ತಂಬಾಕು ಸೇವನೆ ನಿಯಂತ್ರಣವೇ ಸವಾಲು


Team Udayavani, Apr 12, 2018, 1:25 PM IST

blore-3.jpg

ಬೆಂಗಳೂರು: ತಂಬಾಕು ಸೇವನೆ ನಿಯಂತ್ರಣಕ್ಕೆ ದೇಶದಲ್ಲಿ ಸಮಗ್ರ ಕಾನೂನು ವ್ಯವಸ್ಥೆ ಇದರೂ, ಸಾರ್ವಜನಿಕವಾಗಿ ತಂಬಾಕು ಸೇವನೆ ತಡೆಯುವುದೇ ದೊಡ್ಡ ಸವಾಲಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಹಕ್ಕುಗಳ ಆಯೋಗದ ಅಧ್ಯಕ್ಷೆ ಡಾ.ಕೃಪಾ ಅಮರ್‌ ಆಳ್ವಾ ಹೇಳಿದ್ದಾರೆ.

ತಂಬಾಕು ದುಷ್ಪರಿಣಾಮಗಳ ಕುರಿತು ರಾಜ್ಯಮಟ್ಟದ ಲೋಗೋ ರಚನೆ ಸ್ಪರ್ಧೆಯ ವಿಜೇತರಿಗೆ ರಾಜ್ಯ ಮಕ್ಕಳ ಹುಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ಬುಧವಾರ ಬಹುಮಾನ ವಿತರಿಸಿ ಮಾತನಾಡಿದ ಅವರು, ಮಾದಕ ವಸ್ತು ಮಾರಾಟ ಜಾಲಕ್ಕೆ ಪಂಜಾಬ್‌ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಎಲ್ಲಾ ಮಾದರಿಯ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ನಿಷೇಧಿಸುವ ಅಗತ್ಯವಿದೆ ಎಂದು ತಿಳಿಸಿದರು.

ತಂಬಾಕು ಸೇವನೆ ನಿಯಂತ್ರಣಕ್ಕೆ ಆಯೋಗದಿಂದ ಹಲವು ಕಾರ್ಯಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿಯೇ ಪ್ರತ್ಯೇಕ ಕಾನೂನು ಇದ್ದರೂ ಯುವ ಜನತೆ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ತಂಬಾಕು ಸೇವನೆ ನಿಷೇಧಕ್ಕೆ ಕಟ್ಟು ನಿಟ್ಟಿನ ಕ್ರಮ ಅಗತ್ಯ ಎಂದು ಹೇಳಿದರು. 

ತಂಬಾಕು ನಿಯಂತ್ರಣ ಉನ್ನತ್ತ ಮಟ್ಟದ ಸಮಿತಿಯ ಸದಸ್ಯ ಡಾ.ವಿಶಾಲ್‌ರಾವ್‌ ಮಾತನಾಡಿ, ರಾಜ್ಯದಲ್ಲಿ ಇ-ಸಿಗರೇಟ್‌ಗಳ ಮಾರಾಟಕ್ಕೆ ನಿಷೇಧವಿದ್ದರೂ ಅಂಗಡಿಗಳಲ್ಲಿ ಸಲೀಸಾಗಿ ಸಿಗುತ್ತಿದೆ. ಇದರಿಂದ ಕ್ಯಾನ್ಸರ್‌ ಪೀಡಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಲಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ರಾಜ್ಯದ ಶೇ.15ರಷ್ಟು ಹದಿಹರೆಯದ ಮಕ್ಕಳು ತಂಬಾಕು ವ್ಯಸನಿಗಳಾಗಿದ್ದಾರೆ ಎಂದರು.

ಸಾಗರದ ಪವನ್‌ ಕುಮಾರ್‌ ಪ್ರಥಮ ತಂಬಾಕು ದುಷ್ಪರಿಣಾಮಗಳ ಕುರಿತು ಏರ್ಪಡಿ ಸಲಾಗಿದ್ದ ರಾಜ್ಯಮಟ್ಟದ ಲೋಗೋ ರಚನೆ ಸ್ಪರ್ಧೆಯಲ್ಲಿ ಸಾಗರದ ರಾಮಕೃಷ್ಣ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಎಸ್‌.ಪಿ ಪವನ್‌ಕುಮಾರ್‌ ಪ್ರಥಮ (10 ಸಾವಿರ ರೂ.), ಬಾಗಲಕೋಟೆಯ ರಬಕವಿಯ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ನಿಖೀತಾ ಸಿಕ್ಕಲಗಾರ 2ನೇ ಬಹುಮಾನ(8 ಸಾವಿರ ರೂ.)ಕ್ಕೆ ಭಾಜನರಾಗಿದ್ದಾರೆ. ದಾವಣಗೆರೆಯ ಜಯದೇವ ಮುರಗರಾ ಜೇಂದ್ರ ಪ್ರೌಢ ಶಾಲೆಯ ವಿದ್ಯಾರ್ಥಿ ಎಲ್‌.ಸೋಮಶೇಖರ್‌ಗೆ 3ನೇ(2500 ರೂ.) ಹಾಗೂ ದೊಡ್ಡಬಳ್ಳಾಪುರದ ಕಾರ್ಮೆಲ್‌ ಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾವನ ಚೌಧರಿ 4ನೇ ಬಹುಮಾನ (2500 ರೂ.) ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.