾಂಸ್ಕೃತಿಕ ಕೇಂದ್ರವನ್ನು ನಿರ್ಮಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರ ಏಳ್ಗೆಗಾಗಿ ಜನಪರ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಜನಾಂಗದವರನ್ನು ಉದ್ಯಮಿಗಳನ್ನಾಗಿ ಮಾಡುವ ಗುರಿ ಸರ್ಕಾರದ ಮುಂದಿದು, ಈ ಉದ್ದೇಶದ ಈಡೇರಿಕೆಗಾಗಿ 800 ಕೋಟಿ ರೂ.ಮೀಸಲಿಡಲಾಗಿದೆ. ಶಿಕ್ಷಣದ ಜತೆಗೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದಲಿ ಎಂಬ ಕಾರಣಕ್ಕಾಗಿ ಪ್ರಬುದ್ಧ ಯೋಜನೆ, ಸಮೃದ್ಧಿ, ಐರಾವತ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದರು.
ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿದರು. ಮಾಜಿ ಸಚಿವರಾದ ಕೆ.ಶಿವಮೂರ್ತಿ, ರುದ್ರಪ್ಪ ಎಂ.ಲಮಾಣಿ, ಬಿ.ಟಿ.ಲಲಿತಾನಾಯಕ್, ವಿಧಾನಪರಿಷತ್‌ನ ಮಾಜಿ ಸದಸ್ಯೆ ಜಲಜಾನಾಯ್ಕ, ಜಾನಪದ ವಿವಿ ಕುಲಪತಿ ಡಾ.ಡಿ.ಬಿ.ನಾಯಕ ಉಪಸ್ಥಿತರಿದ್ದರು.
ಸಂತ ಸೇವಾಲಾಲ್ ಅವರ ಹುಟ್ಟೂರು ಸುರಗೊಂಡನಕೊಪ್ಪದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ 180 ಕೋಟಿ ರೂ.ಮೀಸಲಿರಿಸಲಾಗಿದ್ದು ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ. ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ಸರ್ಕಾರದ ಮೂಲ ಮಂತ್ರವಾಗಿದೆ.
-ಪ್ರಿಯಾಂಕ್ ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.