ವೇಶ್ಯಾವಾಟಿಕೆಗೆ ದೂಡುತ್ತಿದ್ದ ಮೂವರ ಬಂಧನ
Team Udayavani, Jan 24, 2018, 11:57 AM IST
ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ನೆರೆ ರಾಜ್ಯಗಳಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಶಾಹಿದ್ ಶೇಖ್ (29), ಭರತ್ (32), ಸಲೀಂ ಶೇಖ್ (25) ಬಂಧಿತರು. ಇವರಿಂದ 3 ಮೊಬೈಲ್, 5 ಎಟಿಎಂ ಕಾರ್ಡ್ಗಳು ಹಾಗೂ 2 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಹೊರವಲಯದ ಚಿಕ್ಕಬಾಣಾವರ ಬಳಿಯ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ಬಾಡಿಗೆಗೆಂದು ಪ್ಲಾಟ್ಗಳನ್ನು ಪಡೆದಿದ್ದ ಆರೋಪಿಗಳು, ಅಲ್ಲಿಯೇ ಹೆಣ್ಣು ಮಕ್ಕಳನ್ನು ಇರಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಇಂಟರ್ನೆಟ್ ಮತ್ತು ಮೊಬೈಲ್ಗಳ ಮೂಲಕ ಟೆಕ್ಕಿಗಳು ಮತ್ತು ಶ್ರೀಮಂತ ವಿದ್ಯಾರ್ಥಿಗಳನ್ನು ಬುಕ್ ಮಾಡಿ ಸ್ನೇಹಿತರು ಮತ್ತು ಸಂಬಂಧಿಗಳ ಸೋಗಿನಲ್ಲಿ ಪ್ಲಾಟ್ಗೆ ಕರೆಸಿಕೊಳ್ಳುತ್ತಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಟೆಕ್ಕಿಗಳ ಸೋಗಿನಲ್ಲಿ ಆರೋಪಿಗಳನ್ನು ಸಂಪರ್ಕಿಸಿದ್ದಾರೆ. ಈ ವಿಶೇಷ ಕಾರ್ಯಾಚರಣೆ ವೇಳೆ ಮೂವರನ್ನು ಬಂಧಿಸಿದ್ದಾರೆ. ನಾಲ್ವರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.