ಕುಶನ ಕೊಂದ ಮೂವರ ಬಂಧನ
Team Udayavani, May 26, 2018, 11:51 AM IST
ಬೆಂಗಳೂರು: ರೌಡಿಶೀಟರ್ ಕುಶನನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿಲಕನಗರದ ಅರಸು ಕಾಲೋನಿ ನಿವಾಸಿ ನಂದ ಕುಮಾರ್, ಸಂತೋಷ್ ಗೌಡ ಹಾಗೂ ವೀವರ್ಸ್ ಕಾಲೋನಿ ನಿವಾಸಿ ಸೂರ್ಯ ಕುಮಾರ್ ಬಂಧಿತರು. ಮೂವರು ಆಟೋ ಚಾಲಕರಾಗಿದ್ದಾರೆ. ಆರೋಪಿಗಳ ಪೈಕಿ ನಂದ ಕುಮಾರ್ ಹಾಗೂ ರೌಡಿಶೀಟರ್ ಕುಶ ನಡುವೆ ಈ ಹಿಂದಿನಿಂದಲೂ ಗಲಾಟೆ, ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಶ ವಿರುದ್ಧ ಜೆ.ಪಿ.ನಗರ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದ್ದು, ನಗರದ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ ಸೇರೆ ಕೆಲ ಅಪರಾಧ ಪ್ರಕರಣಗಳು ದಾಖಲಾಗಿವೆ. ಈತನ ಸಹೋದರ ಲವ ಕೂಡ ರೌಡಿಶೀಟರ್ ಆಗಿದ್ದಾನೆ.
ಮಂಗಳವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಂಠಪೂರ್ತಿ ಮದ್ಯ ಸೇವಿಸಿದ್ದ ಕುಶ ನಂದಕುಮಾರ್‌ಗೆ ಕರೆ ಮಾಡಿ ಕೂಡಲೇ ಆಟೋ ನಿಲ್ದಾಣಕ್ಕೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಇದರಿಂದ ಆಕ್ರೋಶಗೊಂಡ ನಂದ, ತನ್ನ ಸಹಚರರ ಜತೆ ಆಟೋ ನಿಲ್ದಾಣಕ್ಕೆ ಬಂದಿದ್ದಾನೆ.
ಬಳಿಕ ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ತಡೆಯಲು ಹೋದ ಸೂರ್ಯಕುಮಾರ್ ಮೇಲೆಯೂ ಕುಶ ಹಲ್ಲೆ ನಡೆಸಿದ್ದಾನೆ. ಇದರಿಂದ ಕೋಪಗೊಂಡ ಸಂತೋಷ್ ಮತ್ತು ನಂದ ಚಾಕುವಿನಿಂದ ಕುಶನ ಎದೆ, ಹೊಟ್ಟೆ ಹಾಗೂ ಬೆನ್ನಿಗೆ ಇರಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.