ಶೋಷಣೆ ತಡೆಗೆ ರಾಜಕೀಯ ಪ್ರಾತಿನಿಧ್ಯ
Team Udayavani, Mar 26, 2017, 12:24 PM IST
ಬೆಂಗಳೂರು: ಶೋಷಣೆಯಿಂದ ಮುಕ್ತರಾಗಲು ಮಹಿಳೆಯರು ಸುಶಿಕ್ಷಿತರಾಗುವುದರ ಜತೆಗೆ ಅವರಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯವೂ ಸಿಗುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಈ ನಿಟ್ಟಿನಲ್ಲಿ ಶಾಸನ ರಚನೆಯಲ್ಲೂ ಮಹಿಳೆಯರು ತೊಡಗಿಸಿಕೊಳ್ಳುವಂತಾಗಲು ಸಂಸತ್ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಕನಿಷ್ಠ ಶೇ.33ರಷ್ಟು ಮೀಸಲಾತಿ ಸಿಗುವಂತೆ ಸಂಸತ್ತಿನಲ್ಲಿ 1996ರಿಂದ ಬಾಕಿ ಇರುವ ಮಸೂದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ರಾಜ್ಯ ಸರಕಾರಿ ನೌಕರರ ಸಂಘ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಂಸತ್ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಅದು ಅಂಗೀಕಾರವಾಗುತ್ತಿಲ್ಲ ಎಂದ ಅವರು, ಮಹಿಳಾ ಮೀಸಲಾತಿಯನ್ನು ಪ್ರಬಲವಾಗಿ ವಿರೋಧಿಸಿರುವ ಯೋಗಿ ಆದಿತ್ಯನಾಥ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ ಎನ್ನುವ ಮೂಲಕ ಬಿಜೆಪಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಯಾವ ಸಮಾಜದಲ್ಲಿ ಮಹಿಳೆಯರು ಶೋಷಣೆಯಿಂದ ಮುಕ್ತರಾಗುವುದಿಲ್ಲವೋ ಅಂತಹ ಸಮಾಜವನ್ನು ನಾಗರಿಕ ಸಮಾಜ ಎನ್ನಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ಶೋಷಣೆಯಿಂದ ಮಹಿಳೆ ಮುಕ್ತರಾಗಬೇಕಾದರೆ ಶಿಕ್ಷಣ ಪಡೆದುಕೊಳ್ಳಬೇಕು. ಅಪಮಾನಗಳಿಗೆ ಶಿಕ್ಷಣವೇ ಮದ್ದು. ಆದ್ದರಿಂದ ಶಿಕ್ಷಣವನ್ನು ಕಡೆಗಣಿಸಬಾರದು ಎಂದು ಮಹಿಳೆಯರಲ್ಲಿ ಮನವಿ ಮಾಡಿದರು.
ಪ್ರಸ್ತುತ ಮಹಿಳೆಯರೂ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದರಿಂದ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧೆ ಒಡ್ಡುತ್ತಿ¨ªಾರೆ. ಆದರೆ, ಅದು ಸಾಲದು. ಎಲ್ಲಾ ಮಹಿಳೆಯರೂ ಸುಶಿಕ್ಷಿತರಾಗಬೇಕು. ಶಿಕ್ಷಣದ ಜತೆಗೆ ಸಮಾಜಕ್ಕೆ ಪೂರಕವಾಗುವ ವಿಷಯಗಳನ್ನೂ ಅರಿತುಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಬಿ.ಪಿ.ಮಂಜೇಗೌಡ ಮಾತನಾಡಿ, ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಏಳನೇ ವೇತನ ಆಯೋಗ ರಚಿಸುವ ಘೋಷಣೆ ಮಾಡಿರುವ ಮುಖ್ಯಮಂತ್ರಿ ಕಾರ್ಯ ಸ್ವಾಗತಾರ್ಹ. ಆದರೆ, ವೇತನ ಆಯೋಗ ಅಂತಿಮ ವರದಿ ನೀಡುವ ಮೊದಲೇ ನೌಕರರಿಗೆ ಶೇ.30ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಬೇಕು. ಖಾಲಿ ಇರುವ ಹು¨ªೆಗಳನ್ನು ಭರ್ತಿ ಮಾಡಬೇಕೆಂದು ಮನವಿ ಮಾಡಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕ ಪ್ರೌಢಶಿಕ್ಷಣ ಪರೀûಾ ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ (ಆಡಳಿತ), ಜಗದಾಳೆ ವೈಜ್ಞಾನಿಕ ಸಂಶೋಧನಾ ಫೌಂಡೇಶನ್‌ನ ಉಪಾಧ್ಯಕ್ಷೆ ಪ್ರೇಮಾ ಮಂಜುನಾಥ್ (ಮಹಿಳಾ ಅಭಿವೃದ್ಧಿ), ಸಮಾಜ ಸೇವಕಿ ರಾಧಾ ದಾಸ್ (ಮಹಿಳಾ ಅಭಿವೃದ್ಧಿ), ಕೃಷಿಮತ್ತು ಸಮಾಜ ಸೇವಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರೇಮಾ ತಿಮ್ಮನಗೌಡರ್, ಛಾಯಾಚಿತ್ರ ಕ್ಷೇತ್ರದಲ್ಲಿ ಅಶ್ವಿನಿ ನಿತಿನ್ ಅವರನ್ನು ಸನ್ಮಾನಿಸಲಾಯಿತು.
ಮೇಯರ್ ಜಿ.ಪದ್ಮಾವತಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ನೌಕರರ ಸಂಘದ ಗೌರವಾಧ್ಯಕ್ಷ ಎಚ್.ಕೆ.ರಾಮು, ಖಜಾಂಚಿ ಯೋಗಾನಂದ, ಪ್ರಧಾನ ಕಾರ್ಯದರ್ಶಿ ಮಾಲತೇಶ ವೈ.ಉಣ್ಣಿಗೆರೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.