ಮಾಧ್ಯಮಗಳ ಬಗ್ಗೆ ಎಚ್ಚರ ವಹಿಸಿ: ಯಡಿಯೂರಪ್ಪ
Team Udayavani, Jan 31, 2017, 11:55 AM IST
ಬೆಂಗಳೂರು: ರಾಜಕೀಯ ಪಕ್ಷಗಳ ಮುಖಂಡರ ಮೇಲೆ ಮಾಧ್ಯಮಗಳ ಕಣ್ಣು ಸದಾ ಇರುವುದರಿಂದ ಹೇಳಿಕೆ ಗಳನ್ನು ನೀಡುವ ವೇಳೆ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ಪಕ್ಷದ ವಕ್ತಾರರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿ ಯೂರಪ್ಪ ಕಿವಿಮಾತು ಹೇಳಿದರು. ನಗರದ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮಗಳಿಂದ ಪಕ್ಷಗಳ ಪ್ರತಿಷ್ಠೆ ಹೆಚ್ಚಿಸಲು ಅಥವಾ ಕುಗ್ಗಿಸಲು ಸಾಧ್ಯ. ಸುದ್ದಿಯ ಪೈಪೋಟಿಯಲ್ಲಿರುವ ಮಾಧ್ಯಮಗಳು ನಮ್ಮ ಲೋಪದೋ ಷಗಳನ್ನು ಪತ್ತೆ ಹಚ್ಚಿ ಬಹುಬೇಗ ಜನರಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿವೆ. ಹೀಗಾಗಿ ಜನಪ್ರಿಯತೆಗೆ ಕಟ್ಟುಬಿದ್ದು ಮಾಧ್ಯಮಗಳಿಗೆ ಆಹಾರವಾಗದಂತೆ ಎಚ್ಚರವಹಿಸುವುದರ ಜತೆಗೆ ಸಾರ್ವಜ ನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡುವಾಗ ಮೈಯೆಲ್ಲಾ ಕಣ್ಣಾಗಿಸಿ ಕೊಂಡಿರಬೇಕು ಎಂದರು.
ಮಾಧ್ಯಮಗಳಲ್ಲಿ ಪಕ್ಷದ ಬಗ್ಗೆ ನಕಾರಾತ್ಮಕ ವಿಚಾರಗಳು ಬರದಂತೆ ಎಚ್ಚರ ವಹಿಸಬೇಕು. ಒಂದು ಬಾರಿ ನಕರಾತ್ಮಕ ವಿಚಾರ ಬಂದಲ್ಲಿ ಅದನ್ನು ಸರಿಪಡಿಸಲು ಹರಸಾಹಸ ಮಾಡಬೇಕಾಗುತ್ತದೆ. ಇದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ಮಾಧ್ಯಮಗಳಿಗೆ ಆಹಾರವಾಗದಂತೆ ಕಾರ್ಯ ನಿರ್ವಹಿಸಬೇಕಾಗಿದ್ದು, ಪಕ್ಷದ ಹೊಣೆಗಾರಿಕೆಗಳನ್ನು ಜವಾ ಬ್ದಾರಿಯುತವಾಗಿ ನಿಭಾಯಿಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವು ನಾಲ್ಕನೆ ಅಂಗವಾಗಿದ್ದು, ಯಾರೊಬ್ಬರೂ ಅದರ ಬಗ್ಗೆ ಉದಾಸೀನ ತೋರಬಾರದು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಕಣ್ಣಿಟ್ಟು ಸದಾ ಜಾಗೃತರಾಗಬೇಕು. ಕಾರ್ಯಕರ್ತರು, ಮುಖಂಡರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವ ಮುನ್ನ ಕೇಂದ್ರ ಕಚೇರಿಗೆ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಮಾಜಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಚುನಾವಣೆಗೆ 400 ದಿನಗಳ ಮಾತ್ರ ಇದೆ. ಈ ಹಂತದಲ್ಲಿ ನಾವಾಡುವ ಪ್ರತಿಮಾತು, ಹೇಳಿಕೆಗಳು ಪಕ್ಷದ ಬಲವರ್ಧನೆಗೆ ಪೂರಕ ವಾಗಿರಬೇಕು. ಯಾರೂ, ಯಾವುದೇ ಕಾರಣಕ್ಕೂ ಬಹಿರಂಗವಾಗಿ ಪಕ್ಷದ ವಿರುದ್ಧ ಮಾತನಾಡಬಾರದು.
ಮಾಧ್ಯಮಗಳ ಮುಂದೆ ಯಾವ ರೀತಿ ಹೇಳಿಕೆಗಳನ್ನು ನೀಡಬೇಕು ಎಂಬುದರ ಬಗ್ಗೆ ತಿಳಿಸಿಕೊಡುವುದಕ್ಕಾಗಿಯೇ ಮಾಧ್ಯಮ ಕಾರ್ಯಾಗಾರ ಆಯೋಜಿ ಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಎನ್.ರವಿಕುಮಾರ್, ಬಿಜೆಪಿ ರಾಜ್ಯ ವಕ್ತಾರ ಗೋ.ಮಧುಸೂದನ್, ಶಾಸಕ ಅರವಿಂದ ಲಿಂಬಾವಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.