ತಂಬಾಕು ದುಷ್ಪರಿಣಾಮ ಅರಿವಿಗೆ ಕಾರ್ಯಕ್ರಮ

Team Udayavani, Jun 2, 2019, 3:04 AM IST

tambaku

ಬೆಂಗಳೂರು: ತಂಬಾಕಿನ ದುಷ್ಪರಿಣಾಮ ಕುರಿತು ಕೃಷಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು, ವಿವಿಧ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ರಾಜೇಂದ್ರ ಪ್ರಸಾದ್‌ ತಿಳಿಸಿದ್ದಾರೆ.

ತಂಬಾಕು ರಹಿತ ದಿನದ ಹಿನ್ನೆಲೆ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಬಾಯಿ, ಶ್ವಾಸಕೋಶ ಕ್ಯಾನ್ಸರ್‌ ಬಗೆಗೆ ಸರಿಯಾದ ಮಾಹಿತಿ ಇರುವುದಿಲ್ಲ. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಕೃಷಿಕರಿಗೆ ಮನದಟ್ಟು ಮಾಡಿಕೊಡಬೇಕಾದ ತುರ್ತು ಅಗತ್ಯವಿದೆ.

ಕೃಷಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕೃಷಿ ವಿವಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಒಳಗೊಂಡ ಮಾದರಿ ತರಬೇತಿ ಶಿಬಿರ ಏರ್ಪಡಿಸಲಾಗುವುದು ಎಂದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ರಾಜ್ಯದಲ್ಲಿ ವರ್ಷಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಮೃತಪಡುತ್ತಿದ್ದಾರೆ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯನ್ನು ನಿಷೇಧ ಮಾಡಬೇಕು.

ಈ ಸಂಬಂಧದ ಕಾಯ್ದೆಗೆ ತಿದ್ದುಪಡಿ ತಂದು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ವಿಧಿಸುತ್ತಿರುವ ದಂಡ ಶುಲ್ಕವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು. ಐಎಎಸ್‌ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಮಾತನಾಡಿ, ಕರ್ನಾಟಕದಲ್ಲಿ 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಬೆಳೆಯುತ್ತಾರೆ.

ಮೈಸೂರು, ಹಾಸನ, ಮಡಿಕೇರಿಯಲ್ಲಿ ಅಧಿಕ ತಂಬಾಕು ಬೆಳೆಗಾರರಿದ್ದು, ಇವರನ್ನು ಪರ್ಯಾಯ ಬೆಳೆಗಳನ್ನು ಬೆಳೆಯುವುದರ ಕಡೆಗೆ ರಾಜ್ಯ ಸರಕಾರ ಹಾಗೂ ಕೃಷಿ ಇಲಾಖೆ ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಾರಂಪರಿಕ ಬೆಳೆಯಿಂದ ವೈಜ್ಞಾನಿಕ ಬೆಳೆಯತ್ತ ರೈತರನ್ನು ಮಾರ್ಪಾಡು ಮಾಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಶಿವಮೊಗ್ಗವನ್ನು ತಂಬಾಕು ರಹಿತ ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದರು. ಸಮಾರಂಭದಲ್ಲಿ ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ, ಐಎಫ್ಎಸ್‌ ಅಧಿಕಾರಿ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.