ಕನ್ನಡ ಕಡ್ಡಾಯ ಕಲಿಕೆ ಕುರಿತು ಪರಿಶೀಲನಾ ವರದಿಯೇ ಇಲ್ಲ
Team Udayavani, Apr 8, 2018, 6:55 AM IST
ಬೆಂಗಳೂರು : ಪ್ರಸಕ್ತ ಸಾಲಿನಿಂದ ರಾಜ್ಯದ ಎಲ್ಲಾ ಮಾದರಿಯ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರ ಅನುಷ್ಠಾನದ ಕುರಿತು ಪರಿಶೀಲನಾ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರಿಗೆ ಸೂಚಿಸಲಾಗಿತ್ತು. ಆದರೆ, ಈವರಗೂ ಯಾವ ಅಧಿಕಾರಿಯೂ ಈ ಸಂಬಂಧ ಮಾಹಿತಿಯನ್ನು ಇಲಾಖೆಗೆ ನೀಡಿಲ್ಲ.
ಕನ್ನಡ ಭಾಷಾ ಕಲಿಕಾ ನಿಯಮ 2017ರ ಅನ್ವಯ ರಾಜ್ಯಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಎಲ್ಲಾ ಶಾಲೆಗಳಲ್ಲೂ 2017-18ನೇ ಸಾಲಿನಿಂದ 1ರಿಂದ 10ನೇ ತರಗತಿಯ ವರೆಗೂ ಕನ್ನಡವನ್ನು ಒಂದು ಭಾಷೆಯಾಗಿ ಹಂತ ಹಂತವಾಗಿ ಅನುಷ್ಠಾನ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಅನುಪಾಲನಾ ವರದಿಯನ್ನು ಇಲಾಖೆಗೆ ನೀಡುವಂತೆ ಬಿಇಒ ಹಾಗೂ ಡಿಡಿಪಿಐಗಳಿಗೆ ಆದೇಶಿಸಲಾಗಿತ್ತು. ಆದರೆ, ಯಾವ ಅಧಿಕಾರಿಯೂ ಮಾಹಿತಿ ನೀಡದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲ ಎಲ್ಲಾ ಬಿಇಒ ಹಾಗೂ ಡಿಡಿಪಿಐಗಳು ತಮ್ಮ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ, ಕನ್ನಡ ಕಡ್ಡಾಯ ಕಲಿಯ ಬಗ್ಗೆ ಆಯಾ ಶಾಲೆಯ ಮುಖ್ಯಸ್ಥರಿಂದ ದೃಢಿಕರಣ ಪಡೆದು ಏ.12ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.