ಸಹಾಯ ದೂರುಗಳಿಗೆ ಕಾಲಮಿತಿಯಲ್ಲೇ ಪರಿಹಾರ


Team Udayavani, Oct 16, 2019, 3:09 AM IST

bbmp2

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ “ಸಹಾಯ ಆ್ಯಪ್‌’ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ.

ಮುಖ್ಯವಾಗಿ ಘನತ್ಯಾಜ್ಯ ನಿರ್ವಹಣೆಯ ಸಮಸ್ಯೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಾಲಮಿತಿಯ ಒಳಗೆ ಪರಿಹರಿಸುವುದಕ್ಕೆ ಬಿಬಿಎಂಪಿಯ ಸಹಾಯ ಆ್ಯಪ್‌ಗೆ ಸರ್ವಿಸ್‌ ಲೆವೆಲ್‌ ಅಗ್ರಿಮೆಂಟ್‌ ಎನ್ನುವ ಸಾಫ್ಟ್ವೇರ್‌ ಅಳವಡಿಸುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು 12 ಗಂಟೆಗಳ ಒಳಗೆ ಮುಗಿಸಬೇಕು ಎನ್ನುವ ನಿಯಮವಿದೆ. ಬಿಬಿಎಂಪಿ ಸಹಾಯ ಆ್ಯಪ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಹರಿಸುತ್ತಿದೆಯಾದರೂ, ಕಾಲಮಿತಿಯ ಒಳಗೆ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ. ಇದೇ ಕಾರಣಕ್ಕೆ ಕಳೆದ ವರ್ಷ ನಡೆದ ಸ್ವಚ್ಛ ಸರ್ವೇಯಲ್ಲಿ ನಿಗದಿತ ವಿಷಯದಲ್ಲಿ ಬಿಬಿಎಂಪಿ ಸೊನ್ನೆ ಸುತ್ತಿತ್ತು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿಯು ಸಮಸ್ಯೆಗಳನ್ನು ಕಾಲಮಿತಿಯ ಒಳಗಾಗಿ ಪರಿಹರಿಸುವುದಕ್ಕೆ ಆದ್ಯತೆ ನೀಡಲು ಮುಂದಾಗಿದೆ. ಇದರ ಜತೆಗೆ ಯಾವ ಸಮಸ್ಯೆಗಳು ಹೆಚ್ಚು ದಾಖಲಾಗುತ್ತಿವೆ, ಯಾವ ಕಾರಣಕ್ಕೆ ಈ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಬಗ್ಗೆಯೂ ಪರಿಶೀಲನೆ ನಡೆಸಲು ಮುಂದಾಗಿದೆ.

ಗಣನೀಯ ಪ್ರಮಾಣದಲ್ಲಿ ದೂರು ದಾಖಲು: ಬಿಬಿಎಂಪಿಯ ಸಹಾಯ ಆ್ಯಪ್‌ನಲ್ಲಿ ಈ ವರ್ಷ ಜನವರಿಯಿಂದ ಅ.14ರ ವರೆಗೆ ಒಟ್ಟು 93,232 ದೂರುಗಳು ದಾಖಲಾಗಿದ್ದು, ಇದರಲ್ಲಿ 53,360 ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಇನ್ನು 23,958 ದೂರುಗಳು ಪ್ರಗತಿ ಹಂತದಲ್ಲಿವೆ. ದಿರ್ಘಾವಧಿಯಲ್ಲಿ ಪರಿಹರಿಸ ಬೇಕಾಗಿರುವ 1,911 ದೂರುಗಳಿವೆ ಎಂದು ಗುರುತಿಸಲಾಗಿದೆ.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ದೂರುಗಳೇ ಹೆಚ್ಚು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ದೂರುಗಳು ಹೆಚ್ಚು ದಾಖಲಾಗುತ್ತಿವೆ. ಬ್ಲಾಕ್‌ಸ್ಪಾಟ್‌ಗಳ ನಿರ್ಮಾಣ, ರಸ್ತೆ ಬದಿಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ತ್ಯಾಜ್ಯ ವಿಲೇವಾರಿಗೆ ವಾಹನಗಳು ಬರದೆ ಇರುವ ಬಗ್ಗೆಯೂ ದೂರುಗಳು ದಾಖಲಾಗುತ್ತಿವೆ.

ಈ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಫ್ಟ್ವೇರ್‌ ಅಭಿವೃದ್ಧಿ ಮಾಡಲಾಗುತ್ತಿದೆ. ಉಳಿದಂತೆ ಶಿಕ್ಷಣಕ್ಕೆ ಸಂಬಂಧಿಸಿದಂತೆ 21 ದೂರು, ನಗರ ಯೋಜನೆಗೆ ಸಂಬಂಧಿಸಿ 62, ಆರೋಗ್ಯ 136, ತೋಟಗಾರಿಕೆ 437, ಹಣಕಾಸು 1,142 ಹಾಗೂ ಕಲ್ಯಾಣ ವಿಭಾಗ 22 ಮಾರುಕಟ್ಟೆಯಲ್ಲಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ 84 ದೂರುಗಳು ದಾಖಲಾಗಿವೆ.

ಆಯುಕ್ತರ ಖಾತೆಯಲ್ಲೂ ದೂರುಗಳ ಸುರಿಮಳೆ!: ಬಿಬಿಎಂಪಿಯ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ಸಾರ್ವಜನಿಕರು ಇಲ್ಲೂ ದೂರುಗಳನ್ನು ಸಲ್ಲಿಸುತ್ತಿದ್ದಾರೆ! ಆಯುಕ್ತರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳಲ್ಲೂ ಸಾರ್ವಜನಿಕರು ಚಿತ್ರ ಸಹಿತ ದೂರು ದಾಖಲಿಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದರಲ್ಲಿ ಕೆಲವು ದೂರುಗಳಿಗೆ ಆಯುಕ್ತರು ಸ್ಪಂದಿಸಿದ್ದಾರೆ.

ಸಾರ್ವಜನಿಕರು ದಾಖಲಿಸುವ ದೂರುಗಳನ್ನು ಕಾಲಮಿತಿಯ ಒಳಗೆ ಪರಿಹರಿಸಲು ಆದ್ಯತೆ ನೀಡಲಾಗುತ್ತಿದೆ. ಸಮಸ್ಯೆ ಸರ್ಮಪಕವಾಗಿ ಪರಿಹಾರವಾಗದಿದ್ದರೆ ಮತ್ತೆ ದೂರು ದಾಖಲಿಸಬಹುದು. ಈ ರೀತಿ ಎರಡನೇ ಬಾರಿ ದಾಖಲಾಗುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ.
-ಲೋಕೇಶ್‌, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

ವಿಭಾಗ ನಿಗದಿ ಪ್ರಗತಿ ಪರಿಹಾರ ಒಟ್ಟು
ಜಾಹೀರಾತು 1 22 92 116
ಪ್ರಾಣಿಗಳ ಸಮಸ್ಯೆ 1,353 3062 3803 8,294
ಒತ್ತುವರಿ 6 63 54 125
ಎಂಜಿನಿಯರಿಂಗ್‌ 6,431 14036 25,707 49,105
ಅರಣ್ಯ ಇಲಾಖೆ 471 1,408 1920 3,809
ಕೆರೆ 7 13 450 528
ಘನತ್ಯಾಜ್ಯ ನಿರ್ವಹಣೆ 3,309 4,547 19,448 28,288

* ಹಿತೇಶ್‌ ವೈ.

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.