ಹಜ್ ಭವನಕ್ಕೆ ಟಿಪ್ಪು ಹೆಸರು ಚರ್ಚಿಸಿ ತೀರ್ಮಾನ: ಜಮೀರ್
Team Udayavani, Jun 23, 2018, 6:05 AM IST
ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡಬೇಕೆಂಬ ಪ್ರಸ್ತಾಪ ಬಂದಿದ್ದು, ಈ ಬಗ್ಗೆ ಎಲ್ಲರೊಂದಿಗೂ
ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಜ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಪ್ರಸ್ತಾಪ ಕಳೆದ ವರ್ಷ ಹಜ್ ಯಾತ್ರೆಯ ಸಂದರ್ಭದಲ್ಲಿಯೇ ಬಂದಿತ್ತು. ಅದೊಂದು ಸ್ವತಂತ್ರ ಸಂಸ್ಥೆಯಾಗಿದ್ದು, ಹಜ್ ಸಮಿತಿಯವರು ಟಿಪ್ಪು ಸುಲ್ತಾನ್ ಹಜ್ ಘರ್ ಎಂದು ಹೆಸರಿಡುವಂತೆ ಮನವಿ ಮಾಡಿದ್ದರು.
ಇದೇ ವಿಚಾರ ಹಜ್ ಕಮಿಟಿ ಪರಿಶೀಲನಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಟಿಪ್ಪು ಜಯಂತಿ ಆಚರಣೆಗೂ ಹಜ್ ಭವನಕ್ಕೆ ಟಿಪ್ಪು ಹೆಸರಿಡುವುದಕ್ಕೂ ಸಂಬಂಧ ಇಲ್ಲ. ಈ ಬಗ್ಗೆ ಪಕ್ಷದ
ಹಿರಿಯ ನಾಯಕರು ಹಾಗೂ ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಅವರೊಂ ದಿಗೂ ಚರ್ಚಿಸಿ ತೀರ್ಮಾನ
ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಬಿಜೆಪಿ ವಿರೋಧಿಸುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ, ತನ್ವೀರ್ ಸೇಠ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ನಾಯಕ ಆಗಲು
ರಾಜಕೀಯಕ್ಕೆ ಬಂದಿಲ್ಲ. ಯಾರನ್ನೂ ಓವರ್ ಟೇಕ್ ಮಾಡಲ್ಲ. ಸಮಾಜ ಸೇವಕನಾಗಲು ಬಂದಿದ್ದೇನೆ’
ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.