ಟಿ.ಎಂ. ವಿಜಯಭಾಸ್ಕರ್ ಮುಖ್ಯ ಕಾರ್ಯದರ್ಶಿ?
Team Udayavani, Jun 30, 2018, 6:25 AM IST
ಬೆಂಗಳೂರು: ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಅಧಿಕಾರಾವಧಿ ಶನಿವಾರ
ಮುಕ್ತಾಯವಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನೇಮಕವಾಗುವ ಸಾಧ್ಯತೆ ಇದೆ.
ಸೇವಾ ಹಿರಿತನದಲ್ಲಿ 1982ರ ಬ್ಯಾಚ್ನ ಅಧಿಕಾರಿಗಳಾದ ಕೇಂದ್ರ ಸೇವೆಯಲ್ಲಿರುವ ಲತಾ ಕೃಷ್ಣರಾವ್ ಹಾಗೂ ಎಸ್.
ಕೆ.ಪಟ್ನಾಯಕ್ ಅವರ ಅವಧಿ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯವಾಗಲಿರುವುದರಿಂದ, 1983ರ ಬ್ಯಾಚ್ನ ಹಿರಿಯ ಅಧಿಕಾರಿಯಾಗಿರುವ ಟಿ.ಎಂ.ವಿಜಯಭಾಸ್ಕರ್ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಅದೇ ಬ್ಯಾಚ್ನ ಇನ್ನೊಬ್ಬ ಹಿರಿಯ ಅಧಿಕಾರಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಡಿ.ವಿ.ಪ್ರಸಾದ್ ಅವರ ಹೆಸರೂ ಕೂಡ ಸಿಎಸ್ ರೇಸ್ನಲ್ಲಿ ಕೇಳಿ ಬಂದಿತ್ತು. ಆದರೆ, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕ ಜವಾಬ್ದಾರಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ವಹಿಸಿದ್ದರಿಂದ ಅವರು ಟಿ.ಎಂ. ವಿಜಯಭಾಸ್ಕರ್ ಅವರನ್ನು ನೇಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 2020ರ ವರೆಗೂ ವಿಜಯಭಾಸ್ಕರ್ ಅವರ ಸೇವಾವಧಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.