ಮೇವು ವಿತರಣೆಯಲ್ಲಿ ಹಗರಣ ನಡೆದಿಲ್ಲ


Team Udayavani, Jun 15, 2017, 11:41 AM IST

Kagodu-15.jpg

ವಿಧಾನ ಪರಿಷತ್ತು: ರಾಜ್ಯದಲ್ಲಿ ಬರದ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಸಮರ್ಪಕವಾಗಿ ಮೇವು ವಿತರಿಸಲು ಪ್ರಾಮಾಣಿಕಪ್ರಯತ್ನ ಮಾಡಲಾಗಿದ್ದು, ಮೇವು ಪೂರೈಕೆ ಹಾಗೂ ವಿತರಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸಣ್ಣ ಪುಟ್ಟ ಲೋಪಗಳಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ ಪ್ರಸಂಗ ಮೇಲ್ಮನೆಯಲ್ಲಿ ಬುಧವಾರ ನಡೆಯಿತು.

ಪ್ರಶ್ನೋತ್ತರ ವೇಳೆ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವಿ.ಸೋಮಣ್ಣ, ತೀವ್ರ ಬರದಿಂದಾಗಿ ದನಕರುಗಳು
ಮೇವಿಲ್ಲದೆ ಸೊರಗಿವೆ. ಗೋಶಾಲೆಗಳಲ್ಲೂ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ನೀಡಿಲ್ಲ. ಮೇವು ಪೂರೈಕೆ, ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವ ಕಾಗೋಡು ತಿಮ್ಮಪ್ಪ, ಮೇವನ್ನು ಸಮರ್ಪಕವಾಗಿ ವಿತರಿಸಲು ಸಾಧ್ಯವಾದಷ್ಟು ಪ್ರಾಮಾಣಿಕ ವಾಗಿ ನಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ರಾಜ್ಯ ದಲ್ಲೆಲ್ಲೂ ಮೇವಿನ ಕೊರತೆ ಕಾಣಲಿಲ್ಲ. ಮೇವು ಪೂರೈಕೆ, ವಿತರಣೆಯಲ್ಲಿ ಅವ್ಯವಹಾರ ನಡೆದಿಲ್ಲ. ಇನ್ನೂ 55 ಲಕ್ಷ ಟನ್‌ ಒಣಮೇವಿನ ದಾಸ್ತಾನು ಇದ್ದು, ಕೆಜಿಗೆ 2 ರೂ.ನಂತೆ ರೈತರಿಗೆ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಸಚಿವರ ಉತ್ತರಕ್ಕೆ ಸಮಾಧಾನಗೊಳ್ಳದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, “ಕಲಬುರಗಿಯ ಗೋಶಾಲೆಯೊಂದಕ್ಕೆ ಮುಖ್ಯ ಮಂತ್ರಿಗಳು ಭೇಟಿ ನೀಡಿದ್ದಾಗ ಅಲ್ಲಿ 375 ಹಸುಗಳಿದ್ದವು. ಮರುದಿನ ಗೋಶಾಲೆಯಲ್ಲಿ ಕೇವಲ 275 ಹಸುಗಳಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಯಿತು. ನಂತರ ನಾನು ಜಿಲ್ಲಾಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪಶುವೈದ್ಯರನ್ನು ಪ್ರಶ್ನಿಸಿದಾಗ ಗೋಶಾಲೆಯಲ್ಲಿ 175 ಹಸುಗಳಿವೆ ಎಂದು ಸತ್ಯಾಂಶ ತಿಳಿಸಿದರು.

ಎಲ್ಲಿಂದಲೋ ಹಸುಗಳನ್ನು ತಂದು ಲೆಕ್ಕ ತೋರಿಸಿ ಹಣ ಲೂಟಿ ಮಾಡುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮವೇನು’ ಎಂದು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಸೋಮಣ್ಣ, “ಕಾಗೋಡು ತಿಮ್ಮಪ್ಪ ಅವರು ಕಾಗೋಡು ತಿಮ್ಮಪ್ಪ ಅವರಾಗಿದ್ದರೆ ಚೆನ್ನ. ಇಲ್ಲದಿದ್ದರೆ ಅವರು 10ರಲ್ಲಿ 11ನೆಯವರಾಗುತ್ತಾರೆ. ಹಿರಿಯ ಸಚಿವರಾದವರು ಹೀಗೆ ಅಧಿಕಾರಿಗಳ ರಕ್ಷಣೆಗೆ ನಿಲ್ಲುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಪವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ: ಬಳಿಕ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, “ನಾನೇ ಹಲವೆಡೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಗತ್ಯವಿರುವ ಕಡೆ ಗೋಶಾಲೆ ತೆರೆಯುವಂತೆಯೂ ಸೂಚಿಸಿದ್ದೇನೆ. ಸೋಮಣ್ಣ ಅವರು ಬೇಸರ ಮಾಡಿಕೊಳ್ಳುವುದು ಬೇಡ. ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಪರಿಶೀಲಿಸಲಾಗುವುದು. ಪ್ರಾಮಾಣಿಕವಾಗಿ ಮೇವು ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಣ್ಣಪುಟ್ಟ ಲೋಪವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ಕೆ.ಎಸ್‌.ಈಶ್ವರಪ್ಪ, “ನೀವು ಕ್ಷಮೆ ಕೇಳುವ ಅಗತ್ಯವಿಲ್ಲ. ಅಧಿಕಾರಿಗಳು ಸರಿಯಾಗಿ ಕಾರ್ಯ
ನಿರ್ವಹಿಸುತ್ತಿಲ್ಲ. ಅವರು ಸರಿಯಾಗಿ ಕೆಲಸ ಮಾಡುವಂತೆ ಬಿಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು.

ಮುಖ್ಯಮಂತ್ರಿಗಳು, ನೀವು (ಸಚಿವಕಾಗೋಡು ತಿಮ್ಮಪ್ಪ) ಹೋಗಿ ಬಂದ ಮೇಲೆ ಗೋಶಾಲೆಯಲ್ಲಿ ಹಸುವೂ ಇಲ್ಲ, ಮೇವೂ ಇಲ್ಲ ಎಂಬಂತಾಗಿದೆ. ಬರ ನಿರ್ವಹಣೆ ಹೆಸರಿನಲ್ಲಿ ಕೆಲವರು ತಿನ್ನಬಾರದನ್ನೆಲ್ಲಾ ತಿನ್ನುತ್ತಿದ್ದಾರೆ. ಅವರು ಮನುಷ್ಯರೇ ಅಲ್ಲ. ಕೆಲವರು ಬರಕ್ಕಾಗಿ ಕಾಯುತ್ತಿರುತ್ತಾರೆ. ಮೇವಿನಲ್ಲಿ ಲೂಟಿ, ಕೆರೆ ಹೂಳು ತೆರೆಯುವುದರಲ್ಲಿ ಲೂಟಿಗಾಗಿ ಕಾಯುತ್ತಿರುತ್ತಾರೆ. 
– ಕೆ.ಎಸ್‌.ಈಶ್ವರಪ್ಪ, ಮೇಲ್ಮನೆ ಪ್ರತಿಪಕ್ಷ ನಾಯಕ

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.