ಮನೆಯಲ್ಲೇ ಹಣಗಳಿಸುವಂತೆ ಹೇಳಿ ಲಕ್ಷಾಂತರ ರೂ. ದೋಖಾ
Team Udayavani, Jun 9, 2022, 11:39 AM IST
ಬೆಂಗಳೂರು: ಮನೆಯಲ್ಲಿ ಕುಳಿತು ಹಣಗಳಿಸಬಹುದು ಎಂದು ವ್ಯಕ್ತಿಯೊಬ್ಬರಿಗೆ ಯುವತಿಯೊಬ್ಬಳು ವೆಬ್‌ಸೈಟ್‌ನ ಲಿಂಕ್ ಕಳುಹಿಸಿ ಲಕ್ಷಾಂತರ ರೂ. ದೋಚಿರುವ ಘಟನೆ ನಡೆದಿದೆ.
ಈ ಸಂಬಂಧ ಗಂಗೊಂಡನಹಳ್ಳಿ ನಿವಾಸಿ ಸೈಯದ್ ನುಸ್ರತ್ ಮೆಹಮೊದಿ(34) ಪಶ್ಚಿಮ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೈಯದ್‌ಗೆ ಸಾಮಾಜಿಕ ಜಾಲತಾಣದಲ್ಲಿ 2021ರ ಡಿಸೆಂಬರ್‌ನಲ್ಲಿ ಅಥೇನಾ ವಿಲ್‌ಸನ್ ಎಂಬಾಕೆ ಪರಿಚಯವಾಗಿದ್ದು, ಆಕೆಯ ಜತೆ ವಾಟ್ಸ್‌ಆ್ಯಪ್ ಚಾಟಿಂಗ್ ನಲ್ಲಿ ವಿದೇಶಕ್ಕೆ ಹೋಗಿ ಕೆಲಸ ಮಾಡುವ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ಮನೆಯಲ್ಲಿ ಕುಳಿತು ಹಣ ಗಳಿಸಬಹುದು ಎಂದು www.open93.com ಎಂಬ ವೆಬ್‌ಸೈಟ್ ಲಿಂಕ್ ಕಳುಹಿಸಿ, ಅದರಲ್ಲಿ ರಿಜಿಸ್ಟ್ರರ್ ಮಾಡಿಕೊಳ್ಳುವಂತೆ ಸೂಚಿಸಿದ್ದಾಳೆ. ಬಳಿಕ 100 ಡಾಲರ್‌ಗಳನ್ನು ಬಿನ್ ನಾನ್ಸ್ ಆನ್‌ಲೈನ್ ಮನಿಟ್ರಾನ್ಸ್‌ಫರ್ ಆ್ಯಪ್‌ನಿಂದ ಆಕೆಯ ವ್ಯಾಲೆಟ್‌ಗೆ ಕಳುಹಿಸಿಕೊಂಡಿದ್ದಾಳೆ.
ಹೀಗೆ 6.18 ಲಕ್ಷ ರೂ. ಅನ್ನು ಹೂಡಿಕೆ ಮಾಡಿಸಿದ್ದಾಳೆ. ಇದೀಗ ಹೂಡಿಕೆ ಹಣವನ್ನು ವಾಪಸ್ ಪಡೆಯಲು ಮುಂದಾದಾಗ ಸಾಧ್ಯವಾಗುತ್ತಿಲ್ಲ. ಹೀಗಾಗಿ ಯುವತಿ ಹಾಗೂ ವೆಬ್‌ಸೈಟ್ ವಿರುದ್ಧ ಕಾನೂನು ಕ್ರಮಕ್ಕೆ ಸೈಯದ್ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.