ಗಾಂಜಾ ಮಾರುತ್ತಿದ್ದ ಮೂವರ ಬಂಧನ
Team Udayavani, Jan 12, 2018, 11:41 AM IST
ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾಫ್ಟ್ವೇರ್ ಉದ್ಯೋಗಿಗಳಿಗೆ ಗಾಂಜಾ ಹಾಗೂ ಇತರ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾದ ಉಗೋಚುಕ್ವಾ ವಿಕ್ಟರ್ ನ್ವಾಸೋ, ಜಾನ್ ಮೈಸನ್ ಸಿಮೋನ್, ಉಮೇಶ್ಕುಮಾರ್ ಬಂಧಿತರು. ಮೂವರು ಆರೋಪಿಗಳು ಹಲವು ತಿಂಗಳುಗಳಿಂದ ಪರಸ್ಪರ ಪರಿಚಯವಿದ್ದು ಮಾದಕ ವಸ್ತುಗಳ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಓರಿಸ್ಸಾದಿಂದ ಗಾಂಜಾ ತರಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು.
ಅದೇ ರೀತಿ ಇತ್ತೀಚೆಗೆ ಜೆಪಿ ನಗರದ ಸ್ವಾಭಿಮಾನಿ ಕಾರಂಜಿ ಬ್ಲಾಕ್ ಬಳಿ, ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಲಾಯಿತು. ಅಲ್ಲದೆ ಆರೋಪಿಗಳ ಬಳಿಯಿದ್ದ 8 ಕೆ.ಜಿ ಗಾಂಜಾ, 120 ಗ್ರಾಂ ಹಶೀಶ್ ಸೇರಿದಂತೆ ಮತ್ತಿತರ ಮಾದಕವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.