ಪ್ರವಾಸಿ ಮಿತ್ರರ ನೇಮಕಕ್ಕೆ ಚಿಂತನೆ : ಪ್ರಿಯಾಂಕ್ ಖರ್ಗೆ
Team Udayavani, Sep 17, 2017, 12:06 PM IST
ಬೆಂಗಳೂರು:ರಾಜ್ಯದ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ನೀಡುವುದರ ಜತೆಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೇ ‘ಪ್ರವಾಸಿ ಮಿತ್ರ’ರನ್ನು ನೇಮಕ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ‘ಓಲಾ’ ಸಂಸ್ಥೆ ಜಂಟಿಯಾಗಿ ಹಮ್ಮಿಕೊಂಡಿರುವ ‘ಜವಾಬ್ದಾರಿಯುತ ಪ್ರವಾಸೋದ್ಯಮ’ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪ್ರವಾಸಿ ತಾಣಗಳಲ್ಲಿ ಈಗಾಗಲೇ 500 ಗೃಹರಕ್ಷಕರನ್ನು ಪ್ರವಾಸಿ ಮಿತ್ರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದ್ದು, ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿ¨ªಾರೆ. ಇಲಾಖೆಯಿಂದಲೇ ಶಾಶ್ವತವಾಗಿ ಪ್ರವಾಸಿ ಮಿತ್ರರನ್ನು ನೇಮಕ ಮಾಡಿಕೊಳ್ಳುವ ಬಗ್ಗೆಯೂ ಪರಿಶೀಲನಡೆ ನಡೆಸಲಾಗಿದೆ ಎಂದು ಹೇಳಿದರು.
ಪ್ರವಾಸಿ ಮಿತ್ರರಾಗಿ ನೇಮಕ ಮಾಡಿಕೊಂಡಿರುವವರಿಗೆ ಪ್ರವಾಸಿಗರ ಬಳಿ ಹೇಗೆ ನಡೆದುಕೊಳ್ಳಬೇಕು ಹಾಗೂ ಅವರಿಗೆ ಭದ್ರತೆ ಒಗಿಸುವ ಸಂಬಂಧ ತರಬೇತಿ ನೀಡಲಾಗುವುದು ಎಂದರು.
14 ದಿನಗಳ ಪ್ರವಾಸ
ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಓಲಾ ಸಂಸ್ಥೆ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅದರಂತೆ ರಾಜ್ಯಗಳಲ್ಲಿನ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕೊಂಡೊಯ್ಯುವ 14 ದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಯಶಸ್ಸಿಗಾಗಿ ಚಿತ್ರನಟಿ ಶಹನಾಜ್ ರಹಾರಿ ಅವರು ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದ ಪ್ರವಾಸಿ ತಾಣಗಳಾದ ಹಂಪಿ, ಐಹೊಳೆ, ಬಾದಾಮಿ, ಪಟ್ಟದಕಲ್ಲು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಸಂಸ್ಕೃತಿ, ಅಲ್ಲಿನ ಜನಜೀವನ, ಆರ್ಥಿಕ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಅಭಿಯಾನ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪ್ರವಾಸಿಗರ ಮನೆ ಬಾಗಿಲಿಗೆ ಓಲಾ ಕಾರುಗಳು ತೆರಳಿ ಪ್ರವಾಸಿಗರನ್ನು ಅವರು ಬಯಸಿದ ತಾಣಗಳಿಗೆ ಕರೆದೊಯ್ದು ಮತ್ತೆ ಸುರಕ್ಷಿತವಾಗಿ ಮನೆಗೆ ಬಿಡುವ ಅಭಿಯಾನ ಇದಾಗಿದೆ. ಮಹಿಳೆಯರೂ ಕೂಡ ನಿರ್ಭೀತರಾಗಿ ಪ್ರವಾಸಿ ತಾಣಗಳಿಗೆ ಭೇಟಿ ಕೊಡಲು ಓಲಾ ಕಂಪನಿ ಸೂಕ್ತ ವ್ಯವಸ್ಥೆ ಮಾಡಲಿದೆ ಎಂದು ಹೇಳಿದರು.
ಓಲಾ ಕಂಪನಿಯ ಪ್ರಣಯ್ ಜೀವರಾಜ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.