![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 12, 2019, 12:35 AM IST
ಬೆಂಗಳೂರು: ಕ್ಯಾಬ್‌ಗಳಲ್ಲಿರುವ ಚೈಲ್ಡ್‌ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿàಯಗೊಳಿಸುವಂತೆ ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ, ಶುಕ್ರವಾರ ಒಂದೇ ದಿನದಲ್ಲಿ ಸಾವಿರಕ್ಕೂ ಅಧಿಕ ಕ್ಯಾಬ್‌ಗಳಲ್ಲಿನ ಚೈಲ್ಡ್‌ಲಾಕ್ ವ್ಯವಸ್ಥೆಯನ್ನು ತೆರವುಗೊಳಿಸಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಹನ ನಿಲುಗಡೆಗೆ ಹೆಚ್ಚುವರಿ ಸಾರಿಗೆ ಆಯುಕ್ತ ಸಿ.ಪಿ. ನಾರಾಯಣಸ್ವಾಮಿ ನೇತೃತ್ವದ ಅಧಿಕಾರಿಗಳ ತಂಡ, ಸಾವಿರಾರು ಕ್ಯಾಬ್‌ಗಳಲ್ಲಿ ಅಳವಡಿಸಿದ್ದ ಚೈಲ್ಡ್ ಲಾಕ್ ಡಿವೈಸ್ ಅನ್ನು ತೆರವುಗೊಳಿಸಿದರು. ಉಳಿದೆಲ್ಲ ವಾಹನಗಳಿಗೆ ಜ. 16ರ ಗಡುವು ವಿಧಿಸಿರುವ ಸಾರಿಗೆ ಇಲಾಖೆ, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.
ಕರ್ನಾಟಕ ಮೋಟಾರು ವಾಹನ ನಿಯಮ 1988ರ ಕಲಂ 2 (25)ರ ಪ್ರಕಾರ ಸಾರಿಗೆ ವಾಹನಗಳಲ್ಲಿ (ಕ್ಯಾಬ್‌ಗಳು) ಚೈಲ್ಡ್ ಲಾಕ್ ಸಿಸ್ಟ್‌ಂ ಅಳವಡಿಸಿಕೊಂಡು ಕಾರ್ಯಾಚರಣೆ ಮಾಡುವಂತಿಲ್ಲ. ಅಂತಹ ವಾಹನಗಳಿಗೆ ರಹದಾರಿ ಕೂಡ ನೀಡುವಂತಿಲ್ಲ. ಹೈಕೋರ್ಟ್ ಕೂಡ ಈಚೆಗೆ ಟೂರಿಸ್ಟ್ ಟ್ಯಾಕ್ಸಿ ಮತ್ತು ಆ್ಯಪ್ ಆಧಾರಿತ ಟ್ಯಾಕ್ಸಿಗಳಲ್ಲಿರುವ ಚೈಲ್ಡ್ ಲಾಕ್ ನಿಷ್ಕ್ರಿàಯಗೊಳಿಸಬೇಕು.
ಇದನ್ನು ದೃಢಪಡಿಸಿಕೊಳ್ಳತಕ್ಕದ್ದು. ಅಲ್ಲದೆ, ದೃಢೀಕರಣ ಇಲ್ಲದ ಯಾವುದೇ ವಾಹನಗಳಿಗೆ ಕಾರ್ಯಾಚರಣೆಗೆ ಅವಕಾಶ ನೀಡಬಾರದು ಎಂದು ಸೂಚಿಸಿತ್ತು. ಅದರಂತೆ ಸಾರಿಗೆ ಇಲಾಖೆಯು ಈ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.