ಮೂವರು ಗಾಂಜಾ ಮಾರಾಟಗಾರರ ಸೆರೆ
Team Udayavani, Oct 4, 2017, 11:42 AM IST
ಬೆಂಗಳೂರು: ವಿಶ್ವೇಶ್ವರಪುರದ ರಾಘವೇಂದ್ರ ದೇವಾಲಯದ ಬಳಿ ಪಾಳು ಬಿದ್ದ ಮನೆಯೊಂದರ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ವಿವಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ಇಮ್ರಾನ್ (20), ಆರ್.ಟಿ.ನಗರದ ಮೊಹಮ್ಮದ್ ಕಲೀಲ್ (23) ಹಾಗೂ ಜೆ.ಪಿ.ನಗರದ ರವಿ (24) ಬಂಧಿತರು. ಇವರಿಂದ 1 ಕೆ.ಜಿ. 600 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಬೇರೆಡೆಯಿಂದ ಗಾಂಜಾ ತಂದು ಪಾಳು ಮನೆಯಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳನ್ನು ಕಟ್ಟುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶ ಹಾಗೂ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಅಕ್ರಮವಾಗಿ ಬೆಳೆಯುವ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.