ಒಂಭತ್ತು ತಿಂಗಳ ಕೆಲಸಕ್ಕೆ ಒಂಭತ್ತು ವರ್ಷ!

Team Udayavani, Sep 6, 2019, 9:37 AM IST

bng-tdy-2

ಜಕ್ಕೂರು ಬಳಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ.

ಬೆಂಗಳೂರು: ಮನಸ್ಸು ಮಾಡಿದರೆ ಒಂಭತ್ತು ತಿಂಗಳಲ್ಲಿ ಮುಗಿಸಬಹುದಾಗಿದ್ದ ಜಕ್ಕೂರು ಬಳಿಯ ಕಾಮಗಾರಿಯೊಂದು ಬಿಬಿಎಂಪಿ ಮತ್ತು ರೈಲ್ವೆ ಅಧಿಕಾರಿಗಳ ಯಡವಟ್ಟಿನಿಂದ ಒಂಭತ್ತು ವರ್ಷ ಕಳೆದರೂ ನಿರಂತರವಾಗಿ ಸಾಗಿದೆ!

ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಜಕ್ಕೂರು ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ನಿರ್ಮಿಸಲು ಯೋಜನೆ ರೂಪಿಸಿದ ಬಿಬಿಎಂಪಿ ಮತ್ತು ರೈಲ್ವೆ ಇಲಾಖೆ, ಕಾಮಗಾರಿಗೆ ಪೂರ್ವಸಿದ್ಧತೆ ನಡೆಸದೆ ಕಾಮಗಾರಿ ಪ್ರಾರಂಭಿಸಿದ್ದರಿಂದ ಒಂಬತ್ತು ತಿಂಗಳಲ್ಲಿ ಮುಗಿಯಬೇಕಿದ್ದ ಕಾಮಗಾರಿ ಒಂಬತ್ತು ವರ್ಷವಾದರೂ ಪೂರ್ಣಗೊಂಡಿಲ್ಲ.

ಜಕ್ಕೂರು-ಯಲಹಂಕ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದಿಂದಾಗಿ ಕಳೆದ ಒಂಬತ್ತು ವರ್ಷಗಳಿಂದ ಹತ್ತಾರು ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಜಕ್ಕೂರು, ಮಾನ್ಯತಾ ಟೆಕ್‌ಪಾರ್ಕ್‌, ಶ್ರೀರಾಮಪುರ, ಸಂಪಿಗೆಹಳ್ಳಿ, ಸುರಭಿ ಬಡಾವಣೆ, ಶಿವನಹಳ್ಳಿ, ಟೆಲಿಕಾಂ ಬಡಾವಣೆ, ಯಲಹಂಕ ಭಾಗಗಳಿಗೆ ಪ್ರಯಾಣಿಸುವ 60 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಜಕ್ಕೂರಿನಿಂದ ಯಲಹಂಕ ನಡುವಿನ ಮೂರು ಕಿ.ಮೀ. ಮಾರ್ಗ ಕ್ರಮಿಸಲು 5ರಿಂದ 7 ನಿಮಿಷ ಸಾಕಾಗಿತ್ತು, ಆದರೆ ಈಗ ದಾರಿ ಹಾಳಾಗಿರುವ ಕಾರಣ ಪರ್ಯಾಯವಾಗಿ 6 ಕಿ.ಮೀ. ದೂರದ ಮಾರ್ಗ ಬಳಸಲಾಗುತ್ತಿದ್ದು, ಕ್ರಮಿಸಲು 45 ನಿಮಿಷ ಆಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸಂಸದ ಡಿ.ವಿ. ಸದಾನಂದಗೌಡ ಮತ್ತು ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ಕೃಷ್ಣಭೈರೇಗೌಡ ಅವರಿಗೆ ಪತ್ರ ಬರೆದರೂ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಟೆಂಡರ್‌ ಆಹ್ವಾನಿಸಲಾಗಿತ್ತು. ಅದರಂತೆ ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಎಂಜಿನಿಯರಿಂಗ್‌ ವಿಭಾಗ ಸಿದ್ಧತೆ ನಡೆಸಿಕೊಂಡು, ಬಿಬಿಎಂಪಿಗೆ ಭೂಸ್ವಾಧೀನ ಪಡಿಸಿಕೊಡಲು ತಿಳಿಸಿತ್ತು. ಮೇಲ್ಸೇತುವೆ ನಿರ್ಮಾಣಕ್ಕಾಗಿ 40 ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಬಿಬಿಎಂಪಿ ತೀರ್ಮಾನಿಸಿ, ಅವುಗಳ ಪೈಕಿ 37 ಮನೆಗಳನ್ನು ಸ್ವಾಧೀನಪಡಿಸಿಕೊಂಡಿತ್ತು. ಉಳಿದ 3 ನಿವೇಶನಗಳ ಮಾಲಿಕರು ಹೆಚ್ಚಿನ ಭೂಸ್ವಾಧೀನ ಪರಿಹಾರಕ್ಕೆ ಕೋರ್ಟ್‌ನಲ್ಲಿ ಹೋರಾಟ ನಡೆಸಿ, ಕಾಮಗಾರಿಗೆ ತಡೆ ತಂದಿದ್ದಾರೆ. ಹಾಗಾಗಿ, ಒಂಬತ್ತು ವರ್ಷಗಳಿಂದ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿ ಹಂತದಲ್ಲಿದೆ.

ಐದು ಪಟ್ಟು ವೆಚ್ಚ ಹೆಚ್ಚಳ:

2010ರಲ್ಲಿ ಪ್ರಸಕ್ತ ಕಾಮಗಾರಿಗೆ 20 ಕೋಟಿ ರೂ. ವೆಚ್ಚ ಅಂದಾಜಿಸಲಾಗಿತ್ತು. ಆದರೆ, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕಾರಣ ನೂರು ಕೋಟಿ ರೂ.ಗೆ ಏರಿಕೆಯಾಗಿದೆ. ಕಾಮಗಾರಿ ಪ್ರಾರಂಭಿಸಿದ ಬಳಿಕ ಭೂಸ್ವಾಧೀನಕ್ಕೆ ಮುಂದಾದ ಕಾರಣ ಪರಿಹಾರದ ಮೊತ್ತ ದುಪ್ಪಟವಾಗಿದೆ.

.ಲೋಕೇಶ್ ರಾಮ್

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.