ಸ್ಟ್ರಾಂಗ್ ರೂಂಗೆ ಮೂರು ಹಂತದ ಭದ್ರತೆ
Team Udayavani, May 5, 2019, 3:06 AM IST
ಬೆಂಗಳೂರು: ನಗರ ವ್ಯಾಪ್ತಿಯ ಮೂರು ಲೋಕಸಭೆ ಕ್ಷೇತ್ರಗಳ ಮತಗಳು ಮೂರು ಹಂತದ ಭದ್ರತೆಯೊಂದಿಗೆ ಪ್ರತ್ಯೇಕ ಸ್ಟ್ರಾಂಗ್ ರೂಂಗಳಲ್ಲಿ ಸುರಕ್ಷಿತವಾಗಿವೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಮತಯಂತ್ರಗಳು ವಸಂತ ನಗರದ ಮೌಂಟ್‌ಕಾರ್ಮಲ್ ಕಾಲೇಜು, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಮತಯಂತ್ರಗಳು ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜು ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾಕ್ಷೇತ್ರದ ಮತಯಂತ್ರಗಳು ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿದ್ದು, ಇವುಗಳಿಗೆ ಮೊದಲ ಹಂತದಲ್ಲಿ ಕೇಂದ್ರ ಮೀಸಲು ಪಡೆ (ಪ್ಯಾರಾ ಮಿಲಿಟರಿ ಸಿಬ್ಬಂದಿ), ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಮೀಸಲು ಪಡೆ ಹಾಗೂ ಮೂರನೇ ಹಂತದಲ್ಲಿ ರಾಜ್ಯ ಪೊಲೀಸ್ ಸಿಬ್ಬಂದಿ ಭದ್ರತೆ ಒದಗಿಸಿದ್ದಾರೆ.
ಇನ್ನು ಸ್ಟ್ರಾಂಗ್ ರೂಂನ ಕಿಟಿಕಿಗಳನ್ನು ಸಂಪೂರ್ಣ ಸಿಮೆಂಟ್‌ನಿಂದ ಮುಚ್ಚಲಾಗಿದ್ದು, ಬಾಗಿಲುಗಳಿಗೆ ಚುನಾವಣಾ ಆಯೋಗ ಸೀಲ್‌ಗಳನ್ನು ಹಾಕಿದೆ. ಕೊಠಡಿಗೆ ವಿದ್ಯತ್ ಸಂಪರ್ಕ ಕಡಿತಗೊಳಿಸಲಾಗಿದೆ. ಇವುಗಳ ಜತೆಗೆ ನೂರಾರು ಸಿಸಿ ಕ್ಯಾಮೆರಾಗಳ ಕಣ್ಗಾವಲಿದ್ದು, ಕಾಲೇಜುಗಳಿಗೆ ಭೇಟಿ ನೀಡುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ.
ಮೂರು ಕಾಲೇಜುಗಳಲ್ಲಿ ಮಹಡಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇಡಲಾಗಿದೆ. ಇನ್ನು ಮೇ 23ರಂದು ಸ್ಟ್ರಾಂಗ್ ರೂಂ ಪಕ್ಕದಲ್ಲಿಯೇ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಸ್ಟ್ರಾಂಗ್‌ರೂಂಗಳ ಭದ್ರತೆ ವೀಕ್ಷಣೆಗೆ ಬರುವ ಚುನಾವಣಾ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಜಿಲ್ಲಾ ಚುನಾವಣಾಧಿಕಾರಿಗಳ ಒಪ್ಪಿಗೆ ಪತ್ರ ತಂದರೆ ಮಾತ್ರ ಭದ್ರತೆ ಕುರಿತು ಮಾಹಿತಿ ನೀಡಲಾಗುತ್ತಿದೆ.
ಎಲ್ಲಿಲ್ಲಿ ಎಷ್ಟೆಷ್ಟು ಸಿಬ್ಬಂದಿ ನಿಯೋಜನೆ?
* ಮೌಂಟ್ ಕಾರ್ಮಲ್ ಕಾಲೇಜಿನ ಬಳಿ 24 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 24 ರಾಜ್ಯ ಮೀಸಲು ಪಡೆ ಸಿಬ್ಬಂದಿ, 46 ಸಿವಿಲ್ ಪೊಲೀಸ್ ಸಿಬ್ಬಂದಿ, 35 ಸಿಸಿ ಕ್ಯಾಮೆರಾ
* ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ 24 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 24 ರಾಜ್ಯ ಮೀಸಲು ಪಡೆ ಸಿಬ್ಬಂದಿ, 42 ಸಿವಿಲ್ ಪೊಲೀಸ್ ಸಿಬ್ಬಂದಿ, 16 ಸಿಸಿ ಕ್ಯಾಮೆರಾ
* ಸೇಂಟ್ ಜೋಸೆಫ್ ಕಾಲೇಜಿನಲ್ಲಿ 25 ಕೇಂದ್ರ ಮೀಸಲು ಪಡೆ ಸಿಬ್ಬಂದಿ, 28 ರಾಜ್ಯ ಮೀಸಲು ಪಡೆಯ ಸಿಬ್ಬಂದಿ, 32 ಸಿವಿಲ್ ಪೊಲೀಸ್ ಸಿಬ್ಬಂದಿ, 62 ಸಿಸಿ ಕ್ಯಾಮೆರಾ
* ಮತಯಂತ್ರಗಳಿರುವ ಪ್ರತಿ ಕಾಲೇಜಿನಲ್ಲಿ ಒಬ್ಬ ಎಸಿಪಿ, 3 ಸಬ್‌ಇಸ್ಪೆಕ್ಟರ್, 9 ಎಸ್‌ಐಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ಭದ್ರತಾ ಸಿಬ್ಬಂದಿಗಳು 24*7, ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.