ಏಳು ಮಂದಿ ದರೋಡೆಕೋರರ ಬಂಧನ
Team Udayavani, May 12, 2022, 11:00 PM IST
ಬೆಂಗಳೂರು: ಕುರುಬರಹಳ್ಳಿ ಸೇತುವೆ ಬಳಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರ ಸುಲಿಗೆಗೆ ಸಿದ್ದತೆ ನಡೆಸಿದ್ದ ಏಳು ಮಂದಿ ದರೋಡೆಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒಕ್ಕಲಿಗ ಮಾರಮ್ಮ ಟೆಂಪಲ್ ಸಮೀಪದ ನಿವಾಸಿ ಚೇತನ್ ಅಲಿಯಾಸ್ ಹಂದಿ ಚೇತು (28), ಬಸವೇಶ್ವರ ನಗರದ ಕಿರ್ಲೋಸ್ಕರ್ ಕಾಲೋನಿಯ ನಿರಂಜನ (23), ಕಮಲನಗರದ ರಾಜು (34), ಉಮೇಶ್ (32), ಸಿ. ಜಗದೀಶ್ (28), ಚೇತನ್ (29), ಹೆಸರಘಟ್ಟದ ವೆಂಕಟೇಶ್ (28) ಬಂಧಿತರು.
ಆರೋಪಿಗಳಿಂದ ಕಬ್ಬಿಣದ ರಾಡ್‌ಗಳು, ಹಾಕಿ ಸ್ಟಿಕ್‌ಗಳು, ಕಬ್ಬಿಣದ ಪೈಪ್‌ಗ್ಳು, ಕಾರದಪುಡಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಆರೋಪಿಗಳು ಒಂಟಿಯಾಗಿ ಓಡಾಡುವವರು ಹಾಗೂ ಮಹಿಳೆಯರ ಜತೆ ಬರುವವರನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಿದ್ದತೆ ನಡೆಸಿದ್ದರು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು, ಮೊಬೈಲ್ ದರೋಡೆ ಮಾಡುವುದು ಉದ್ದೇಶವಾಗಿತ್ತು. ಈ ಮಾಹಿತಿ ಆಧರಿಸಿ ದಾಳಿ ನಡೆಸಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.