ಕದ್ದ ಬೈಕ್ ಗಳನ್ನೇ ಸಂಬಂಧಿಕರಿಗೆ ಗಿಫ್ಟ್ ಆಗಿ ಕೊಡುತ್ತಿದ್ದ ಚಾಲಾಕಿ ಕಳ್ಳ ಅಂದರ್
Team Udayavani, Jan 23, 2022, 1:11 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳವು ಮಾಡಿ, ಸಂಬಂಧಿಕರಿಗೆ ಉಡುಗೊರೆ ಕೊಡುತ್ತಿದ್ದ ಖತರ್ನಾಕ್ ಕಳ್ಳನೊಬ್ಬ ರಾಜಾಜಿನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರಾಜಾಜಿನಗರದ ಭರತ್ (32) ಬಂಧಿತ. ಆರೋಪಿಯಿಂದ 7 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ನಗರದ ವಿವಿಧೆಡೆ ಓಡಾಡಿ ಮನೆ ಮುಂದೆ ನಿಂತಿರುವ ವಾಹನಗಳನ್ನು ಗುರುತಿಸುತ್ತಿದ್ದ. ವಾಹನಗಳ ನಂಬರ್ ಅನ್ನು ತನ್ನ ಮೊಬೈಲ್‌ನಲ್ಲಿ ನೋಂದಾಯಿಸಿಕೊಂಡು ಬೆಂಗಳೂರು ಟ್ರಾಫಿಕ್ ಪೊಲೀಸ್(ಬಿಟಿಪಿ)ಆ್ಯಪ್ ಮೂಲಕ ವಾಹನದ ವಿರುದ್ಧ ಸಂಚಾರಿ ನಿಯಮ ಉಲ್ಲಂಘಣೆ ದಂಡ ಬಾಕಿ ಇದೆಯೇ ಎಂದು ಪರಿಶೀಲಿಸುತ್ತಿದ್ದ. ಒಂದು ವೇಳೆ ದಂಡ ವಿಧಿಸಿದ್ದರೆ ಅಂತಹ ವಾಹನಗಳನ್ನು ಕಳವು ಮಾಡುತ್ತಿರಲಿಲ್ಲ.
ಯಾವುದೇ ಪ್ರಕರಣಗಳಿಲ್ಲದ ವಾಹನಗಳನ್ನು ಕದಿಯುತ್ತಿದ್ದ.ಕದ್ದ ನಂತರ ಬೈಕ್ ಮಾರಿದರೆ ಕಳ್ಳತನ ಮಾಡಿರುವುದುತಿಳಿಯಬಹುದು ಎಂದು ಸಂಬಂಧಿಕರಿಗೆ ಉಚಿತವಾಗಿನೀಡುತ್ತಿದ್ದ ಎಂಬುದು ಗೊತ್ತಾಗಿದೆ. ಈ ರೀತಿ ಸುಮಾರುಹತ್ತಕ್ಕೂ ಅಧಿಕ ವಾಹನಗಳನ್ನು ಗಿಫ್ಟ್ ಆಗಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.