ತಿರುಮಲ ಸ್ವಾಮಿ ಬ್ರಹ್ಮ ರಥೋತ್ಸವ
Team Udayavani, Feb 3, 2018, 1:13 PM IST
ದೊಮ್ಮಸಂದ್ರ: ಸಮೀಪದ ತಿಗಳ ಚೌಡದೇನಹಳ್ಳಿಯಲ್ಲಿ ಗ್ರಾಮ ದೇವತೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಹಾಗೂ ಶ್ರೀದೇವಿ ಭೂದೇವಿ ಸಮೇತ ತಿರುಮಲ ಸ್ವಾಮಿ ಬ್ರಹ್ಮರಥೋತ್ಸವ ಸಂಭ್ರಮದಿಂದ ನೆರವೇರಿತು.
ಮುಂಜಾನೆ ಧ್ವಜಾರೋಹಣ ನೆರವೇರಿಸಿ ದೊಮ್ಮಸಂದ್ರದ ಮುತ್ಯಾಲಮ್ಮ ದೇವಿ ದೇವಾಲಯದಲ್ಲಿ ಗಂಗಾ ಪೂಜೆ ನೆರವೇರಿಸಿದ ಬಳಿಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಗಿತು. ಮಹೋತ್ಸವದ ಪ್ರಯುಕ್ತ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಇದೇ ವೇಳೆ ಗ್ರಾಮದ ಬೀದಿಗಳಲ್ಲಿ ದ್ರೌಪತಮ್ಮ ದೇವಿಯ ಹಸಿ ಕರಗ ಮಹೋತ್ಸವ, ಮಾರಮ್ಮ ದೇವಿ ಹಾಗೂ ಗ್ರಾಮ ದೇವತೆಗಳಿಗೆ ದೀಪೋತ್ಸವ ನೆರವೇರಿತು.
ಗುರುವಾರ ಬೆಳಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭೂದೇವಿ, ಶ್ರೀದೇವಿ ಸಮೇತ ತಿರುಮಲ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಿತು. ವೀರಗಾಸೆ, ಡೊಳ್ಳು ಕುಣಿತ, ನಂದಿಕೋಲು, ಪೂಜಾ ಕುಣಿತ, ಪಟದ ಕುಣಿತ ಸೇರಿ ಹಲವು ಕಲಾ ತಂಡಗಳ ಕಲಾವಿದರು ರಥೋತ್ಸವಕ್ಕೆ ಮೆರುಗು ತಂದರು.
ಶುಕ್ರವಾರ ಅಗ್ನಿಕುಂಡ ಪ್ರವೇಶ, ವಸಂತೋತ್ಸವ, ಏಳು ಕಲಶಗಳ ನೃತ್ಯ, 22 ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು ಎಂದು ನಾಗದೇವತಾ ಪಡವಟಮ್ಮ ಸೇವಾ ಸಮಿತಿಯ ಮುಖ್ಯಸ್ಥೆ ಸುಶೀಲಮ್ಮ ತಿಳಿಸಿದರು. ಜಾತ್ರೆಯ ಅಂಗವಾಗಿ ಸಮಿತಿಯಿಂದ ಮೂರು ದಿನವೂ ಅನ್ನ ದಾಸೋಹ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.